ಬ್ರೇಕಿಂಗ್ ನ್ಯೂಸ್
11-01-22 04:23 pm HK Desk news ದೇಶ - ವಿದೇಶ
ಲಂಡನ್, ಜ. 11 : ಉಡುಪಿ ಮೂಲದ ದುಬೈನ ಕೋಟ್ಯಾಧಿಪತಿ ಉದ್ಯಮಿ ಬಿ.ಆರ್. ಶೆಟ್ಟಿ ಅವರಿಗೆ ಮತ್ತೆ ಭಾರೀ ಹಿನ್ನಡೆಯಾಗಿದೆ. ವಿದೇಶಿ ವಿನಿಮಯ ವ್ಯವಹಾರ ವಹಿವಾಟಿನ ಭಾಗವಾಗಿ ಲಂಡನ್ ಬ್ಯಾಂಕ್ ಬಾರ್ಕ್ಲೇಸ್ ಗೆ ಪೂರ್ಣ ಮೊತ್ತ 131 ಮಿಲಿಯನ್ ಡಾಲರ್ ಪಾವತಿಸಬೇಕೆಂದು ಲಂಡನ್ ಕೋರ್ಟ್ ಆದೇಶ ಹೊರಡಿಸಿದೆ. 131 ಮಿಲಿಯನ್ ಅಂದರೆ ಭಾರತೀಯ ಕರೆನ್ಸಿಯಲ್ಲಿ ಅಂದಾಜು ರೂ. 9,68,27,99,500 ಪಾವತಿಸಬೇಕಿದೆ.
2020 ರಲ್ಲಿ ಲಂಡನ್ ಬ್ಯಾಂಕ್ ಬಾರ್ಕ್ಲೇಸ್ ವಿದೇಶಿ ವಿನಿಮಯ ವ್ಯಾಪಾರ ವಹಿವಾಟು ಒಪ್ಪಂದದ ಭಾಗವಾಗಿ ಬಿ.ಆರ್ ಶೆಟ್ಟಿ ಸದರಿ ಬ್ಯಾಂಕ್ ಗೆ ದೊಡ್ಡ ಮೊತ್ತದ ಹಣ ಪಾವತಿಸಬೇಕಾಗಿತ್ತು. ಇದೇ ವಿಷಯವಾಗಿ ದುಬೈ ಕೋರ್ಟ್ ಬಿ.ಆರ್. ಶೆಟ್ಟಿ ವಿರುದ್ಧ ತೀರ್ಪು ನೀಡಿತ್ತು. ದುಬೈ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅವರು ಲಂಡನ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ಡಿಸೆಂಬರ್‌ನಲ್ಲಿ ಬ್ರಿಟನ್ ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಬಿ.ಆರ್.ಶೆಟ್ಟಿ ಪರ ವಕೀಲರು ತಮ್ಮ ಕಕ್ಷಿದಾರರು ಆರ್ಥಿಕ ಸಂಕಷ್ಟದಲ್ಲಿದ್ದು, ತೀರ್ಪನ್ನು ಮುಂದೂಡಬೇಕು ಎಂದು ಕೋರಿದ್ದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು 2022ರ ಜನವರಿ 10ಕ್ಕೆ ಮುಂದೂಡಿತ್ತು.
ಜ.10ರಂದು ಪ್ರಕರಣದ ವಿಚಾರಣೆ ನಡೆಸಿದ ಲಂಡನ್ ಕೋರ್ಟ್ ಬಿ.ಆರ್. ಶೆಟ್ಟಿ ಅವರ ಮನವಿಯನ್ನು ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ಬಿ.ಆರ್.ಶೆಟ್ಟಿ ಅವರ ಆಸ್ತಿಗಳನ್ನು ಈಗಾಗಲೇ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ತೀರ್ಪನ್ನು ಮುಂದೂಡುವಂತೆ ಮತ್ತೊಮ್ಮೆ ನ್ಯಾಯಾಲಯವನ್ನು ಶೆಟ್ಟಿ ಪರ ವಕೀಲರು ಕೋರಿದರು. ಆದರೆ ಲಂಡನ್ ಕೋರ್ಟ್, ಬಿ.ಆರ್ ಶೆಟ್ಟಿ ಬ್ಯಾಂಕ್ ಬಾರ್ಕ್ಲೇಸ್‌ಗೆ 131 ಮಿಲಿಯನ್ ಡಾಲರ್ ಮೊತ್ತ ಪಾವತಿಸಲು ಆದೇಶಿಸಿದೆ. ಜೊತೆಗೆ ಭಾರತ ಸೇರಿದಂತೆ ಇತರ ದೇಶಗಳು, ಲಂಡನ್ ನಲ್ಲಿರುವ ಬಿ.ಆರ್.ಶೆಟ್ಟಿ ಅವರ ಆಸ್ತಿ ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ಯಾಂಕ್ ಪ್ರತಿನಿಧಿಗಳು ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದ್ದಾರೆ.
ಒಂದೇ ವರ್ಷದಲ್ಲಿ ಬಿ.ಆರ್. ಶೆಟ್ಟಿ ಸಾಮ್ರಾಜ್ಯ ಕುಸಿತ !
1973ರಲ್ಲಿ ಉಡುಪಿಯಿಂದ ಯುಎಇಗೆ ತೆರಳಿ ಅಲ್ಲಿ ಫಾರ್ಮಸಿಯಲ್ಲಿ ಕ್ಲಿನಿಕಲ್ ಪದವಿ ಪಡೆದು ಫಾರ್ಮಾ ಸಾಮ್ರಾಜ್ಯ ಕಟ್ಟಿದ್ದ ಬಿ.ಆರ್. ಶೆಟ್ಟಿ ಆಸ್ತಿ ಕುಸಿದು ಹೋಗಿದ್ದೇ ಅಚ್ಚರಿಯ ಕಥಾನಕ. 1975 ರಲ್ಲಿ ಅಬುಧಾಬಿಯಲ್ಲಿ NMC ಹೆಲ್ತ್ ಹೆಸರಿನಲ್ಲಿ ಆಸ್ಪತ್ರೆಗಳ ನೆಟ್ ವರ್ಕ್ ಸ್ಥಾಪಿಸಿದರು. ಮುಂದಿನ ದಿನಗಳಲ್ಲಿ ಶತಕೋಟಿ ಡಾಲರ್ ಆಸ್ತಿ ಸಂಪಾದಿಸಿದ್ದರು. 2019 ರಲ್ಲಿ ಫೋರ್ಬ್ಸ್ ಪಟ್ಟಿಯಲ್ಲಿ ಭಾರತದ 42ನೇ ಶ್ರೀಮಂತ ವ್ಯಕ್ತಿಯಾಗಿದ್ದ ಬಿ.ಆರ್. ಶೆಟ್ಟಿ ಅಬುಧಾಬಿಯ ಐದನೇ ಶ್ರೀಮಂತ ಭಾರತೀಯರಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಪ್ರಸಕ್ತ 19 ದೇಶಗಳಲ್ಲಿ ಅವರಿಗೆ ಸೇರಿದ 194 ಆಸ್ಪತ್ರೆಗಳಿದ್ದು ಲಂಡನ್ ನ್ಯಾಯಾಲಯ ಎಲ್ಲ ಕಡೆಯ ಆಸ್ತಿ ಮಾರಿ ಬ್ಯಾಂಕ್ ಸಾಲ ಪಡೆದುಕೊಳ್ಳುವಂತೆ ತೀರ್ಪಿನಲ್ಲಿ ಹೇಳಿದೆ.
London: UK’s Barclays Plc won a legal fight to enforce an award of around $131 million against the founder of NMC Health plc. The lender turned to a London court after a Dubai judge ordered Bavaguthu Raghuram Shetty to pay the money after his foreign exchange business failed to meet a transaction agreement with Barclays in 2020. Shetty's lawyers said at a December hearing in the UK that he is "financially paralyzed" and asked for the suit to be adjourned so he could get proper legal representation. A London judge rejected that application.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm