ಬ್ರೇಕಿಂಗ್ ನ್ಯೂಸ್
25-04-22 11:09 am HK Desk news ದೇಶ - ವಿದೇಶ
ನವದೆಹಲಿ, ಎ.25: 'ಸಹಾರಾ ರೇ ಸ್ವಿಮ್' ಹೆಸರಿನ ಬಿಕಿನಿ ಬಟ್ಟೆಗಳ ಬ್ರಾಂಡ್ ಕಂಪನಿಯೊಂದು ಹಿಂದು ದೇವರನ್ನು ಬಿಕಿನಿಗಳಲ್ಲಿ ಮುದ್ರಿಸಿ ಹಿಂದುಗಳ ಭಾವನೆಗಳಿಗೆ ಘಾಸಿ ಮಾಡಿದೆ. ಹೊಸದಾಗಿ ಲಾಂಚ್ ಮಾಡಿರೋ ಈಜುಡುಗೆಗಳ ಮೇಲೆ ಹಿಂದೂ ದೇವತೆಗಳ ಚಿತ್ರಗಳನ್ನು ಮುದ್ರಿಸಿದ್ದು ಅಮೆಜಾನ್ ಇನ್ನಿತರ ಆನ್ಲೈನ್ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ.
ಸಹಾರಾ ರೇ ಎಂಬ ಕಂಪನಿಯ ಒಡೆತನದಲ್ಲಿರುವ ಬ್ರಾಂಡ್ ಇದಾಗಿದ್ದು 'ಔರಾ ಕಲೆಕ್ಷನ್ 2022' ಹೆಸರಿನಲ್ಲಿ ಸ್ವಿಮ್ ಸೂಟ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಥಾಂಗ್ಸ್ ಮತ್ತು ಮೈಕ್ರೋ ಸ್ಟ್ರಿಂಗ್ ಟಾಪ್‌ಗಳಲ್ಲಿ ಹಿಂದೂ ದೇವತೆಗಳ ಚಿತ್ರಗಳನ್ನು ಮುದ್ರಿಸಿ ಅಣಕಿಸಲಾಗಿದೆ. ವಿವಾದಾತ್ಮಕ ಸ್ವಿಮ್ ಸೂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಜಾಲತಾಣದಲ್ಲಿ ಭಾರೀ ಆಕ್ರೋಶವೂ ವ್ಯಕ್ತವಾಗಿದೆ.
ಇದು ಸಹಜವಾಗಿ ಮುದ್ರಿಸಿರುವುದಲ್ಲ. ಹಾಗೆ ದೇವರ ಚಿತ್ರ ಮುದ್ರಿಸಲೇಬೇಕೆಂಬ ಉದ್ದೇಶ ಕಂಪನಿಗಿದ್ದರೆ, ಯಾಕೆ ಜೀಸಸ್ ಚಿತ್ರವನ್ನು ಮುದ್ರಿಸಿಲ್ಲ. ಅದನ್ನೂ ಮುದ್ರಿಸಬೇಕಿತ್ತಲ್ಲಾ ಎಂದು ಟ್ವಿಟ್ಟರ್ ಬಳಕೆದಾರರು ಪ್ರಶ್ನಿಸಿದ್ದಾರೆ. ಹಿಂದುತ್ವ ಅನ್ನೋದು ಜೋಕ್ ಅಲ್ಲ, ಅಥವಾ ಕಂಪನಿಗಳಿಗೆ ಹಣ ಮಾಡಿಕೊಳ್ಳುವ ಮಾರ್ಗವೂ ಅಲ್ಲವೆಂದು ಮತ್ತೋರ್ವ ಯುವತಿ ಆಕ್ರೋಶ ಹೊರಹಾಕಿದ್ದಾರೆ.
ಸಹರಾ ರೇ ಕಂಪನಿ ಈ ರೀತಿ ಮಾಡಿರೋದು ಇದೇ ಮೊದಲೇನಲ್ಲ. 2019ರಲ್ಲಿ ಫ್ಲೋರ್ ಮ್ಯಾಟ್ ಹಾಗೂ ಟಾಯ್ಲೆಟ್ ಕವರ್‌ಗಳ ಮೇಲೆ ಹಿಂದು ದೇವತೆಗಳ ಚಿತ್ರವನ್ನು ಮುದ್ರಿಸಿತ್ತು. ಅದನ್ನು ಅಮೇಜಾನ್‌ನಲ್ಲಿ ಮಾರಾಟಕ್ಕಿಡಲಾಗಿತ್ತು. ಕೆಲವು ಕಂಪನಿಗಳು ಹಿಂದು ದೇವತೆಗಳ ಫೋಟೊ ಬಳಸಿದ ಶೂ, ಟಾಯ್ಲೆಟ್ ಮಾದರಿಗಳನ್ನೂ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದನ್ನೂ ನೆಟ್ಟಿಗರು ಟ್ವಿಟರ್ ನಲ್ಲಿ ಅಪ್ಲೋಡ್ ಮಾಡಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾನ್ ಅಮೆಜಾನ್ ಎಂದು ಬಿಕಿನಿ ಮಾರಾಟಕ್ಕಿಟ್ಟಿರುವ ಪೋಸ್ಟ್ ಲಿಂಕ್ ಹಾಕಿ ಹಲವರು ಟ್ವೀಟ್ ಮಾಡಿದ್ದಾರೆ.
A clothing brand named ‘Sahara Ray Swim‘ has courted controversy by printing images of Hindu deities on its new collection of swimwear. The brand is owned by Sahara Ray, a young surfer turned Only Fans model.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm