ಬ್ರೇಕಿಂಗ್ ನ್ಯೂಸ್
11-02-22 01:40 pm HK Desk news ದೇಶ - ವಿದೇಶ
ನವದೆಹಲಿ, ಫೆ.11 : ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರ ಪರ ವಕೀಲರು ಸುಪ್ರೀಂ ಮೆಟ್ಟಿಲೇರಿದ್ದಾರೆ. ಅಲ್ಲದೆ, ಇತರ ಕೆಲವು ಸಾಮಾಜಿಕ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರು ಕೂಡ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಹಿಜಾಬ್ ಬಗ್ಗೆ ತೀರ್ಪು ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ಸುಪ್ರೀಂ ಕೋರ್ಟ್ ವಿಚಾರಣೆಗೆ ನಿರಾಕರಿಸಿದ್ದು, ಮೊದಲು ಕರ್ನಾಟಕ ಹೈಕೋರ್ಟ್ ತೀರ್ಪು ಬರಲಿ ಎಂದು ಹೇಳಿದೆ.
ಅರ್ಜಿದಾರ ಪರ ವಕೀಲ ದೇವದತ್ ಕಾಮತ್, ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶ ಸಂವಿಧಾನದ ಧಾರ್ಮಿಕ ಹಕ್ಕಿನ ಉಲ್ಲಂಘನೆ. ಆರ್ಟಿಕಲ್ 25ರ ಪ್ರಕಾರ, ಆಯಾ ಧರ್ಮದವರು ತಮ್ಮ ಧಾರ್ಮಿಕ ಹಕ್ಕನ್ನು ಅನುಭವಿಸಲು ಸ್ವತಂತ್ರರಿದ್ದಾರೆ. ಮಧ್ಯಂತರ ಆದೇಶದಲ್ಲಿ ಧಾರ್ಮಿಕವಾಗಿ ತೊಡುವ ಹಿಜಾಬ್, ಸ್ಕಾರ್ಫ್ ನಿಷೇಧಿಸಿದ್ದು ತಪ್ಪೆಂದು ವಾದಿಸಿದ್ದಾರೆ.
ಇದೇ ವೇಳೆ, ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಆರಿಫ್ ಜಮೀಲ್, ಸುಪ್ರೀಂ ಕೋರ್ಟಿನಲ್ಲಿ ದಾವೆ ಹೂಡಿದ್ದು, ಫೆ.15ರಿಂದ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಇಂಥ ಸಂದರ್ಭದಲ್ಲಿ ಮಕ್ಕಳ ಧಾರ್ಮಿಕ ಹಕ್ಕನ್ನು ಮೊಟಕುಗೊಳಿಸುವುದು ಸರಿಯಲ್ಲ. ಈ ಬಗ್ಗೆ ತುರ್ತಾಗಿ ಪರಿಗಣಿಸಿ ಧಾರ್ಮಿಕ ಹಕ್ಕನ್ನು ಅನುಭವಿಸಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದಾರೆ. ಇದಲ್ಲದೆ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಕೂಡ ಹಿಜಾಬ್ ವಿವಾದದದಲ್ಲಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ, ನಾವು ಕೂಡ ಕರ್ನಾಟಕದಲ್ಲಿ ಆಗುತ್ತಿರುವ ಬೆಳವಣಿಗೆಯನ್ನು ಗಮನಿಸುತ್ತಿದ್ದೇವೆ. ಹೈಕೋರ್ಟ್ ವಿಚಾರಣೆಯ ಬಗ್ಗೆಯೂ ಗಮನ ನೀಡಿದ್ದೇವೆ. ನಾವು ದೇಶದ ಎಲ್ಲ ಜನರ ಮೂಲಭೂತ ಹಕ್ಕನ್ನು ರಕ್ಷಿಸುತ್ತೇವೆ. ಆದರೆ ನೀವು ಈ ವಿಚಾರವನ್ನು ರಾಷ್ಟ್ರ ಮಟ್ಟಕ್ಕೆ ಎಳೆದು ತರುವ ಅಗತ್ಯವಿದೆಯೇ ಎನ್ನುವ ಬಗ್ಗೆ ವಿಮರ್ಶೆ ಮಾಡಬೇಕು. ಮೆರಿಟ್ ಆಧಾರದಲ್ಲಿ ಇದನ್ನು ಪರಿಗಣಿಸಲು ಸಾಧ್ಯವಿಲ್ಲ. ಹೈಕೋರ್ಟ್ ವಿಚಾರಣೆ ಆಗುತ್ತಿದ್ದು, ಅಲ್ಲಿನ ತೀರ್ಪು ಬರಲಿ ಎಂದು ಹೇಳಿದ್ದಾರೆ.
ಕರ್ನಾಟಕ ಹೈಕೋರ್ಟಿನ ತ್ರಿಸದಸ್ಯ ಪೀಠ ಹಿಜಾಬ್ ಕುರಿತ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದ್ದು, ಮಧ್ಯಂತರ ಆದೇಶ ನೀಡಬೇಕೆಂಬ ಅರ್ಜಿದಾರರ ಕೋರಿಕೆ ಮೇರೆಗೆ, ಅಂತಿಮ ಆದೇಶ ಬರುವ ವರೆಗೆ ಯಾವುದೇ ಧಾರ್ಮಿಕ ಉಡುಗೆಗಳನ್ನು ತೊಡುವಂತಿಲ್ಲ ಎಂದು ಆದೇಶ ನೀಡಿತ್ತು. ಅಲ್ಲದೆ, ಮುಂದಿನ ವಾರದಿಂದ ಪ್ರತಿದಿನ ವಿಚಾರಣೆ ನಡೆಸಿ ಆದಷ್ಟು ಬೇಗ ತೀರ್ಪು ನೀಡಲಾಗುವುದು. ವಿದ್ಯಾರ್ಥಿಗಳ ಶೈಕ್ಷಣಿಕ ವಾತಾವರಣ ಹದಗೆಡದಂತೆ ಸಹಿಷ್ಣುತೆಯಿಂದ ವರ್ತಿಸಬೇಕು ಎಂದು ಹೇಳಿದ್ದರು. ಆದರೆ, ಮಧ್ಯಂತರ ತೀರ್ಪಿನಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದಿರುವುದು ಹಿಜಾಬ್ ಪರ ಹೋರಾಟಗಾರರಿಗೆ ದೊಡ್ಡ ಹಿನ್ನಡೆಯಾಗಿತ್ತು. ಹಾಗಾಗಿ ಈ ಆದೇಶವನ್ನೇ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
The Supreme Court on Thursday refused to give an urgent hearing on plea challenging interim order of Karnataka High Court in the Hijab ban case. The apex court said that it will take up the matter at an appropriate time. The court said it is watching what is happening in Karnataka and in the hearing before the High Court.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm