ಬ್ರೇಕಿಂಗ್ ನ್ಯೂಸ್
26-04-22 10:07 pm HK News Desk ದೇಶ - ವಿದೇಶ
ನವದೆಹಲಿ, ಎ.26: ಕರ್ನಾಟಕ ಹೈಕೋರ್ಟ್ ನೀಡಿದ್ದ ಹಿಜಾಬ್ ಕುರಿತ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಈ ಬಗ್ಗೆ ಹಿರಿಯ ವಕೀಲೆ ಮೀನಾಕ್ಷಿ ಅರೋರಾ, ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಅವರಿದ್ದ ಪೀಠಕ್ಕೆ ತುರ್ತಾಗಿ ಅರ್ಜಿಯನ್ನು ಪರಿಗಣಿಸುವಂತೆ ಕೋರಿಕೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಾಧೀಶರು, ನಾನು ಅರ್ಜಿಯನ್ನು ಪರಿಗಣಿಸಿದ್ದು ಇನ್ನೆರಡು ದಿನ ಕಾಯುವಂತೆ ಹೇಳಿದ್ದಾರೆ. ಇದಕ್ಕೂ ಹಿಂದೆ ತುರ್ತಾಗಿ ಅರ್ಜಿ ಪರಿಗಣಿಸಬೇಕೆಂಬ ವಕೀಲರ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿರಲಿಲ್ಲ. ಅಷ್ಟು ತುರ್ತಾಗಿ ಅರ್ಜಿ ವಿಚಾರಣೆ ನಡೆಸುವ ಅಗತ್ಯವೇನಿದೆ ಎಂದು ಪ್ರಶ್ನೆ ಮಾಡಿದ್ದರು.
ಕಳೆದ ಮಾರ್ಚ್ 24ರಂದು ಸುಪ್ರೀಂ ಕೋರ್ಟಿನಲ್ಲಿ ಹಿಜಾಬ್ ಹೋರಾಟಗಾರ್ತಿಯರ ಪರವಾಗಿ ಹಾಜರಾಗಿದ್ದ ಕರ್ನಾಟಕದ ಹಿರಿಯ ವಕೀಲ ದೇವದತ್ತ ಕಾಮತ್, ಅರ್ಜಿಯನ್ನು ತುರ್ತಾಗಿ ಪರಿಗಣಿಸಿ ನ್ಯಾಯ ದೊರಕಿಸಬೇಕು. ಈಗಾಗಲೇ ಶೈಕ್ಷಣಿಕ ವರ್ಷ ಕೊನೆಯ ಹಂತಕ್ಕೆ ಬಂದಿದೆ. ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದರೆ ಮಾರ್ಚ್ 28ರಿಂದ ಆರಂಭಗೊಳ್ಳುವ ಪರೀಕ್ಷೆಗೆ ಹಾಜರಾಗಲು ಕಷ್ಟವಾಗುತ್ತದೆ ಎಂದು ಮನವಿ ಮಾಡಿದ್ದರು. ಮನವಿಗೆ ಪ್ರತಿಕ್ರಿಯಿಸಿದ್ದ ಕೋರ್ಟ್, ಹಿಜಾಬ್ ವಿಚಾರವನ್ನು ರಾಷ್ಟ್ರ ಮಟ್ಟಕ್ಕೆ ತಂದು ಸೆನ್ಸೇಶನ್ ಮಾಡುವುದು ಬೇಡ ಎಂದು ಹೇಳಿತ್ತು.
ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ.ಖಾಝಿ ಅವರಿದ್ದ ತ್ರಿಸದಸ್ಯ ಪೀಠವು ಮಾರ್ಚ್ 15ರಂದು ಹಿಜಾಬ್ ಕುರಿತ ವಿವಾದದ ಬಗ್ಗೆ ತೀರ್ಪು ನೀಡಿತ್ತು. ಹಿಜಾಬ್ ಧರಿಸುವುದು ಇಸ್ಲಾಂ ಪ್ರಕಾರ ಕಡ್ಡಾಯ ಆಚರಣೆಯಲ್ಲ. ಹಾಗಾಗಿ ತರಗತಿ ಕೊಠಡಿಯೊಳಗೆ ಹಿಜಾಬ್ ಧರಿಸಬೇಕೆಂದಿಲ್ಲ ಎಂದು ತೀರ್ಪು ನೀಡಿತ್ತು. ಅಲ್ಲದೆ, ತರಗತಿಯೊಳಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಅದಕ್ಕೂ ಮುನ್ನ ರಾಜ್ಯ ಸರಕಾರ ಸಮವಸ್ತ್ರ ಕಡ್ಡಾಯಗೊಳಿಸಿರುವ ಕಾಲೇಜು, ಶಾಲೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶ ಇಲ್ಲವೆಂದು ಸುತ್ತೋಲೆ ಹೊರಡಿಸಿತ್ತು. ಇದನ್ನು ಆಕ್ಷೇಪಿಸಿ ಉಡುಪಿಯ ಸರಕಾರಿ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು.
The Supreme Court Tuesday said it will consider listing for hearing appeals challenging the Karnataka High Court order in the hijab ban matter and asked a counsel who requested it to wait. “I will list. Wait for two days,” Chief Justice of India N V Ramana told senior advocate Meenakshi Arora when she mentioned the matter.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm