ಬ್ರೇಕಿಂಗ್ ನ್ಯೂಸ್
27-12-21 06:14 pm HK Desk news ದೇಶ - ವಿದೇಶ
ನವದೆಹಲಿ, ಡಿ 27: ಕೊರೊನಾ ವೈರಸ್‌ನ ರೂಪಾಂತರಿ ಓಮೈಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಬೃಹತ್ ಚುನಾವಣಾ ಸಮಾವೇಶಗಳನ್ನು ನಡೆಸುತ್ತಿರುವುದರ ವಿರುದ್ಧ ಸಂಸದ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
'ಈ ಕುರಿತು ಟ್ವೀಟ್ ಮಾಡಿರುವ ವರುಣ್ ಗಾಂಧಿ, ರಾತ್ರಿ ವೇಳೆಯಲ್ಲಿ ಕರ್ಫ್ಯೂ ಜಾರಿ ಮಾಡುವುದು ಮತ್ತು ಹಗಲು ರಾಜಕೀಯ ಸಮಾವೇಶಕ್ಕಾಗಿ ಲಕ್ಷಾಂತರ ಜನರನ್ನು ಒಗ್ಗೂಡಿಸುವುದು. ಇದು ಜನಸಾಮಾನ್ಯರಿಗೆ ಅರ್ಥವಾಗುತ್ತಿಲ್ಲ' ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಸೀಮಿತ ಆರೋಗ್ಯ ವ್ಯವಸ್ಥೆಯನ್ನು ಗಮನಿಸಿದರೆ ಭಯಾನಕವಾಗಿ ಓಮೈಕ್ರಾನ್ ಹರಡುವುದನ್ನು ತಡೆಯುವುದೇ ಅಥವಾ ಚುನಾವಣಾ ಬಲವನ್ನು ತೋರಿಸುವುದಕ್ಕೆ ಆದ್ಯತೆ ನೀಡುವುದೇ ಎಂದು ಪ್ರಾಮಾಣಿಕವಾಗಿ ನಿರ್ಧರಿಸಬೇಕಿದೆ' ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ದೌಡಾಯಿಸಿದ್ದು, ಜನ ವಿಶ್ವಾಸ ಯಾತ್ರೆ ಸೇರಿದಂತೆ ಹಲವು ಬಹಿರಂಗ ಸಮಾವೇಶಗಳಲ್ಲಿ ಭಾಗವಹಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಡಿಸೆಂಬರ್ 25ರಿಂದ ರಾತ್ರಿ ಕರ್ಫ್ಯೂ ಹೇರಲಾಗಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮದೇ ಪಕ್ಷ ಆಯೋಜಿಸುತ್ತಿರುವ ರಾಜಕೀಯ ಸಮಾವೇಶಗಳ ವಿರುದ್ಧ ವರುಣ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
रात में कर्फ्यू लगाना और दिन में रैलियों में लाखों लोगों को बुलाना – यह सामान्य जनमानस की समझ से परे है।
— Varun Gandhi (@varungandhi80) December 27, 2021
उत्तर प्रदेश की सीमित स्वास्थ्य व्यवस्थाओं के मद्देनजर हमें इमानदारी से यह तय करना पड़ेगा कि हमारी प्राथमिकता भयावह ओमीक्रोन के प्रसार को रोकना है अथवा चुनावी शक्ति प्रदर्शन।
Bharatiya Janata Party MP Varun Gandhi on Monday cited a Centre's note to criticise the decision of several states, including Uttar Pradesh, to impose night curfew to curb COVID.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm