ಬ್ರೇಕಿಂಗ್ ನ್ಯೂಸ್
14-01-22 05:39 pm HK Desk news ದೇಶ - ವಿದೇಶ
ನವದೆಹಲಿ, ಜ.14 : ಗಣರಾಜ್ಯೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ರಾಜಧಾನಿ ದೆಹಲಿಯಲ್ಲಿ ಅತ್ಯಾಧುನಿಕ ಐಇಡಿ ಸ್ಫೋಟಕ ಪತ್ತೆಯಾಗಿದ್ದು, ಆತಂಕ ಮೂಡಿಸಿದೆ.
ಬೆಳಗ್ಗೆ 10.20ರ ಸುಮಾರಿಗೆ ಪೂರ್ವ ದೆಹಲಿಯ ಗಾಜಿಪುರ್ ಮಾರ್ಕೆಟ್ ಪ್ರದೇಶದಲ್ಲಿ ಅನಾಥ ಬ್ಯಾಗ್ ಇರುವ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಬಂದಿತ್ತು. ಕೂಡಲೇ ಅಗ್ನಿಶಾಮಕ ಸಿಬಂದಿ ಸ್ಥಳಕ್ಕೆ ಆಗಮಿಸಿದ್ದರು. ಜೊತೆಗೆ ಎನ್ಎಸ್ ಜಿಯ ಬಾಂಬ್ ನಿಷ್ಕ್ರಿಯ ದಳ, ಭಯೋತ್ಪಾದಕ ವಿರೋಧಿ ದಳದ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು. ಕೂಡಲೇ ಸ್ಥಳದಿಂದ ಜನರನ್ನು ತೆರವು ಮಾಡಲಾಯ್ತು.
ಬಳಿಕ ಬಾಂಬ್ ನಿಷ್ಕ್ರಿಯ ತಂಡದ ಸದಸ್ಯರು ಬ್ಯಾಗ್ ಓಪನ್ ಮಾಡಿ, ಅದರಲ್ಲಿದ್ದ ಐಇಡಿ ಸ್ಫೋಟಕವನ್ನು ತೆಗೆದು ವಶಕ್ಕೆ ಪಡೆದಿದ್ದಾರೆ. ಭಾರೀ ಸಂಖ್ಯೆಯಲ್ಲಿ ಪೊಲೀಸರು ಸ್ಥಳವನ್ನು ಸುತ್ತುವರಿದಿದ್ದರು. ಭಯೋತ್ಪಾದನಾ ವಿರೋಧಿ ದಳದ ವಿಶೇಷ ತಂಡ ಈ ಬಗ್ಗೆ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದೆ.
ಜನವರಿ 26ರ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಅಲರ್ಟ್ ಇದ್ದು, ಅದರ ನಡುವೆ ವಿಚ್ಛಿದ್ರಕಾರಿ ಶಕ್ತಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿವೆ. ಇದರ ಪ್ರತೀಕವಾಗಿ ಬಾಂಬ್ ಪತ್ತೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.
Ahead of Republic day, an improvised explosive device (IED) was recovered from Ghazipur Flower Market in East Delhi on Friday, triggering panic among the people. A Fire Department Official informed that a call was received around 10.20 AM regarding an unattended bag lying at the Ghazipur flower market in the city after which they swung into action.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm