1.75 ಲಕ್ಷ ಮನೆ ಫಲಾನುಭವಿಗಳಿಗೆ ಹಸ್ತಾಂತರಿಸಿದ ಪ್ರಧಾನಿ ಮೋದಿ

12-09-20 01:51 pm       Headline Karnataka News Network   ದೇಶ - ವಿದೇಶ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ 1.75 ಲಕ್ಷ ಮನೆಗಳನ್ನು ಹಸ್ತಾಂತರಿಸಿದ ಪ್ರಧಾನಿ ನರೇಂದ್ರ ಮೋದಿ.

ಭೋಪಾಲ್, ಸೆಪ್ಟೆಂಬರ್ 11: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ 1.75 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಘರ್ ಪ್ರವೇಶ್ ಹೆಸರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ಫಲಾನುಭವಿಗಳಿಗೆ ಕೀ ನೀಡುವ ಮೂಲಕ ಶುಭ ಹಾರೈಸಿದರು. ಕೂಲಿ ಕಾರ್ಮಿಕರಿಗಾಗಿ ಈ ಮನೆಗಳನ್ನು ನಿರ್ಮಿಸಲಾಗಿದೆ. ಮಧ್ಯಪ್ರದೇಶ ರಾಜ್ಯ ಒಂದರಲ್ಲೇ ಸ್ವಂತ ನಿವಾಸ ಇಲ್ಲದ 17 ಲಕ್ಷ ಬಡ ಕುಟುಂಬಗಳಿಗೆ ಈ ಯೋಜನೆಯ ಲಾಭ ಸಿಕ್ಕಿದೆ.

ಯೋಜನೆಯಡಿ ಪ್ರತಿ ಫಲಾನುಭವಿಗೆ 1.20 ಲಕ್ಷ ರೂಪಾಯಿ ಅನುದಾನ ಸಿಗುತ್ತದೆ. ಇದರಲ್ಲಿ ಶೇ. 60 ಕೇಂದ್ರದಿಂದ ಮತ್ತು ಶೇ.40 ರಾಜ್ಯದಿಂದ ಹಣ ನೀಡಲಾಗುತ್ತದೆ. ಯೋಜನೆಯಡಿ ದೇಶಾದ್ಯಂತ 2022ರ ವೇಳೆಗೆ 2.95 ಕೋಟಿ ಮನೆ ನಿರ್ಮಿಸುವ ಗುರಿಯನ್ನು ನಿಗದಿಪಡಿಸಲಾಗಿದೆ.

Join our WhatsApp group for latest news updates