ಬ್ರೇಕಿಂಗ್ ನ್ಯೂಸ್
25-02-22 11:20 am HK Desk news ದೇಶ - ವಿದೇಶ
ನವದೆಹಲಿ, ಫೆ.25 : ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಹಿಂಸೆ, ಯುದ್ಧ ಸಮಸ್ಯೆಗೆ ಉತ್ತರವಾಗಲ್ಲ. ಶಾಂತಿ ಮರುಸ್ಥಾಪನೆಗಾಗಿ ಕದನ ವಿರಾಮ ಘೋಷಿಸಿ, ಸಾವು ನೋವನ್ನು ನಿಲ್ಲಿಸಿ ಎಂದು ಮೋದಿ ಸಲಹೆ ಮಾಡಿದ್ದಾರೆ.
ಉಕ್ರೇನ್ ದೇಶದ ರಾಯಭಾರಿ ಈ ಬಗ್ಗೆ ಭಾರತಕ್ಕೆ ಮನವಿ ಮಾಡಿಕೊಂಡ ಬೆನ್ನಲ್ಲೇ ಪ್ರಧಾನಿ ಮೋದಿ, ಗುರುವಾರ ರಾತ್ರಿ ಪುತಿನ್ ಜೊತೆಗೆ ಮಾತುಕತೆ ನಡೆಸಿದ್ದರು. ಆದರೆ, ಪುತಿನ್ ತನ್ನ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. ನ್ಯಾಟೋ ಜೊತೆಗಿನ ಶೀತಲ ಸಮರವನ್ನು ಮಾತುಕತೆಯಿಂದ ಬಗೆಹರಿಸಿಕೊಳ್ಳಿ. ಅದಕ್ಕೆ ಯುದ್ಧ ಉತ್ತರವಲ್ಲ ಎಂದು ಮೋದಿ, ಪುತಿನ್ ಅವರಿಗೆ ಸಲಹೆ ಮಾಡಿದ್ದಾರೆ. ಇದೇ ವೇಳೆ, ಭಾರತ ಮತ್ತು ರಷ್ಯಾದಲ್ಲಿರುವ ಭಾರತೀಯರ ರಕ್ಷಣೆ ವಿಚಾರದಲ್ಲಿಯೂ ಮೋದಿ ಮಾತುಕತೆ ನಡೆಸಿದ್ದಾರೆ. ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ನಾವು ಆದ್ಯತೆ ನೀಡುತ್ತೇವೆ ಎಂದು ಮೋದಿ ತಿಳಿಸಿದ್ದಾರೆ. 25 ನಿಮಿಷಗಳ ಕಾಲ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.

ಆಕ್ರಮಣ ಬಿಟ್ಟು ಬೇರೆ ದಾರಿಯಿರಲಿಲ್ಲ-ಪುತಿನ್
ಇದಕ್ಕೂ ಮೊದಲು ರಷ್ಯಾದ ವ್ಯಾಪಾರ ಮತ್ತು ಉದ್ಯಮ ಪ್ರತಿನಿಧಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ವ್ಲಾದಿಮಿರ್ ಪುತಿನ್, ರಾಷ್ಟ್ರದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಉಕ್ರೇನ್ ಮೇಲೆ ಆಕ್ರಮಣ ಮಾಡುವುದರ ಹೊರತು ಬೇರೆ ದಾರಿ ಇರಲಿಲ್ಲ ಎಂದು ಹೇಳಿದ್ದಾರೆ. ಈಗ ಏನಾಗುತ್ತಿದೆಯೋ ಅದನ್ನು ಬೇರೆ ಆಯ್ಕೆ ಇರಲಿಲ್ಲ. ತಮ್ಮ ದೇಶವನ್ನು ವಿಶ್ವ ಆರ್ಥಿಕತೆಯಲ್ಲಿ ಪ್ರಭಾವಿಯಾಗಿ ಉಳಿಸಿಕೊಳ್ಳಲು ಬಯಸುತ್ತಿದೆ. ಅದಕ್ಕೆ ಹಾನಿ ಮಾಡುವ ಯಾವುದೇ ಯೋಜನೆ ನಮ್ಮ ಮುಂದಿಲ್ಲ. ರಷ್ಯಾ ವಿಶ್ವ ಆರ್ಥಿಕತೆಯ ಭಾಗವಾಗಿಯೇ ಉಳಿಯಲಿದೆ ಎಂದು ಹೇಳಿದ್ದಾರೆ. ನಮ್ಮ ಪಾಲುದಾರರು ಈ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ನಮ್ಮನ್ನು ಈ ವ್ಯವಸ್ಥೆಯಿಂದ ಹೊರಗೆ ತಳ್ಳುವ ಕೆಲಸವನ್ನು ಮಾಡಬಾರದು ಎಂದು ನನಗನಿಸುತ್ತಿದೆ ಎಂದಿದ್ದಾರೆ.
As Russian forces attacked cities in Ukraine, Prime Minister Narendra Modi dialled Russian president Vladimir Putin on Thursday night, appealing for an "immediate cessation of violence" and stressed that India attacked the highest importance to the safe exit of its citizens from Ukraine. A statement from the Prime Minister's Office said PM Modi called for "concerted efforts from all sides to return to the path of diplomatic negotiations and dialogue".
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm