ಬ್ರೇಕಿಂಗ್ ನ್ಯೂಸ್
03-10-20 03:07 pm Headline Karnataka News Network ಸಿನಿಮಾ
ನವ ದೆಹಲಿ, ಅಕ್ಟೋಬರ್ 03 : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಒಳಾಂಗಗಳ ಪೋಸ್ಟ್ ಮಾರ್ಟಂ ವರದಿಯನ್ನು ಏಮ್ಸ್ ಪುನರ್‌ಪರಿಶೀಲಿಸಿ ಸಿಬಿಐಗೆ ನೀಡಿದೆ. ಏಮ್ಸ್ ಪರಿಶೀಲನಾ ವರದಿಯ ಪ್ರಕಾರ ಸುಶಾಂತ್ ಸಿಂಗ್ ದೇಹದಲ್ಲಿ ಯಾವುದೇ ಜೈವಿಕ ವಿಷ ಪತ್ತೆಯಾಗಿಲ್ಲ ಎನ್ನಲಾಗಿದೆ.
ಸುಶಾಂತ್ ಸಾವು ಕೊಲೆ ಅಲ್ಲ, ಅದು ಆತ್ಮಹತ್ಯೆ ಪ್ರಕರಣವಾಗಿದೆ ಎಂದು ಖಾಸಗಿ ಮಾಧ್ಯಮವೊಂದರಲ್ಲಿ ಫೋರೆನ್ಸಿಕ್ ಮಂಡಳಿಯ ಮುಖ್ಯಸ್ಥ ಡಾ.ಸುಧೀರ್ ಗುಪ್ತ ಹೇಳಿದ್ದಾರೆ.
ಏಮ್ಸ್ ವೈದ್ಯರ ತಂಡವು ಅವರಲ್ಲಿ ಲಭ್ಯವಿರುವ ಶೇಕಡಾ 20 ರಷ್ಟು ಒಳಾಂಗಗಳ ಮಾದರಿಯನ್ನು ಆಧರಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಮತ್ತು ಒಳಾಂಗಗಳ ವರದಿಗಳನ್ನು ಮರು ಪರಿಶೀಲನೆ ಮಾಡಿತ್ತು. ಇಷ್ಟೇ ಅಲ್ಲದೆ ವಿಧಿವಿಜ್ಞಾನ ಸಂಸ್ಥೆಗಳು ಲ್ಯಾಪ್‌ಟಾಪ್, ಎರಡು ಹಾರ್ಡ್ ಡಿಸ್ಕ್, ಕ್ಯಾಮೆರಾ ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ಪರೀಕ್ಷಿಸಿವೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಸಿಬಿಐ ಆತ್ಮಹತ್ಯೆಯ ದೃಷ್ಟಿಕೋನದಿಂದ ತನ್ನ ತನಿಖೆಯನ್ನು ಮುಂದುವರಿಸಲಿದ್ದು, ಒಂದು ವೇಳೆ ಕೊಲೆಗೆ ಪುರಾವೆಗಳು ಲಭಿಸಿದರೆ ಐಪಿಸಿಯ ಸೆಕ್ಷನ್ 302 ಅಡಿಯಲ್ಲಿ ಸೇರಿಸಲಾಗುತ್ತದೆ ಎನ್ನಲಾಗುತ್ತಿದೆ . ಆದರೆ, ಸಿಬಿಐ 57 ದಿನಗಳಿಂದ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದುವರೆಗೆ ಕೊಲೆಯೆಂದು ಸಾಭೀತಾಗುವಂತಹ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ.
34 ವಯಸ್ಸಿನ ಸುಶಾಂತ್ ಜೂ.14ರಂದು ಮುಂಬೈನಲ್ಲಿರುವ ಅವರ ಅಪಾರ್ಟ್ ಮೆಂಟ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಇದನ್ನು ಆತ್ಮಹತ್ಯೆ ಎಂದು ಕರೆದಿದ್ದರೂ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹಗಳು ಹಬ್ಬಿದ್ದವು. ನ್ಯಾಯಕ್ಕಾಗಿ ಅಭಿಯಾನ ನಡೆಸಲಾಗಿತ್ತು. ಸುಶಾಂತ್ ಸಿಂಗ್ ಕುಟುಂಬದವರು ಶಂಕೆ ವ್ಯಕ್ತಪಡಿಸಿದ ಕಾರಣ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
ಈ ಪ್ರಕರಣದಲ್ಲಿ ನಿರ್ಣಾಯಕ ಔಷಧೀಯ ಹಾಗೂ ಕಾನೂನು ಅಭಿಪ್ರಾಯವನ್ನು ನೀಡಿದ ನಂತರ ಏಮ್ಸ್ ಸಮಿತಿಯು ಪರೀಕ್ಷೆಯನ್ನು ಪೂರ್ಣಗೊಳಿಸಿದೆ ಹಾಗೂ ಕಡತವನ್ನು ಮುಚ್ಚಿದೆ. ಸಿಬಿಐ ತಮ್ಮ ತನಿಖೆಯೊಂದಿಗೆ ವರದಿಯನ್ನು ದೃಢೀಕರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm