ಬ್ರೇಕಿಂಗ್ ನ್ಯೂಸ್
12-01-22 10:58 pm HK Desk news ದೇಶ - ವಿದೇಶ
ಲಕ್ನೋ, ಜ.12 : ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಸಚಿವ ತಮ್ಮ ಸ್ಥಾನಕ್ಕೆ ರಾಜಿನಾಮೆ ಬಿಜೆಪಿ ಬಿಡುವ ಸುಳಿವು ನೀಡಿದ್ದಾರೆ. ಯೋಗಿ ಆದಿತ್ಯನಾಥ್ ಸರಕಾರದಲ್ಲಿ ಸಚಿವರಾಗಿದ್ದ ಧಾರಾ ಸಿಂಗ್ ಚೌಹಾಣ್ ಬುಧವಾರ ರಾಜಿನಾಮೆ ನೀಡಿದ್ದಾರೆ. 24 ಗಂಟೆಯಲ್ಲಿ ಎರಡನೇ ಸಚಿವ ರಾಜಿನಾಮೆ ನೀಡಿದ್ದು, ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ದೊಡ್ಡ ಶಾಕ್ ನೀಡಿದಂತಾಗಿದೆ.
ಜ.11ರಂದು ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ, ಸಮಾಜವಾದಿ ಪಾರ್ಟಿ ಸೇರುವ ಸುಳಿವು ನೀಡಿದ್ದರು. ಇದಕ್ಕೂ ಮುನ್ನ ಆರು ಮಂದಿ ಬಿಜೆಪಿ ಶಾಸಕರು ಕೂಡ ರಾಜಿನಾಮೆ ನೀಡಿದ್ದಾರೆ. ಧಾರಾಸಿಂಗ್, ಯೋಗಿ ಸರಕಾರದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವರಾಗಿದ್ದು, ಆಡಳಿತದಲ್ಲಿ ಹಿಂದುಳಿದ ವರ್ಗವನ್ನು ಕಡೆಗಣಿಸಲಾಗಿದೆ ಎಂದು ಹೇಳಿ ರಾಜಿನಾಮೆ ನೀಡಿದ್ದಾರೆ.
ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಈ ಬಾರಿಯೂ ಗೆಲ್ಲುವುದಕ್ಕೆ ಕಸರತ್ತು ನಡೆಸುತ್ತಿರುವಾಗಲೇ ಸಚಿವರಿಬ್ಬರು ರಾಜಿನಾಮೆ ನೀಡಿದ್ದು ದೊಡ್ಡ ಹಿನ್ನಡೆಯಾಗಿದೆ. ಮಂಗಳವಾರ ಕಾರ್ಮಿಕ ಸಚಿವರ ರಾಜಿನಾಮೆ ಬೆನ್ನಲ್ಲೇ ರೋಶನ್ ಲಾಲ್ ವರ್ಮಾ, ಬ್ರಜೇಶ್ ಪ್ರಜಾಪತಿ, ಭಗ್ವತಿ ಸಾಗರ್ ಮತ್ತು ವಿನಯ ಶಾಕ್ಯ ಎಂಬ ನಾಲ್ಕು ಬಿಜೆಪಿ ಶಾಸಕರು ರಾಜಿನಾಮೆ ನೀಡಿದ್ದರು. ಇಬ್ಬರು ಶಾಸಕರು ಈ ಹಿಂದೆಯೇ ರಾಜಿನಾಮೆ ನೀಡಿ ಎಸ್ಪಿ ಸೇರಿದ್ದರು.
ಹಿಂದುಳಿದ ವರ್ಗದ ನಾಯಕರಾಗಿರುವ ಸ್ವಾಮಿ ಪ್ರಸಾದ್ ಮೌರ್ಯ, ಉತ್ತರ ಪ್ರದೇಶದಲ್ಲಿ ಯೋಗಿ ಆಡಳಿತ ಶೈಲಿಗೆ ವಿರೋಧ ಹೊಂದಿದ್ದು, ಅದೇ ಕಾರಣಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿ ಸಿಎಂ ಯೋಗಿ ಆದಿತ್ಯನಾಥ್ ಗೋರಖ್ ಪುರ ಮತ್ತು ಅಯೋಧ್ಯೆಯಲ್ಲಿ ಎರಡು ಕಡೆ ಸ್ಪರ್ಧೆ ನಡೆಸಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಇದೇ ವೇಳೆ, ಕಾಂಗ್ರೆಸ್ ಶಾಸಕ ನರೇಶ್ ಸೈನಿ ಮತ್ತು ಸಮಾಜವಾದಿ ಪಾರ್ಟಿ ಶಾಸಕ ಹರಿ ಓಂ ಯಾದವ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಒಟ್ಟಿನಲ್ಲಿ ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ.
Uttar Pradesh minister Dara Singh Chauhan resigned from the cabinet on Wednesday. He is the second Uttar Pradesh minister to quit the post ahead of the assembly polls. A total of six MLAs have now resigned in the state.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm