ಬ್ರೇಕಿಂಗ್ ನ್ಯೂಸ್
18-01-22 08:01 pm HK Desk news ದೇಶ - ವಿದೇಶ
ನವದೆಹಲಿ, ಜ.18 : 75ನೇ ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆಯುತ್ತಿರುವಂತೆಯೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಗೆ ಜೀವ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿದೆ.
ಗಣರಾಜ್ಯೋತ್ಸವ ದಿನ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿರುವ ಬಗ್ಗೆ ಗುಪ್ತಚರ ಪಡೆಗಳು ಮಾಹಿತಿ ಪಡೆದಿದ್ದು, ಈ ಬಗ್ಗೆ ಇಲಾಖೆಯಿಂದ ಒಂಬತ್ತು ಪುಟಗಳ ಎಲರ್ಟ್ ಸೂಚನೆಯನ್ನು ಕೇಂದ್ರಕ್ಕೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಏಷ್ಯಾ ರಾಷ್ಟ್ರಗಳಾದ ಕಜಕಿಸ್ತಾನ, ಕಿರ್ಜಿಸ್ತಾನ್, ತಜಕಿಸ್ತಾನ್, ತುರ್ಕ್ಮೆನಿಸ್ತಾನ್, ಉಜ್ಬೆಕಿಸ್ತಾನ್ ದೇಶಗಳ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸುವ ನಿರೀಕ್ಷೆಯಿದೆ.
ಪಾಕಿಸ್ಥಾನ, ಅಫ್ಘಾನಿಸ್ತಾನ ಮೂಲದ ಸಂಘಟನೆಗಳಿಂದ ಬೆದರಿಕೆ ಬಂದಿದೆ ಎನ್ನಲಾಗುತ್ತಿದ್ದು, ಇವು ಗಣ್ಯ ರಾಜಕೀಯ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವುದು, ಜನದಟ್ಟಣೆಯ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯ ಎಸಗುವುದು, ಸಾರ್ವಜನಿಕ ಕಾರ್ಯಕ್ರಮಗಳನ್ನು ಛಿದ್ರಗೊಳಿಸುವ ಉದ್ದೇಶ ಹೊಂದಿದೆ. ಇದರ ಹಿಂದೆ ಲಷ್ಕರ್ ಇ- ತೊಯ್ಬಾ, ದಿ ರೆಸಿಸ್ಟೆನ್ಸ್ ಫೋರ್ಸ್, ಜೈಶ್ ಇ- ಮಹ್ಮದ್, ಹರ್ಕಲ್ ಉಲ್ ಮುಜಾಹಿದೀನ್, ಹಿಜ್ಬುಲ್ ಮುಜಾಹಿದೀನ್ ಸಂಘಟನೆಗಳು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ಥಾನ ಮೂಲದ ಖಲೀಸ್ತಾನಿ ಉಗ್ರರು ಕೂಡ ಸಂಚು ಹೂಡಿದ್ದು, ಪಂಜಾಬ್ ನಲ್ಲಿ ಮತ್ತೆ ತನ್ನ ಬಲಪಡಿಸುವುದು ಹಾಗೂ ಪಂಜಾಬ್ ಮತ್ತಿತರ ಉತ್ತರದ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿದ್ದಾರೆ. ಈ ಹಿಂದೆಯೂ ಖಲೀಸ್ತಾನಿ ಉಗ್ರರು ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ತಡೆ ಒಡ್ಡುವುದು, ಪ್ರವಾಸ ಕಾರ್ಯಕ್ರಮಕ್ಕೆ ತಡೆ ಹಾಕಲು ಯೋಜನೆ ಹಾಕಿತ್ತು.
Intelligence agencies have received an alert about a possible terror plot on Republic Day that threatened the lives of Prime Minister Narendra Modi and other dignitaries.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm