ಬ್ರೇಕಿಂಗ್ ನ್ಯೂಸ್
19-05-22 04:07 pm HK Desk News ದೇಶ - ವಿದೇಶ
ನವದೆಹಲಿ, ಮೇ 19: 1988ರ ರೋಡ್ ರೇಜ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. 34 ವರ್ಷಗಳಷ್ಟು ಹಳೆಯದಾದ ರೋಡ್ ರೇಜ್ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಹೆಚ್ಚು ಗಂಭೀರ ಸ್ವರೂಪದ ಆರೋಪಗಳನ್ನು ಎದುರಿಸಬೇಕೇ ಎಂದು ನಿರ್ಧರಿಸಲು ಸುಪ್ರೀಂ ಕೋರ್ಟ್ ಈ ವರ್ಷದ ಫೆಬ್ರವರಿಯಲ್ಲಿ ಪ್ರಕರಣವನ್ನು ಮರುಪರಿಶೀಲನೆಗೆ ತೆಗೆದುಕೊಂಡಿತ್ತು.
ಸಂತ್ರಸ್ತೆಯ ಕುಟುಂಬವು ಶಿಕ್ಷೆಯ ಹೆಚ್ಚಳಕ್ಕೆ ಕೋರಿ ಮತ್ತು ಗಂಭೀರ ಅಪರಾಧಕ್ಕೆ ಶಿಕ್ಷೆಯನ್ನು ನೀಡಲು ಕೋರಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಜೈಲು ಶಿಕ್ಷೆ ವಿಧಿಸಬಾರದು ಎಂದು ಸಿಧು ಮನವಿ ಮಾಡಿದ್ದರು. ಈ ಕುರಿತು ನವಜೋತ್ ಸಿಂಗ್ ಸಿಧು ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ರೋಡ್ ರೇಜ್ ಪ್ರಕರಣದಲ್ಲಿ ತಮಗೆ ಹೆಚ್ಚಿನ ಶಿಕ್ಷೆ ನೀಡಬೇಡಿ ಎಂದು ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎಂಬ ವ್ಯಕ್ತಿಗೆ "ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ" ಅಪರಾಧಕ್ಕಾಗಿ ಸಿಧುರನ್ನು ಮೇ 2018 ರಲ್ಲಿ ಸುಪ್ರೀಂ ಕೋರ್ಟ್ ತಪ್ಪಿತಸ್ಥರೆಂದು ಪರಿಗಣಿಸಿದ್ದರೂ, ಅದು ಅವರಿಗೆ ಜೈಲು ಶಿಕ್ಷೆಯನ್ನು ತಪ್ಪಿಸಿತ್ತು ಮತ್ತು ರೂ 1,000 ದಂಡವನ್ನು ವಿಧಿಸಿತ್ತು.
1988 ರಲ್ಲಿ ಪಟಿಯಾಲದ ಗುರ್ನಾಮ್ ಸಿಂಗ್ ಸಾವನ್ನಪ್ಪಿದ ರೋಡ್ ರೇಜ್ ಪ್ರಕರಣದಲ್ಲಿ ಸಿಧು ಆರೋಪಿಯಾಗಿದ್ದರು. ಮೇ 2018 ರಲ್ಲಿ ಕೋರ್ಟ್ 1,000 ರೂಪಾಯಿ ದಂಡ ವಿಧಿಸುವ ಮೂಲಕ ಜೈಲು ಶಿಕ್ಷೆ ನೀಡದೇ ಸಿಧುಗೆ ಅವಕಾಶ ನೀಡಿತ್ತು. ಪ್ರಕರಣವು 30 ವರ್ಷಕ್ಕಿಂತ ಹಳೆಯದಾಗಿದೆ ಮತ್ತು ಆರೋಪಿಯು ಯಾವುದೇ ಆಯುಧವನ್ನು ಬಳಸಿಲ್ಲ ಎಂದು ಗಮನಿಸಿದ ಕೋರ್ಟ್ ದೋಷಮುಕ್ತಗೊಳಿಸಿತ್ತು
Will submit to the majesty of law ….
— Navjot Singh Sidhu (@sherryontopp) May 19, 2022
Congress leader Navjot Singh Sidhu was today sentenced to one year in jail in a 34-year-old road rage case by the Supreme Court, in a massive setback to the cricketer-politician just months after an election defeat.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm