ಹಲಾಲ್ ಉತ್ಪನ್ನ ನಿಷೇಧಿಸಲು ಸುಪ್ರೀಂ ಕೋರ್ಟಿನಲ್ಲಿ ದಾವೆ ; ಸಂವಿಧಾನ ಉಲ್ಲಂಘನೆಯೆಂದು ವಾದ 

23-04-22 12:27 pm       HK Desk news   ದೇಶ - ವಿದೇಶ

ದೇಶಾದ್ಯಂತ ಹಲಾಲ್ ಉತ್ಪನ್ನಗಳನ್ನು ನಿಷೇಧಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. 

ನವದೆಹಲಿ, ಎ.23: ದೇಶಾದ್ಯಂತ ಹಲಾಲ್ ಉತ್ಪನ್ನಗಳನ್ನು ನಿಷೇಧಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. 

ದೇಶದಲ್ಲಿ 15% ಮಾತ್ರ ಇರುವ ಮುಸ್ಲಿಂ ಅಲ್ಪಸಂಖ್ಯಾತರಿಗೆ ಹಲಾಲ್ ಆಹಾರ ಬೇಕು ಎಂಬ ಕಾರಣಕ್ಕೆ 85 ಶೇಕಡಾ ಇರುವ ಇತರ ಬಹುಸಂಖ್ಯಾತರ ಮೇಲೆ ಹಲಾಲ್ ಉತ್ಪನ್ನಗಳನ್ನು ಹೇರಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ. 

ವಕೀಲ ವಿಭೋರ್ ಆನಂದ್ ಎಂಬವರು ಹಲಾಲ್ ಉತ್ಪನ್ನಗಳನ್ನು ಹಾಗೂ ಹಲಾಲ್ ಪ್ರಮಾಣೀಕರಣವನ್ನು ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹಲಾಲ್ ಉತ್ಪನ್ನಗಳನ್ನು ಮಾರಾಟ ಮಾಡುವುದು ಸಂವಿಧಾನದ 14 ಹಾಗೂ 21ನೇ ವಿಧಿಯ ಉಲ್ಲಂಘನೆಯಾಗಿದೆ.

Supreme Court rejects petition calling for ban on Halal slaughter

ದೇಶದಲ್ಲಿ 1974 ರಲ್ಲಿ ಹಲಾಲ್ ಪ್ರಮಾಣೀಕರಣ ವ್ಯವಸ್ಥೆ ಆರಂಭವಾಗಿದ್ದು, ಮೊದಲಿಗೆ ಇದು ಮಾಂಸದ ಉತ್ಪನ್ನಗಳಿಗೆ ಸೀಮಿತವಾಗಿತ್ತು. ಈಗ ಫಾರ್ಮಾಸ್ಯುಟಿಕಲ್ಸ್, ಕ್ಯಾಸ್ಮೆಟಿಕ್ಸ್, ಆರೋಗ್ಯ ಉತ್ಪನ್ನಗಳು, ವೈದ್ಯಕೀಯ ಉಪಕರಣಗಳಿಗೂ ಪ್ರಮಾಣೀಕರಣ ನೀಡಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

A plea has been moved in the Supreme Court seeking a nation-wide ban on Halal certified products and also withdrawal of Halal certification.