ಬ್ರೇಕಿಂಗ್ ನ್ಯೂಸ್
31-12-21 11:58 am HK Desk news ದೇಶ - ವಿದೇಶ
ಮುಂಬೈ, ಡಿ 31: ಭಾರತದಲ್ಲಿ ಮೊದಲ ಓಮಿಕ್ರಾನ್ ಸಾವಿನ ಪ್ರಕರಣ ವರದಿಯಾಗಿದೆ. ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ತಗುಲಿದ 52 ವರ್ಷದ ವ್ಯಕ್ತಿಯೊಬ್ಬರು ತೀವ್ರ ಹೃದಯಾಘಾತದಿಂದ ಪ್ರಾಣ ಬಿಟ್ಟಿರುವ ಘಟನೆ ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ದಲ್ಲಿ ನಡೆದಿದೆ.
ಓಮಿಕ್ರಾನ್ ಸೋಂಕು ತಗುಲಿದ ವ್ಯಕ್ತಿಯು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಓಮಿಕ್ರಾನ್ ಸೋಂಕು ಕಾರಣ ಎಂದು ಪರಿಗಣಿಸದಂತೆ ಹೇಳಲಾಗುತ್ತಿದೆ. ಇದರ ಹೊರತಾಗಿ ರಾಜ್ಯದಲ್ಲಿ ಒಂದೇ ದಿನ ಅತಿಹೆಚ್ಚು ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳಲ್ಲೇ 198 ಮಂದಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ 450ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 5,368 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಪೈಕಿ ಸೋಂಕಿತರ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆೊಳಪಡಿಸಿದ ಸಂದರ್ಭದಲ್ಲಿ 198 ಸೋಂಕಿತರಲ್ಲಿ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಅತಿಹೆಚ್ಚು ಹರಡುವಿಕೆ ವೇಗವನ್ನು ಹೊಂದಿದೆ ಎಂಬ ತಜ್ಞರ ಎಚ್ಚರಿಕೆ ಸತ್ಯವಾಗುತ್ತಿದೆ. ರಾಜ್ಯದಲ್ಲಿ ಬುಧವಾರಕ್ಕಿಂತ ಗುರುವಾರ ಪತ್ತೆಯಾದ ಸೋಂಕಿತ ಪ್ರಕರಣಗಳಲ್ಲಿ ಶೇ.37ರಷ್ಟು ಏರಿಕೆಯಾಗಿದೆ.
ಮುಂಬೈನಲ್ಲಿ ಐದು ಪಟ್ಟು ಕೊವಿಡ್-19 ಪ್ರಕರಣಗಳ ಹೆಚ್ಚಳ;
ವಾಣಿಜ್ಯನಗರಿ ಮುಂಬೈನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ವಾರದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ಶುಕ್ರವಾರ ನಗರದಲ್ಲಿ 683 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದವು, ಆದರೆ ಈ ಶುಕ್ರವಾರವೊಂದೇ ದಿನದಲ್ಲಿ 3,671 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಒಂದೇ ವಾರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಐದು ಪಟ್ಟು ಹೆಚ್ಚಳವಾಗಿದೆ.
India has recorded its 'first Omicron death' after a 52-year-old man who had tested positive for the new variant of coronavirus died of a cardiac arrest in the Pimpri district of Maharashtra. The state, however, has attributed the demise to his underlying medical situation and chose not to declare it the first casualty of the variant.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm