ಬ್ರೇಕಿಂಗ್ ನ್ಯೂಸ್
16-02-22 12:07 pm HK Desk news ದೇಶ - ವಿದೇಶ
ನವದೆಹಲಿ, ಫೆಬ್ರವರಿ 16 : ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದ ನಟ ಹಾಗೂ ರೈತಪರ ಹೋರಾಟಗಾರ ದೀಪ್ ಸಿಧು ದೆಹಲಿಯ ಬಳಿ ಸೋನಿಪತ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ದೆಹಲಿಯ ಗಡಿಯಲ್ಲಿ ನಡೆದ ರೈತರ ಚಳವಳಿಯಲ್ಲಿ ಭಾಗವಹಿಸಿದ್ದ ದೀಪ್ ಸಿಧು ವಿರುದ್ಧ ಕೆಂಪು ಕೋಟೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಿತೂರಿ ಆರೋಪ ಹೊರಿಸಲಾಗಿತ್ತು. ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿ ನವೆಂಬರ್ 26ರಿಂದಲೂ ರೈತರು ಪ್ರತಿಭಟನೆ ನಡೆಸುತ್ತಿದ್ದರು. ದೀಪ್ ಸಿಧು ರೈತರನ್ನು ಪ್ರಚೋದಿಸಿ ಕೆಂಪು ಕೋಟೆಗೆ ತೆರಳಲು ಪ್ರಚೋದನೆ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು.
ದೆಹಲಿ ಹಿಂಸಾಚಾರದಲ್ಲಿ 500ಕ್ಕೂ ಹೆಚ್ಚು ಪೊಲೀಸರಿಗೆ ಗಾಯ;
ಕಳೆದ 2021ರ ಜನವರಿ 26ರಂದು ನಡೆದ ಹಿಂಸಾಚಾರದಲ್ಲಿ ಸುಮಾರು 500ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಸಾರ್ವಜನಿಕ ಸಾರಿಗೆ, ಪೊಲೀಸ್ ವಾಹನಗಳು ಜಖಂಗೊಂಡಿತ್ತು. ಫೆ.9 ರಂದು ದೀಪ್ ಸಿಧುರನ್ನು ಪಂಜಾಬ್‌ನ ಜೀಕರ್‌ಪುರದಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು, ಬಳಿಕ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯ 7 ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿದ್ದು, ತದನಂತರದಲ್ಲಿ 14 ದಿನದ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಸೂಚಿಸಿತ್ತು.
ಕೆಂಪುಕೋಟೆಗೆ ತೆರಳಲು ನಾನು ಕರೆ ನೀಡಿರಲಿಲ್ಲ;
ಕಳೆದ ಜನವರಿ 26ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೀಪ್ ಸಿಧುರನ್ನು ಪ್ರಮುಖ ಆರೋಪಿ ಎಂದು ಗುರುತಿಸಲಾಗಿತ್ತು. ಆದರೆ ಕೆಂಪುಕೋಟೆಗೆ ತೆರಳುವಂತೆ ಪ್ರತಿಭಟನಾನಿರತ ರೈತರಿಗೆ ತಾವು ಯಾವುದೇ ಕರೆ ನೀಡಿರಲಿಲ್ಲ ಎಂದು ವಿಚಾರಣೆ ವೇಳೆ ದೀಪ್ ಸಿಧು ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದರು. ತಾವು ಯಾವುದೇ ರೈತ ಸಂಘಟನೆಯ ಸದಸ್ಯರಲ್ಲ ಎಂದು ಸ್ಪಷ್ಟನೆ ನೀಡಿದ್ದರು.
Actor Deep Sidhu who was out on bail in the Republic Day violence case in January last year has died in a road accident. The accident happened on the Kundli-Manesar-Palwal (KMP) Expressway that bypasses Delhi. Visuals from the accident site show a white Mahindra Scorpio smashed on the rear of a trailer truck; the SUV's driver side area is completely pushed in by the impact. Mr Sidhu was going from Delhi to Bhatinda in Punjab when the SUV in which he was travelling rammed a trailer truck at 9:30 pm on Tuesday, the police said.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm