40 ವರ್ಷದ ಹಳೆಯ ಕಟ್ಟಡ ಕುಸಿತ ; 10 ಮಂದಿ ದಾರುಣ ಸಾವು

21-09-20 11:28 am       Headline Karnataka News Network   ದೇಶ - ವಿದೇಶ

ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಕನಿಷ್ಠ 10 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈ ಸಮೀಪದ ಭಿವಾಂಡಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಮುಂಬೈ ಸೆಪ್ಟಂಬರ್ 21: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಕನಿಷ್ಠ 10 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈ ಸಮೀಪದ ಭಿವಾಂಡಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಪಟೇಲ್ ಕೌಂಪೌಂಡ್ ಪ್ರದೇಶದಲ್ಲಿರುವ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಎನ್‍ಡಿಆರ್‍ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ)ಯ ಸಿಬ್ಬಂದಿ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಿದ್ದಾರೆ. ಈ ಮೂಲಕ ಕಟ್ಟಡದ ಅವಶೇಷಗಳಡಿ ಸಿಲುಕಿದ ಐವರನ್ನು ರಕ್ಷಣೆ ಮಾಡಲಾಗಿದ್ದು, 20-25 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇಂದು ಮುಂಜಾನೆ 3.40ರ ಸುಮಾರಿಗೆ ಕಟ್ಟಡ ಕುಸಿದಿದ್ದು, ಕೂಡಲೇ ಎನ್‍ಡಿಆರ್‍ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ತೆರಳಿದ್ದಾರೆ. ಘಟನೆ ನಡೆದ ಬಳಿಕ ಸುಮಾರು 20 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

ಈ ಸಂಬಂಧ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರ ಮಾಧ್ಯಮದ ಜೊತೆ ಮಾತನಾಡಿ, ಭಿವಾಂಡಿ ಕಟ್ಟಡ ಕುಸಿತದ ದುರಂತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ. ಎಂದು ಮಾಹಿತಿ ನೀಡಿದ್ದಾರೆ.

40 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 20 ಕುಟುಂಬಗಳು ನೆಲೆಸಿದ್ದವು ಎಂಬುದಾಗಿ ತಿಳಿದುಬಂದಿದೆ.

Join our WhatsApp group for latest news updates

video