ಬ್ರೇಕಿಂಗ್ ನ್ಯೂಸ್
08-03-22 08:05 pm HK news Desk ದೇಶ - ವಿದೇಶ
ನವದೆಹಲಿ, ಮಾ.8 : 1999ರಲ್ಲಿ ಏರ್ ಇಂಡಿಯಾ ವಿಮಾನ ಅಪಹರಿಸಿ ಭಾರತದಲ್ಲಿ ಬಂಧಿಯಾಗಿದ್ದ ಕುಖ್ಯಾತ ಭಯೋತ್ಪಾದಕರನ್ನು ಬಿಡುಗಡೆ ಮಾಡಿಕೊಂಡಿದ್ದ ಜೈಶ್ ಉಗ್ರರ ಪೈಕಿ ಒಬ್ಬನನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ.
1999ರಲ್ಲಿ ಏರ್ ಇಂಡಿಯಾ ವಿಮಾನ ಐಸಿ-814 ಅನ್ನು ಹೈಜಾಕ್ ಮಾಡಿದ ಭಯೋತ್ಪಾದಕರಲ್ಲಿ ಒಬ್ಬನಾದ ಜಹೂರ್ ಮಿಸ್ತ್ರಿ ಅಲಿಯಾಸ್ ಜಾಹಿದ್ ಅಖುಂಡ್ ಎಂಬಾತನನ್ನು ಪಾಕಿಸ್ತಾನದ ಕರಾಚಿಯಲ್ಲಿ ಬೈಕ್ ನಲ್ಲಿ ಬಂದಿದ್ದ ಇಬ್ಬರು ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದಾರೆ.
ಜಹೂರ್ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಜೊತೆ ಗುರುತಿಸಿಕೊಂಡಿದ್ದ. ಇಬ್ಬರು ದಾಳಿಕೋರರು ಗುಂಡಿನ ದಾಳಿ ನಡೆಸಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಗುರುತು ಪತ್ತೆಯಾಗಿಲ್ಲ.
1999ರಲ್ಲಿ ಐಸಿ-814 ವಿಮಾನದಲ್ಲಿದ್ದ 176 ಪ್ರಯಾಣಿಕರನ್ನು ಅಫ್ಘಾನಿಸ್ತಾನದ ಕಂದಹಾರ್ ವಿಮಾನ ನಿಲ್ದಾಣಕ್ಕೆ ಒಯ್ದಿದ್ದ ಅಪಹರಣಕಾರರು ಏಳು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿದ್ದರು. ವಿಮಾನವು ಕಾಠ್ಮಂಡುವಿನಿಂದ ಹೊರಟು ದೆಹಲಿಗೆ ಬರುತ್ತಿದ್ದಾಗ ಉಗ್ರರು ನುಸುಳಿಕೊಂಡು ಅಪಹರಿಸಿದ್ದು ನೇರವಾಗಿ ಅಫ್ಘಾನಿಸ್ತಾನದ ಕಂದಹಾರ್ ಗೆ ಕೊಂಡೊಯ್ದಿದ್ದರು.
ಭಾರತದ ಜೈಲಿನಲ್ಲಿ ಬಂಧಿಯಾಗಿದ್ದ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್, ಅಲ್ ಉಮರ್ ಮುಜಾಹಿದ್ದೀನ್, ಮುಷ್ತಾಕ್ ಅಹ್ಮದ್ ಜರ್ಗರ್ ಮತ್ತು ಬ್ರಿಟಿಷ್ ಮೂಲದ ಅಲ್-ಖೈದಾ ನಾಯಕ ಅಹ್ಮದ್ ಒಮರ್ ಸಯೀದ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲು ಅಪಹರಣ ಮಾಡಲಾಗಿತ್ತು. ಬಳಿಕ ಉಗ್ರರನ್ನು ಬಿಡುಗಡೆಗೊಳಿಸಿ ಅಮಾಯಕ ಜನರನ್ನು ಮರಳಿ ಅದೇ ವಿಮಾನದಲ್ಲಿ ಕರೆತರಲಾಗಿತ್ತು.
zahoor mistry alias zahid akund, one of the terrorists who hijacked air india flight ic-814 in 1999, was shot dead by two bike-riding men in karachi, pakistan.zahoor identified with the terrorist group jaish-e-mohammad. two attackers opened fire and were caught on cctv camera. the identity was not ascertained as he was wearing a mask on his face.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm