ಪಾಸಿಟಿವ್ ಅಗೋ ಮೊದಲು ಪಿಎಂ ಕಚೇರಿಯಲ್ಲಿ ಸಂಪುಟ ಸಭೆ ನಡೆಸಿದ್ದ ಅಮಿತ್ ಷಾ

02-08-20 03:05 pm       Headline Karnataka News Network   ದೇಶ - ವಿದೇಶ

ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಕೊರೊನಾ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಿತರ ಬಗ್ಗೆ ಆರೋಗ್ಯ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಪಾಸಿಟಿವ್ ಆದ ಕೆಲವು ದಿನದ ಹಿಂದಷ್ಟೇ ಅಮಿತ್ ಷಾ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಸಿದ್ದರು ಎನ್ನಲಾಗುತ್ತಿದ್ದು .

ನವದೆಹಲಿ, ಆಗಸ್ಟ್ 2: ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಕೊರೊನಾ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಿತರ ಬಗ್ಗೆ ಆರೋಗ್ಯ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಪಾಸಿಟಿವ್ ಆದ ಕೆಲವು ದಿನದ ಹಿಂದಷ್ಟೇ ಅಮಿತ್ ಷಾ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಸಿದ್ದರು ಎನ್ನಲಾಗುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. 

ಆದರೆ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೋವಿಡ್ ನಿಯಮಗಳನ್ನು  ಪಾಲನೆ ಮಾಡಲಾಗಿತ್ತು. ಅಧಿಕಾರಿಗಳು ಮತ್ತು ಸಚಿವರು ಮಾಸ್ಕ್ ಧರಿಸಿದ್ದಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಕಳೆದ ಕೆಲವು ತಿಂಗಳುಗಳಿಂದ ಕೋವಿಡ್ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಲಾಗುತ್ತಿದ್ದು ಸಂಪೂರ್ಣ ತಪಾಸಣೆ ನಡೆಸಿದ ಬಳಿಕವಷ್ಟೇ ಒಳಗೆ ಬಿಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. 

ಹಾಗಿದ್ದರೂ, ಅಮಿತ್ ಷಾ ಸ್ವತಃ ತನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ತಪಾಸಣೆಗೆ ಒಳಗಾಗುವಂತೆ ಸೂಚನೆ ನೀಡಿದ್ದಾರೆ. ಈ ನಡುವೆ, ಅಮಿತ್ ಷಾಗೆ ಸೋಂಕು ಹೇಗೆ ಹರಡಿದೆ ಅನ್ನುವ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಸಚಿವರ ಸಂಪರ್ಕಕ್ಕೆ ಬಂದವರಿಗೆ ಯಾರಿಗಾದ್ರೂ ಸೋಂಕು ಇತ್ತೇ ಅನ್ನುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಕೊನೆಯ ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಅಧಿಕಾರಿಗಳು ಮತ್ತು ಸಚಿವರು ಈಗ ಕ್ವಾರಂಟೈನ್ ಆಗುವ ಸಾಧ್ಯತೆಯಿದೆ. ಆದಾಗ್ಯೂ ಯಾವಾಗ ಈ ಸಭೆ ನಡೆದಿತ್ತು ಅನ್ನುವುದರ ಬಗ್ಗೆ ಖಚಿತ ಮಾಹಿತಿ ಬಿಟ್ಟುಕೊಟ್ಟಿಲ್ಲ.