ಅಕ್ರಮ ಹಣ ವರ್ಗಾವಣೆ ಪ್ರಕರಣ ;  ನವಾಬ್​ ಮಲಿಕ್​ಗೆ ಸುಪ್ರೀಂ ಮಧ್ಯಂತರ ಜಾಮೀನು ರಿಜೆಕ್ಟ್ 

02-04-22 05:28 pm       HK Desk news   ದೇಶ - ವಿದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ಎನ್​ಸಿಪಿ ನಾಯಕ ನವಾಬ್​ ಮಲಿಕ್​ಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ. ಅಲ್ಲದೇ, ಬಾಂಬೆ ಹೈಕೋರ್ಟ್​ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.

ನವದೆಹಲಿ, ಏ 02: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ಎನ್​ಸಿಪಿ ನಾಯಕ ನವಾಬ್​ ಮಲಿಕ್​ಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ. ಅಲ್ಲದೇ, ಬಾಂಬೆ ಹೈಕೋರ್ಟ್​ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.

ನ್ಯಾಷನಲ್​ ಕಾಂಗ್ರೆಸ್​ ನಾಯಕ ನವಾಬ್​ ಮಲಿಕ್​ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿತರಾಗಿ ಫೆ.23 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಂಧನದ ವಿರುದ್ಧ ಜಾಮೀನು ಮಂಜೂರು ಕೋರಿ ಬಾಂಬೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದಾಗ, ಅರ್ಜಿ ವಿಚಾರಣೆ ಬಳಿಕ ಬಾಂಬೆ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ ಅರ್ಜಿ ತಿರಸ್ಕರಿಸಿತ್ತು.

Supreme Court: Latest news, Updates, Photos, Videos and more.

ಬಾಂಬೆ ಹೈಕೋರ್ಟ್​ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ ನವಾಬ್​ ಮಲಿಕ್​ ತುರ್ತು ವಿಚಾರಣೆಗೆ ಕೋರಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪೀಠ, ಬಾಂಬೆ ಹೈಕೋರ್ಟ್​ ಆದೇಶವನ್ನು ಎತ್ತಿ ಹಿಡಿದು ಜಾಮೀನು ಮಂಜೂರು ಮಾಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

Maharashtra Minister and NCP leader Nawab Malik on Saturday filed a petition in the Supreme Court challenging the Bombay HC order which had rejected his  plea on ED action against him. Malik is in judicial custody till April 4, in a money laundering case.