ಬ್ರೇಕಿಂಗ್ ನ್ಯೂಸ್
11-01-22 09:55 pm HK Desk news ದೇಶ - ವಿದೇಶ
ಲಕ್ನೋ, ಜ.11 : ಉತ್ತರ ಪ್ರದೇಶದಲ್ಲಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಸರಕಾರದಲ್ಲಿ ಹಿಂದುಳಿದ ವರ್ಗದ ಸಚಿವರೊಬ್ಬರು ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಎಸ್ಸಿ ಮೋರ್ಚಾದಲ್ಲಿ ಗುರುತಿಸಿದ್ದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಸಮಾಜವಾದಿ ಪಾರ್ಟಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಾರ್ಟಿ ನಾಯಕ ಅಖಿಲೇಶ್ ಯಾದವ್, ಸ್ವಾಮಿ ಪ್ರಸಾದ್ ಮೌರ್ಯ ನಡೆಯನ್ನು ಸ್ವಾಗತಿಸಿದ್ದಾರೆ. ಮೌರ್ಯ, ಸದ್ಯದಲ್ಲೇ ಸಮಾಜವಾದಿ ಪಾರ್ಟಿ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಸ್ವಾಮಿ ಪ್ರಸಾದ್ ಮೌರ್ಯ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ, ಬಿಜೆಪಿ ಬಿಟ್ಟು ಹೋಗುತ್ತಿದ್ದಾರೆ ಎನ್ನುವುದು ಖಚಿಚವಾಗುತ್ತಿದ್ದಂತೆ ಬಿಜೆಪಿಯಿಂದ ಇತರ ಮೂವರು ಶಾಸಕರು ರಾಜಿನಾಮೆ ನೀಡಿದ್ದಾರೆ. ರೋಶನ್ ಲಾಲ್ ವರ್ಮಾ, ಬ್ರಜೇಶ್ ಪ್ರಜಾಪತಿ, ಭಗವತಿ ಸಾಗರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದವರು. ಅವರು ಕೂಡ ಸಮಾಜವಾದಿ ಪಾರ್ಟಿ ಸೇರಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಶಾಸಕರಾದ ಮಾಧುರಿ ವರ್ಮಾ ಮತ್ತು ರಾಧಾಕೃಷ್ಣ ಶರ್ಮಾ ಬಿಜೆಪಿ ತೊರೆದಿದ್ದು, ಎಸ್ಪಿ ಸೇರ್ಪಡೆಯಾಗಿದ್ದರು. ಇನ್ನೂ ಕೆಲವು ಬಿಜೆಪಿ ಶಾಸಕರು ಪಕ್ಷ ತೊರೆಯಲಿದ್ದಾರೆ ಎನ್ನಲಾಗುತ್ತಿದೆ.
13 ಜನ ಬಿಜೆಪಿ ತೊರೆಯಲಿದ್ದಾರೆ !
ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದಂತೆ ಇತ್ತ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶದಲ್ಲಿ ಇನ್ನೂ 13 ಶಾಸಕರು ಬಿಜೆಪಿ ತೊರೆಯಲಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು ಚುನಾವಣೆಯಲ್ಲಿ ಇದರ ಫಲಿತಾಂಶ ಕಾಣಲಿದ್ದೇವೆ. ಚುನಾವಣೆಗೂ ಮುನ್ನ ಕೋಮು ಧ್ರುವೀಕರಣಕ್ಕೆ ಯತ್ನ ನಡೆದಿದೆ. ಆದರೆ, ಮತದಾರರು ಇದಕ್ಕೆ ತಕ್ಕ ಬೆಲೆ ನೀಡಲಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದಾರೆ.
ಸಮಾಜವಾದಿ ಜೊತೆ ಸೇರಿ ಎನ್ ಸಿಪಿ ಸ್ಪರ್ಧೆ ಇದಲ್ಲದೆ, ಉತ್ತರ ಪ್ರದೇಶದಲ್ಲಿ ನಾವು ಸಮಾಜವಾದಿ ಪಾರ್ಟಿ ಮತ್ತು ಇತರ ಸಣ್ಣ ಪಕ್ಷಗಳ ಜೊತೆ ಸೇರಿ ಚುನಾವಣೆ ಎದುರಿಸಲಿದ್ದೇವೆ. ಗೋವಾದಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ಜೊತೆ ಮೈತ್ರಿಗೆ ಮಾತುಕತೆ ನಡೆಸಿದ್ದೇವೆ. ನಾವು ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ ಎಂದು ಶರದ್ ಪವಾರ್ ಹೇಳಿದ್ದಾರೆ. ಮಣಿಪುರ, ಗೋವಾ, ಉತ್ತರ ಪ್ರದೇಶದಲ್ಲಿ ಎನ್ ಸಿಪಿ ಸ್ಪರ್ಧೆ ಮಾಡಲಿದೆ ಎಂದು ಪವಾರ್ ತಿಳಿಸಿದ್ದಾರೆ.
Uttar Pradesh Minister Swami Prasad Maurya resigned from the state cabinet on Tuesday afternoon and is all set to join the Samajwadi Party. Party’s chief Akhilesh Yadav welcomed the leader to SP and tweeted,”Warm welcome and greetings to the popular leader Shri Swami Prasad Maurya Ji, who fought for social justice and equality and all the other leaders.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm