ಬ್ರೇಕಿಂಗ್ ನ್ಯೂಸ್
19-05-22 01:14 pm HK Desk News ದೇಶ - ವಿದೇಶ
ಗುವಾಹಟಿ, ಮೇ 19: ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮ ಅಸ್ಸಾಂನಲ್ಲಿ ಮುಂಗಾರು ಆರಂಭದಲ್ಲೇ ರಣಭೀಕರ ಮಳೆಯಾಗಿದ್ದು 26 ಜಿಲ್ಲೆಗಳ ವ್ಯಾಪ್ತಿಯಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. 1089 ಗ್ರಾಮಗಳಲ್ಲಿ ನೆರೆಪೀಡಿತವಾಗಿದ್ದು, ಎರಡು ದಿನಗಳ ಮಳೆಯಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಗಳಿವೆ.
ಅಸ್ಸಾಮ್ ರಾಜ್ಯದ 20 ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ಯಾರಾ ಮಿಲಿಟರಿ, ಭೂಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು ಪ್ರವಾಹದ ಮಧ್ಯೆ ಸಿಕ್ಕಿಬಿದ್ದವರನ್ನು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. 20 ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಪ್ರವಾಹ ಮತ್ತು ಭೂಕುಸಿತದಿಂದಾಗಿ ತೊಂದರೆಗೆ ಸಿಲುಕಿದ್ದಾರೆ.


ಆಯಾ ಜಿಲ್ಲಾಡಳಿತಗಳಿಂದ ನಿರಾಶ್ರಿತರಿಗಾಗಿ 145 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರವಾಹದ ಸ್ಥಳಗಳಿಂದ ಜನರು ತಾವಾಗಿಯೇ ಈಜಿಕೊಂಡು ರಸ್ತೆಯಲ್ಲಿ ಬರುತ್ತಿದ್ದಾರೆ. ಗುವಾಹಟಿ ಭಾಗದ ಹವಾಮಾನ ಘಟಕವು ಇನ್ನೂ ಕೆಲವು ದಿನಗಳ ವರೆಗೆ ಮಳೆಯಾಗುವ ಮುನ್ಸೂಚನೆ ನೀಡಿದೆ.


ಕಾಚಾರ್ ಜಿಲ್ಲೆ ಹೆಚ್ಚು ತೊಂದರೆಗೀಡಾಗಿದ್ದು, ಅಲ್ಲಿನ ಪ್ರವಾಹ ಮತ್ತು ತೀವ್ರ ಭೂಕುಸಿತ ಉಂಟಾಗಿದೆ. ಉಳಿದಂತೆ ಹೋಜಾಯ್, ನಾಗಾಂವ್, ದಾರಾಂಗ್, ಬಿಸ್ವನಾಥ್ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು ನೂರಾರು ಹಳ್ಳಿಗಳಲ್ಲಿ ತಗ್ಗು ಪ್ರದೇಶಗಳು ನೀರಿನಿಂದ ಆವರಿಸಿವೆ. ಕೊಪ್ಲಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಆಸುಪಾಸಿನ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಕಾಜೀರಂಗ ನ್ಯಾಶನಲ್ ಪಾರ್ಕ್ ಗೂ ನೀರು ನುಗ್ಗಿದ್ದು ಅಲ್ಲಿರುವ ಪ್ರಾಣಿಗಳು, ಆನೆಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗುತ್ತಿದೆ.
#Landslide in between Potin and Possa, Itanagar-Ziro road while debris were being cleared on Monday morning. pic.twitter.com/6McpXQKywn
— The Arunachal Times (@arunachaltimes_) May 16, 2022
The flood situation in Assam worsened on Wednesday, with one more person killed in Darrang district, bringing the total number of people killed in the current pre-monsoon floods and landslides in Assam to nine, according to officials. More than 6.62 lakh people have been affected in 27 of the state's 34 districts.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm