ಬ್ರೇಕಿಂಗ್ ನ್ಯೂಸ್
22-03-22 06:57 pm HK Desk news ದೇಶ - ವಿದೇಶ
ನವದೆಹಲಿ, ಮಾ.22: 1990ರಲ್ಲಿ ಕಾಶ್ಮೀರಿ ಪಂಡಿತರ ಭೀಕರ ಹತ್ಯಾಕಾಂಡ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಲೇ ಅದಕ್ಕೆ ಕಾರಣವಾಗಿದ್ದಾರೆ ಎಂಬ ಗಂಭೀರ ಆರೋಪ ಹೊತ್ತಿರುವ ಆಗಿನ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ನರಮೇಧಕ್ಕೆ ನಾನು ಕಾರಣ ಆಗಿದ್ದಲ್ಲಿ ನನ್ನನ್ನು ಗಲ್ಲಿಗೇರಿಸಲಿ. ದೇಶದ ಯಾವುದೇ ಭಾಗದಲ್ಲಿ ಗಲ್ಲಿಗೇರಲು ತಯಾರಿದ್ದೇನೆ ಎಂದು ಹೇಳಿದ್ದಾರೆ.
ಇಂಡಿಯಾ ಟುಡೇ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವ ಫಾರೂಕ್ ಅಬ್ದುಲ್ಲಾ, ಘಟನೆ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ತನಿಖಾ ತಂಡ ಅಥವಾ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡಿದರೆ ಸತ್ಯ ಹೊರಬಂದೀತು. ಯಾರು ಕೃತ್ಯಕ್ಕೆ ಕಾರಣ ಅನ್ನೋದು ಹೊರಬರುತ್ತದೆ. ಒಂದು ವೇಳೆ ಫಾರೂಕ್ ಅಬ್ದುಲ್ಲಾ ಕಾರಣ ಎಂದಾಗಿದ್ದಲ್ಲಿ ದೇಶದ ಯಾವುದೇ ಮೂಲೆಯಲ್ಲಿ ಗಲ್ಲು ಗಂಬಕ್ಕೇರಲು ತಯಾರಿದ್ದೇನೆ. ತನಿಖೆ ಎದುರಿಸುವುದಕ್ಕೂ ಸಿದ್ಧನಿದ್ದೇನೆ. ಆದರೆ, ಸುಮ್ಮನೆ ನನ್ನ ಮೇಲೆ ಆರೋಪ ಹೊರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ನಾನು ಈ ಆರೋಪ ಹೊತ್ತುಕೊಳ್ಳಲು ಸಿದ್ಧನಿಲ್ಲ. ಜನರಿಗೆ ಸತ್ಯ ತಿಳಿಯಬೇಕು ಎಂದಿದ್ದರೆ, ಆಗ ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥರಾಗಿದ್ದವರನ್ನು ಪ್ರಶ್ನೆ ಮಾಡಿ. ಅಥವಾ ಆಗ ಕೇಂದ್ರ ಸಚಿವರಾಗಿದ್ದ, ಈಗ ಕೇರಳ ರಾಜ್ಯಪಾಲರಾಗಿರುವ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕೇಳಿ. ಒಂದಷ್ಟು ಸತ್ಯ ಹೊರ ಬರಬಹುದು ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಕಾಶ್ಮೀರ್ ಫೈಲ್ಸ್ ಅನ್ನುವ ಸಿನಿಮಾ ಪೂರ್ತಿಯಾಗಿ ಪೂರ್ವಾಗ್ರಹ ಪೀಡಿತವಾಗಿ ಕೂಡಿದೆ. ಆಗ ನಡೆದಿರುವ ದುರಂತ ಮಾತ್ರ ರಾಜ್ಯದ ಪ್ರತೀ ಜನರನ್ನೂ ತಟ್ಟಿತ್ತು. ಹಿಂದು, ಮುಸ್ಲಿಂ ಎಲ್ಲರನ್ನೂ ಘಾಸಿಗೊಳಿಸಿತ್ತು. ನನ್ನ ಹೃದಯವೂ ಕಲಕಿದ್ದು, ಅದರಿಂದಾದ ಘಾಸಿಯಿಂದ ಹೊರಬಂದಿಲ್ಲ. ಅದರಲ್ಲಿ ಕೆಲವು ರಾಜಕೀಯ ಪಕ್ಷಗಳ ಪಾತ್ರವೂ ಇತ್ತು ಎಂದು ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.
With the Kashmiri Pandit exodus back at the centre of political discourse following the release of the film 'The Kashmir Files', former Jammu and Kashmir chief minister Farooq Abdullah said he is ready to be hanged anywhere in the country if he is found responsible for the events of 1990.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm