ಬ್ರೇಕಿಂಗ್ ನ್ಯೂಸ್
07-12-21 09:58 pm HK Desk news ದೇಶ - ವಿದೇಶ
ಲಖ್ನೋ, ಡಿ.7 : ಖುರಾನ್ ಬಗ್ಗೆ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಿ ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ದಿಢೀರ್ ಬೆಳವಣಿಗೆಯಲ್ಲಿ ಇಸ್ಲಾಮನ್ನೇ ತೊರೆದು ಹಿಂದು ಧರ್ಮವನ್ನು ಸೇರಿದ್ದಾರೆ. ವಾಸಿಂ ರಿಜ್ವಿ ನಡೆ ಉತ್ತರ ಪ್ರದೇಶ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ.
ಘಾಜಿಯಾಬಾದ್ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಮುಖ್ಯ ಅರ್ಚಕ ಸ್ವಾಮಿ ಯರಿ ನರ್ಸಿಂಗಾನಂದ ಅವರ ನೇತೃತ್ವದಲ್ಲಿ ರಿಜ್ವಿ ಅವರು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ. ಹಿಂದುವಾಗಿ ಮತಾಂತರಗೊಂಡ ನಂತರ ರಿಜ್ವಿ ಅವರ ಹೆಸರನ್ನು ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿ ಎಂದು ಮರು ನಾಮಕರಣ ಮಾಡಲಾಗಿದೆ.
ಮುಸ್ಲಿಂ ವ್ಯಕ್ತಿಯೊಬ್ಬರು ಹೀಗೆ ದಿಢೀರ್ ಆಗಿ ಹಿಂದುವಾಗಲು ಕಾರಣವಾಗಿದ್ದು ಖುರಾನ್ ಕೃತಿಯಲ್ಲಿರುವ ಕೆಲವು ಅಂಶಗಳ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು. ಖುರಾನಿನ ಕೆಲವು ಭಾಗಗಳು ಹಿಂಸಾಚಾರವನ್ನು ಬೋಧಿಸುತ್ತವೆ. ಹಾಗಾಗಿ ಅವುಗಳನ್ನು ಪುಸ್ತಕದಿಂದ ತೆಗೆದು ಹಾಕಬೇಕು ಎಂದು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್, ಆ ಬಗ್ಗೆ ನಾವು ನಿರ್ಧಾರಕ್ಕೆ ಬರಲು ಸಾಧ್ಯವಾಗಲ್ಲ ಎಂದು ಅರ್ಜಿಯನ್ನು ವಜಾ ಮಾಡಿತ್ತು.
ಇದಾದ ಮೇಲೆ ರಿಜ್ವಿ ಅವರಿಗೆ ಮುಸ್ಲಿಂ ಸಮುದಾಯದ ಕೆಲವು ಮೂಲಭೂತವಾದಿಗಳು ಬಹಿರಂಗ ಬೆದರಿಕೆ ಹಾಕಿದ್ದರು. ಇವರನ್ನು ಹತ್ಯೆ ಮಾಡಿದವರಿಗೆ 5 ಲಕ್ಷ ಬಹುಮಾನ ಘೋಷಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ನಂತರ ಈ ಮೊತ್ತವನ್ನು 10 ಲಕ್ಷ, 20 ಲಕ್ಷಕ್ಕೆ ಏರಿಸಿ ಕೊನೆಗೆ ಒಂದು ಕೋಟಿಗೆ ಏರಿಸಲಾಗಿತ್ತು. ಈ ರೀತಿಯ ಬೆಳವಣಿಗೆಯಿಂದ ನೊಂದ ರಿಜ್ವಿ, ಇಸ್ಲಾಂ ಧರ್ಮವೇ ಬೇಡ ಎಂದು ಹಿಂದು ಧರ್ಮವನ್ನು ಸೇರಿದ್ದಾರೆ.

ಉತ್ತರ ಪ್ರದೇಶದ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ ವಕ್ಫ್ ಬೋರ್ಡ್‌ನ ಅಧ್ಯಕ್ಷರಾಗಿದ್ದ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರವಾಗಿರುವುದು ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ. ಈ ನಡುವೆ ರಿಜ್ವಿಯವರು ಸನಾತನ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ಬಿಜೆಪಿ ಸ್ವಾಗತಿಸಿದೆ.
The former chairman of Uttar Pradesh Shia Waqf Board, Wasim Rizvi, converted to Hinduism (also known as Sanatan Dharma) on Monday. He offered milk on the Shiva Linga installed at Dasna Devi temple as part of the ritual.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm