ಬ್ರೇಕಿಂಗ್ ನ್ಯೂಸ್
17-02-22 11:32 am HK Desk news ದೇಶ - ವಿದೇಶ
ಲಕ್ನೋ, ಫೆ.17 : ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದು ಬಾವಿ ಕಟ್ಟೆಯ ಬಳಿ ಬುಧವಾರ ರಾತ್ರಿ ಹಳದಿ ಶಾಸ್ತ್ರ ನಡೆಸುತ್ತಿದ್ದಾಗ ಬಾವಿ ಕಟ್ಟೆಯೇ ಕುಸಿದು ಬಿದ್ದು ಮಕ್ಕಳು, ಮಹಿಳೆಯರು ಸೇರಿ 13 ಮಂದಿ ದುರಂತ ಸಾವಿಗೀಡಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನೆಬುವಾ ನೌರಾಂಗಿಯ ಎಂಬ ಗ್ರಾಮದಲ್ಲಿ ಬುಧವಾರ ಸಂಜೆ ಘಟನೆ ನಡೆದಿದೆ. ಸಂಜೆ ವೇಳೆಗೆ ಮಕ್ಕಳು, ಮಹಿಳೆಯರು ಬಾವಿ ಕಟ್ಟೆ ಬಳಿ ಮದುವೆ ಹೆಣ್ಣಿಗೆ ಹಳದಿ ಶಾಸ್ತ್ರ ಕಾರ್ಯದ ಸಂಭ್ರಮದಲ್ಲಿದ್ದರು. ಈ ವೇಳೆ, ಮಹಿಳೆಯರು ಹಿಡಿದುಕೊಂಡಿದ್ದ ಕಬ್ಬಿಣದ ರಾಟೆ ಮುರಿದು ಬಾವಿಯೊಳಗೆ ಕುಸಿದು ಬಿದ್ದಿದೆ. ಜೊತೆಗೆ ಆವರಣ ಗೋಡೆ ಮತ್ತು ಕಟ್ಟೆಯೂ ಕುಸಿದಿದ್ದು, 30ಕ್ಕೂ ಹೆಚ್ಚು ಮಂದಿ ಬಾವಿಯ ಒಳಗೆ ಬಿದ್ದಿದ್ದಾರೆ.
ಕೂಡಲೇ ಕಾರ್ಯಾಚರಣೆ ನಡೆಸಲಾಗಿದ್ದು, 15 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಮೂರು ಮಕ್ಕಳು ಸೇರಿ 13 ಮಂದಿಯನ್ನು ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಶೋಕ ವ್ಯಕ್ತಪಡಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ, ಸೌಲಭ್ಯ ದೊರಕಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ಬಗ್ಗೆ ಪ್ರಧಾನಿ ಮೋದಿ ಕೂಡ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಪ್ರಕಟಿಸಿದ್ದಾರೆ.
ಉತ್ತರ ಭಾರತದಲ್ಲಿ ಅರಿಶಿಣ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಬಾವಿ ಕಟ್ಟೆ ಬಳಿ ನಡೆಸುತ್ತಾರೆ. ಈ ವೇಳೆ, ಬಾವಿ ಕಟ್ಟೆಯ ಕುಸಿದು ಬಿದ್ದು ರಾತ್ರಿ ವೇಳೆ ದುರಂತ ನಡೆದಿದೆ ಎನ್ನಲಾಗುತ್ತಿದೆ.
As many as 13 people lost their lives after falling into a well during wedding celebrations in the Nebua Naurangia area of the Kushinagar district of Uttar Pradesh. The District Magistrate of Kushinagar, S Rajalingam told reporters, "We have got to know that 13 people have died and two others have been seriously injured after they accidentally fell into a well. This happened during a wedding program wherein some people were sitting on a slab of a well and due to heavy load, the slab broke."
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm