ಬ್ರೇಕಿಂಗ್ ನ್ಯೂಸ್
10-02-22 11:58 am HK Desk news ದೇಶ - ವಿದೇಶ
ಪಾಲಕ್ಕಾಡ್, ಫೆ 10 : ಟ್ರೆಕ್ಕಿಂಗ್ ಹೋಗಿ ಮಲಂಪುಳ ಬೆಟ್ಟದಲ್ಲಿ ಅಪಾಯಕ್ಕೆ ಸಿಲುಕಿದ್ದ ಯುವಕನೋರ್ವನನ್ನು ಭಾರತೀಯ ಸೇನೆ ಸಾಹಸದ ಕಾರ್ಯಾಚರಣೆ ಮಾಡಿ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.
ಕೇರಳದ ಮಲಂಪುಳ ಪರ್ವತಗಳ ಕಡಿದಾದ ಬೆಟ್ಟದ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನನ್ನು ಸತತ ಕಾರ್ಯಾಚರಣೆಯ ಬಳಿಕ ಭಾರತೀಯ ಸೇನೆಯು ಬುಧವಾರ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.
ಮಲಂಪುಳದ 23 ವರ್ಷದ ಬಾಬು ಎಂಬ ಯುವಕ, ಸೋಮವಾರ (ಫೆ.8) ಮೂವರು ಸ್ನೇಹಿತರ ಜೊತೆಗೆ ಚಾರಣಕ್ಕೆ ತೆರಳಿದ್ದನು. ಈ ವೇಳೆ ಮಾರ್ಗ ಮಧ್ಯೆ ಕಾಲು ಜಾರಿ ಕಡಿದಾದ ಬೆಟ್ಟದ ನಡುವೆ ಸಿಲುಕಿದ್ದನು. ಸುಮಾರು 1,000 ಮೀಟರ್ ಎತ್ತರದ ಬೆಟ್ಟ ಇದಾಗಿದ್ದು, ಕಳೆದೆರಡು ದಿನಗಳಿಂದ ನೀರು, ಆಹಾರ ಇಲ್ಲದೆ ಸಂಕಷ್ಟಕ್ಕೊಳಗಾಗಿದ್ದನು.
ಈ ವಿಚಾರ ತಿಳಿದ ಸ್ಥಳೀಯ ಆಡಳಿತದ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸುವ ಪ್ರಯತ್ನ ಪ್ರತಿಕೂಲ ಹವಾಮಾನದಿಂದಾಗಿ ವಿಫಲಗೊಂಡಿತ್ತು. ಅಲ್ಲದೆ ಡ್ರೋನ್ ಮೂಲಕ ಯುವಕನಿಗೆ ಆಹಾರ ತಲುಪಿಸುವ ಪ್ರಯತ್ನ ಕೂಡ ವಿಫಲಗೊಂಡಿತ್ತು. ಅಂತಿಮವಾಗಿ ಮಂಗಳವಾರ ರಾತ್ರಿ ಕೇರಳ ಸರ್ಕಾರದ ಮನವಿ ಮೇರೆಗೆ ಭಾರತೀಯ ಸೇನೆಯು ಯಶಸ್ವಿಯಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ.
ಮಂಗಳವಾರ ರಾತ್ರಿ ಭಾರತೀಯ ಸೇನೆಯ ಎರಡು ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಿತ್ತು. ಮದ್ರಾಸ್ ರೆಜಿಮೆಂಟ್‌ನ 12 ಮಂದಿಯ ತಂಡದಲ್ಲಿ ಪರ್ವತಾರೋಹಿಗಳು ಸೇರಿದಂತೆ ನುರಿತ ಸಿಬ್ಬಂದಿಗಳು ಒಳಗೊಂಡಿದ್ದರು. ಹಾಗೆಯೇ ಬೆಂಗಳೂರಿನ ಪ್ಯಾರಾಚೂಟ್ ರೆಜಿಮೆಂಟ್ ಸೆಂಟರ್‌ನಿಂದ ತೆರಳಿರುವ 22 ಸಿಬ್ಬಂದಿಯ ಎರಡನೇ ತಂಡವು ವಿಮಾನ ಮಾರ್ಗವಾಗಿ ಸೂಲೂರು ಮೂಲಕ ಘಟನಾ ಸ್ಥಳಕ್ಕೆ ತಲುಪಿತ್ತು. ಯುವಕನನ್ನು ರಕ್ಷಿಸಿದ ಬಳಿಕ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಸೇನೆಯ ಈ ಸಾಹಸ ಭರಿತ ರಕ್ಷಣಾ ಕಾರ್ಯಾಚರಣೆಗೆ ಎಲ್ಲೆಡೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.
#Video Goosebumps: Babu, the youth trapped in a steep gorge in Malampuzha mountains in Palakkad Kerala was saved by daring Indian Army team.
— MeghUpdates🚨™ (@MeghBulletin) February 10, 2022
Indian Army 🇮🇳 😍🙏 pic.twitter.com/y6AXZQULG6
#WATCH | Babu, the youth trapped in a steep gorge in Malampuzha mountains in Palakkad Kerala extends his thanks to the Indian Army after being rescued. Teams of the Indian Army had undertaken the rescue operation.
— ANI (@ANI) February 9, 2022
(Video source: Indian Army) pic.twitter.com/VzFq6zSaY6
A big salute to our #IndianArmy
— IndiaObservers (@IndiaObservers) February 9, 2022
Babu, the youth trapped in a steep gorge in #Malampuzha mountains in #Palakkad Kerala has now been rescued. pic.twitter.com/6m25KxGffp
A 23-year youth who was trapped in a cleft of Malampuzha mountains in Kerala for nearly two days has been rescued by the Indian Army. The Army team in an unprecedented rescue mission brought Babu, the youngster, to the top of the mountain. The rescue mission lasted for more than 40 minutes. The youngster has been airlifted to the district hospital for health checkup
26-11-24 10:46 pm
Bangalore Correspondent
Shivamogga, Monkey fever, Dinesh Gundu Rao: ಮ...
26-11-24 10:23 pm
BJP, Vijayendra: ಉಪ ಚುನಾವಣೆ ಸೋಲು ; ಪಕ್ಷದ ಕಾರ್...
26-11-24 06:56 pm
MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗ...
26-11-24 06:11 pm
Davanagere News, Heart Attack: ಗಂಡ ಹೃದಯಾಘಾತಕ್...
26-11-24 11:52 am
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
27-11-24 09:36 pm
Mangalore Correspondent
Dr Chinnappa Gowda, Mangalore: 25 ಕೋಟಿ ವ್ಯಯಿಸ...
27-11-24 08:50 pm
Mangalore MP Captain Brijesh Chowta, Chouhan...
27-11-24 08:39 pm
Mangalore News: ಬ್ರಿಟಿಷರ ಕಾಲದ ಜಿಲ್ಲಾಧಿಕಾರಿ ಕಚ...
27-11-24 08:28 pm
Mangalore, Lokayukta Complaint: ಸರಕಾರಿ ಕೆಲಸ ವ...
27-11-24 08:16 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm