ಬ್ರೇಕಿಂಗ್ ನ್ಯೂಸ್
07-02-22 08:34 pm HK Desk news ದೇಶ - ವಿದೇಶ
ನವದೆಹಲಿ, ಫೆ.7 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡುವ ಬಗ್ಗೆ ಕರ್ನಾಟಕ ಸರಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸಂಸತ್ತಿನಲ್ಲಿ ನಾಗರಿಕ ವಿಮಾನ ಯಾನ ಸಚಿವಾಲಯದ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡಬೇಕೆಂಬ ಪ್ರಸ್ತಾಪ ಕೇಳಿಬರುತ್ತಿದೆ. ಸ್ಥಳೀಯವಾಗಿ ಹಲವು ಮಹಾನುಭಾವರ ಹೆಸರುಗಳನ್ನು ನಾಮಕರಣ ಮಾಡುವ ಬಗ್ಗೆ ಬೇಡಿಕೆ ಮುಂದಿಡಲಾಗಿದೆ. ಈ ಬಗ್ಗೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಂಸದ ಡಾ.ಸುಬ್ರಹ್ಮಣ್ಯಸ್ವಾಮಿ ಫೆ.7ರಂದು ಸಂಸತ್ತಿನಲ್ಲಿ ಪ್ರಶ್ನೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ವಿ.ಕೆ.ಸಿಂಗ್, ಯಾವುದೇ ನಾಮಕರಣ ಮಾಡುವುದು, ಹೊಸ ಹೆಸರಿಡುವುದಕ್ಕೂ ಮೊದಲು ಆಯಾ ರಾಜ್ಯ ಸರಕಾರಗಳಿಂದ ಪ್ರಸ್ತಾವನೆ ಬರಬೇಕು. ಆಯಾ ರಾಜ್ಯಗಳ ಅಸೆಂಬ್ಲಿಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಸಲ್ಲಿಸಬೇಕು. ಆದರೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ಹೆಸರಿಡುವ ಬಗ್ಗೆ ಯಾವುದೇ ಪ್ರಸ್ತಾವನೆ ಕರ್ನಾಟಕ ಸರಕಾರದಿಂದ ಕೇಂದ್ರಕ್ಕೆ ಸಲ್ಲಿಕೆ ಆಗಿಲ್ಲ. ಹೊಸ ನಾಮಕರಣ ಮಾಡುವುದಿದ್ದರೆ ಕೇಂದ್ರ ಸಚಿವ ಸಂಪುಟ, ಆಯಾ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಬೇಕು. ಅಥವಾ ಇತರ ಸಾಧಕರ ಹೆಸರನ್ನು ಇಡಬೇಕು ಎಂಬ ಬಗ್ಗೆ ಅಭಿಯಾನ ನಡೆದಿತ್ತು. ಅಂಥ ಸಂದರ್ಭದಲ್ಲಿ ಈ ಭಾಗದ ಪ್ರಭಾವಿ ಮುಖಂಡರು ಸೇರಿದಂತೆ ಸಂಸದ ನಳಿನ್ ಕುಮಾರ್ ಈ ಬಗ್ಗೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆ ಕಳುಹಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಈ ಎಲ್ಲ ನಾಯಕರು ನೀಡಿದ್ದ ಹೇಳಿಕೆಗಳು ಸುಳ್ಳು ಎನ್ನುವುದು ಈಗ ಖಚಿತವಾಗಿದೆ.
Proposals for naming/ renaming airports is based on the recommendations of the state government concerned, he said. The Civil Aviation Ministry has stated that it has not received any proposal from the Karnataka government to rename Mangaluru airport.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm