ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸರಕಾರ ಪತನ ; ಕೇಂದ್ರ ಸಚಿವ ನಾರಾಯಣ ರಾಣೆ

26-11-21 07:24 pm       HK news Desk   ದೇಶ - ವಿದೇಶ

ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸರಕಾರ ಬದಲಾವಣೆ ಆಗಲಿದೆ. ಮಾರ್ಚ್ ತಿಂಗಳಲ್ಲಿ ಬದಲಾವಣೆಯನ್ನು ಕಾಣಲಿದ್ದೇವೆ.

ಜೈಪುರ, ನ.26: ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸರಕಾರ ಬದಲಾವಣೆ ಆಗಲಿದೆ. ಮಾರ್ಚ್ ತಿಂಗಳಲ್ಲಿ ಬದಲಾವಣೆಯನ್ನು ಕಾಣಲಿದ್ದೇವೆ. ಸರಕಾರವನ್ನು ಉರುಳಿಸುವುದು ಅಥವಾ ಹೊಸ ಸರಕಾರವನ್ನು ಅಸ್ತಿತ್ವಕ್ಕೆ ತರುವುದು. ಏನಾದ್ರೂ ಒಂದನ್ನು ಮಾಡುತ್ತೇವೆ... ಹೀಗೆಂದು ಕೇಂದ್ರ ಸಚಿವ ನಾರಾಯಣ ರಾಣೆ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ರಾಜಸ್ಥಾನಕ್ಕೆ ಎರಡು ದಿನಗಳ ಭೇಟಿಗಾಗಿ ತೆರಳಿದ್ದ ಸಂದರ್ಭದಲ್ಲಿ ನಾರಾಯಣ ರಾಣೆ ಈ ಮಾತು ಹೇಳಿದ್ದಾರೆ. ಉದ್ಧವ್ ಠಾಕ್ರೆಗೆ ಹುಷಾರಿಲ್ಲ. ನಮ್ಮ ಪಕ್ಷದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, ಠಾಕ್ರೆ ಬಗ್ಗೆ ಏನೂ ಕೇಳುವುದು ಬೇಡ ಎಂದಿದ್ದಾರೆ. ಆದರೆ ಮೂರು ಪಾರ್ಟಿಗಳ ಸರಕಾರ ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಹೆಚ್ಚು ಕಾಲ ಇರುವುದಿಲ್ಲ ಎಂದಿದ್ದಾಗಿ ನಾರಾಯಣ ರಾಣೆ ಹೇಳಿದ್ದಾರೆ.

ಉದ್ಧವ್ ಠಾಕ್ರೆ ಬೆನ್ನಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ದೀರ್ಘ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಅಲ್ಲಿನ ಸರಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಅನ್ನೋ ಮಾತು ಕೇಳಿಬರುತ್ತಿದೆ. ಈ ನಡುವೆ, ಕೇಂದ್ರ ಸಚಿವ ನಾರಾಯಣ ರಾಣೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ತರುವ ಬಗ್ಗೆ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಸರಕಾರ ಅಧಿಕಾರದಲ್ಲಿದೆ.

ಈ ಹಿಂದೆ ಶಿವಸೇನೆ- ಬಿಜೆಪಿ ಮೈತ್ರಿ ಸರಕಾರವೇ ಅಸ್ತಿತ್ವದಲ್ಲಿತ್ತು. 2019ರ ಚುನಾವಣೆ ಬಳಿಕ ಶಿವಸೇನೆ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿ ಜೊತೆಗೆ ಬಿಕ್ಕಟ್ಟು ಏರ್ಪಟ್ಟು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು.

Even for someone not known to be on the best of terms with Maharashtra Chief Minister Uddhav Thackeray (who presided over his arrest as recently as August), Union Minister Narayan Rane casually dropped a bomb on Friday, saying that by March - two years before the next elections - the BJP will take over the state's government.