ಬ್ರೇಕಿಂಗ್ ನ್ಯೂಸ್
13-05-22 02:49 pm HK Desk News ದೇಶ - ವಿದೇಶ
ನವದೆಹಲಿ, ಮೇ 13: ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕೆಂಬ ಕೂಗಿನ ಮಧ್ಯೆಯೇ ಮಹತ್ವದ ಬದಲಾವಣೆಗೆ ಕೇಂದ್ರ ನಾಯಕತ್ವ ಮುಂದಾಗಿದೆ ಎನ್ನುವ ಮಾಹಿತಿಗಳಿವೆ. ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕುವ ಸಲುವಾಗಿ ಒಂದು ಕುಟುಂಬ, ಒಂದೇ ಟಿಕೆಟ್ ಎನ್ನುವ ಹೊಸ ನೀತಿಯನ್ನು ಪಕ್ಷದಲ್ಲಿ ಕಡ್ಡಾಯಗೊಳಿಸಲು ನಿಯಮ ತರುವ ಬಗ್ಗೆ ಸುಳಿವು ನೀಡಲಾಗಿದೆ.
ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸುಳಿವನ್ನು ಹಿರಿಯ ನಾಯಕ ಅಜಯ್ ಮಾಕನ್ ನೀಡಿದ್ದಾರೆ. ಪಕ್ಷದಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಕಾರ್ಯಕರ್ತನಾಗಿ ಕೆಲಸ ಮಾಡದ ಹೊರತು ನಾಯಕರ ಹತ್ತಿರದ ಸಂಬಂಧಿಗಳಿಗೆ ಟಿಕೆಟ್ ನೀಡುವಂತಿಲ್ಲ ಎಂಬ ನಿಮಯ ತರುವ ಬಗ್ಗೆ ಚಿಂತನೆ ಇದೆ. ಯಾವುದೇ ವ್ಯಕ್ತಿ ನಿರಂತರವಾಗಿ ಒಂದು ಹುದ್ದೆಯಲ್ಲಿದ್ದರೆ, ಅಂಥವರನ್ನು ಹುದ್ದೆಯಿಂದ ಇಳಿಸಲಾಗುವುದು. ಆತ ಮೂರು ವರ್ಷಗಳ ವರೆಗೆ ಹುದ್ದೆ ಇಲ್ಲದೆ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯಬೇಕು. ಆನಂತರ ಮತ್ತೆ ಹಳೆಯ ಹುದ್ದೆಗೆ ಮರಳಲು ಅವಕಾಶ ಇರುತ್ತದೆ ಎಂದು ಅಜಯ್ ಮಾಕನ್ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿರಿಸಿ ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಚಿಂತನಾ ಶಿಬಿರ ನಡೆಸಲಾಗುತ್ತಿದೆ. ರಾಷ್ಟ್ರ ಮಟ್ಟದ ನಾಯಕರು, ಚಿಂತಕರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿಯ ಧ್ರುವೀಕರಣ ರಾಜಕೀಯಕ್ಕೆ ಪ್ರತಿಯಾಗಿ ನೀತಿ ರೂಪಿಸುವ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಇದಕ್ಕಾಗಿ ಶಿಬಿರವನ್ನು ನವ್ ಸಂಕಲ್ಪ್ ಚಿಂತನ್ ಶಿಬಿರ್ ಎಂದು ಹೆಸರಿಸಲಾಗಿದೆ. ಮೇ 13ರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶಿಬಿರಕ್ಕೆ ಚಾಲನೆ ನೀಡಿ, ಭಾಷಣ ಮಾಡಲಿದ್ದಾರೆ. ಮೂರು ದಿನಗಳ ಶಿಬಿರದಲ್ಲಿ ಮಹತ್ವದ ಆರು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ರಾಜಕೀಯ, ಸಂಘಟನೆ, ಆರ್ಥಿಕ ನೀತಿ, ಕೃಷಿ, ಯುವ ಜನಾಂಗ ಮತ್ತು ಸಾಮಾಜಿಕ ಕಲ್ಯಾಣ ಈ ವಿಚಾರಗಳ ಬಗ್ಗೆ ವಿಚಾರ ವಿಮರ್ಶೆ ನಡೆಯಲಿದೆ.
Senior Congress leader Ajay Maken said there would be big organisational changes in the party after the three-day brainstorming session - Chintan Shivir, which will be held in Rajashthan's Udhaipur.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm