ಶಿವನ ದರ್ಶನ ಪಡೆದುಕೊಂಡು ವಾಪಸ್​ ಬರುವಾಗ ದುರಂತ ; ಮರಕ್ಕೆ ಡಿಕ್ಕಿ ಹೊಡೆದು ಆರು ಮಂದಿ ಭಕ್ತರ ದುರ್ಮರಣ ! 

01-03-22 11:09 pm       HK Desk news   ದೇಶ - ವಿದೇಶ

ಮಹಾಶಿವರಾತ್ರಿ ಅಂಗವಾಗಿ ಶಿವನ ದರ್ಶನ ಪಡೆದುಕೊಂಡು ವಾಪಸ್​ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಆರು ಮಂದಿ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ.

ಒಡಿಶಾ, ಮಾ 01: ಮಹಾಶಿವರಾತ್ರಿ ಅಂಗವಾಗಿ ಶಿವನ ದರ್ಶನ ಪಡೆದುಕೊಂಡು ವಾಪಸ್​ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಆರು ಮಂದಿ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಒಡಿಶಾದ ನುಪಾಡಾದಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ ನುಪಾಡಾದ ನೃಸಿಂಹನಾಥ ದೇವಸ್ಥಾನದಿಂದ ವಾಪಸ್​ ಬರುತ್ತಿದ್ದಾಗ ಅವಘಡ ಸಂಭವಿಸಿದೆ.

ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಛತ್ತೀಸ್​ಗಢದವರಾಗಿರುವ ಇವರು ಶಿವರಾತ್ರಿ ಅಂಗವಾಗಿ ಪಕ್ಕದ ರಾಜ್ಯದ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Six people of a family died after the car they were travelling in dashed into a roadside tree near Sunsunia Chhak on Nuapada-Bargarh road on Tuesday.