ಬ್ರೇಕಿಂಗ್ ನ್ಯೂಸ್
15-12-21 01:47 pm HK Desk news ದೇಶ - ವಿದೇಶ
ನವದೆಹಲಿ, ಡಿ. 15 : ಹೆಲಿಕಾಪ್ಟರ್ ದುರಂತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡಿನ ಊಟಿ ಬಳಿಯ ಕುನ್ನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಈ ಬಗ್ಗೆ ಭಾರತೀಯ ವಾಯುಪಡೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.
ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಲಿಕಾಪ್ಟರ್ ಅವಘಡದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
‘ವರುಣ್ ಸಿಂಗ್ ಅವರ ದೇಹದಲ್ಲಿ 70 ಶೇಕಡಾ ಪ್ರಮಾಣ ಸುಟ್ಟ ಗಾಯಗಳಾಗಿದ್ದವು. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೋ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್‌ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್‌ನಲ್ಲಿ ವರುಣ್ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Group Captain Varun Singh- the lone survivor in the IAF helicopter crash that claimed lives of 13 people including CDS General Rawat passed away on Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm