ಬ್ರೇಕಿಂಗ್ ನ್ಯೂಸ್
11-08-22 09:58 pm Source: Vijaykarnataka ಸಿನಿಮಾ
ನಟ ರಾಕಿಂಗ್ ಸ್ಟಾರ್ ಯಶ್ ( Yash ) ಅವರು 'ಕೆಜಿಎಫ್ 2' ಚಿತ್ರದಲ್ಲಿ ತೇಲುತ್ತಿದ್ದಾರೆ. ಯಶ್ ಮುಂದಿನ ಸಿನಿಮಾಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ. ಈ ನಡುವೆ ಗುರುವಾರ ಮೈಸೂರಲ್ಲಿ ಯಶ್ ಹವಾ ಜೋರಿತ್ತು. ಒಂದು ಸಣ್ಣ ಬದಲಾವಣೆ ಜೀವನದಲ್ಲಿ ಸಾಕಷ್ಟು ಬದಲಾವಣೆ ತರುತ್ತದೆ. ಆತ್ಮವಿಶ್ವಾಸವಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದರು.
ಮೈಸೂರುನಗರದ ಮಹಾರಾಜ ಕಾಲೇಜಿನ ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಯುವಜನ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಮೈಸೂರು ನಮ್ಮೂರು. ಇಲ್ಲಿನ ಪಡುವಾರಹಳ್ಳಿ, ಕಾಳಿದಾಸ ರಸ್ತೆ ಹಾಗೂ ಗಂಗೋತ್ರಿಯಲ್ಲಿ ಓಡಾಡಿದ್ದೇನೆ. ನಮ್ಮೂರಿನಲ್ಲಿ ದೇಶದ ಹೆಮ್ಮೆಯ ಧ್ವಜ ಹಿಡಿಯುವ ಕಾರ್ಯಕ್ರಮ ಆಯೋಜಿಸಿರುವುದರಿಂದ ಬಹಳ ಹೆಮ್ಮೆಯಿಂದ ಬಂದಿದ್ದೇನೆ. ವಿದ್ಯಾರ್ಥಿ ದಿಸೆಯಲ್ಲಿ ನಾನು ತಂದೆ ತಾಯಿ ಖುಷಿಯಾಗುವಂತೆ ಇರಲಿಲ್ಲ. ಒಂದು ಸಣ್ಣ ಬದಲಾವಣೆ ಜೀವನದಲ್ಲಿ ಸಾಕಷ್ಟು ಬದಲಾವಣೆ ತರುತ್ತದೆ. ನಾನೇನು ಹೆಚ್ಚು ಬದಲಾಗಿಲ್ಲ. ಮೊದಲು ಹೇಗಿದ್ದೆನೋ ಈಗಲೂ ಅದೇ ರೀತಿ ಇದ್ದೇನೆ" ಎಂದರು.
"ನಾವೀಗ ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮಾಡುತ್ತಿದ್ದೇವೆ. ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸದುಪಯೋಗ ಮಾಡಿಕೊಳ್ಳಬೇಕು. ಎಲ್ಲವನ್ನು ಜನರ ಮನೆ ಮುಂದೆ ತರಲು ಸರಕಾರಕ್ಕೂ ಕಷ್ಟಸಾಧ್ಯ. ಪ್ರತಿಯೊಬ್ಬರೂ ಜೀವನದಲ್ಲಿ ತಮಾಷೆ ಮಾಡ್ತಾ ಇರಿ, ಮಜಾ ಮಾಡ್ಕೊಂಡಿರಿ, ನಗು ನಗುತ್ತಾ ಇರಿ. ಸಂತಸದ ಯಾವುದೇ ಅವಕಾಶವನ್ನು ಕಳೆದುಕೊಳ್ಳಬೇಡಿ" ಎಂದು ಅವರು ಸಲಹೆ ನೀಡಿದರು.
"ಹುಚ್ಚು ಆತ್ಮ ವಿಶ್ವಾಸ ಇರಬೇಕು. ಕನ್ನಡ ಚಿತ್ರರಂಗ ದೊಡ್ಡದಾಗಿ ಬೆಳೆಯುತ್ತಾ ಅಂತ ಯಾರಾದರೂ ಊಹೆ ಮಾಡಿದ್ರಾ? ನೀವು ಒಳ್ಳೆಯದನ್ನ ಮಾತಾಡ್ತಾ, ಯೋಚನೆ ಮಾಡ್ತಾ ಹೋಗಿ. ತಂತಾನೆ ಅದು ಒಳ್ಳೆಯದಾಗುತ್ತದೆ. ನೀವು ಒಳ್ಳೆಯದು ಮಾಡ್ತಾ ಹೋಗಿ. ನಮ್ಮೊಳಗೆ ಸರ್ಕಾರ ಹುಟ್ಟಬೇಕು. ಪ್ರತಿಯೊಬ್ಬ ತನ್ನ ವೃತ್ತಿಯಲ್ಲಿ ಕಷ್ಟಪಟ್ಟು ಮುಂದೆ ಬರುವ ಮೂಲಕದೇಶದ ಪ್ರಗತಿ ಸಾಧಿಸಬಹುದು. ಹಳ್ಳಿಯ ಮೂಲೆಯಿಂದ ಬೆಳೆಯಬಹುದು. ನಿಮ್ಮಲ್ಲಿ ಸಾಧಿಸುವ ಚಲ ಇದ್ದರೆ ಗೆಲುವು ಸಾಧ್ಯ ಎಂದರು.ಮಜಾ ಮಾಡಿ, ತುಂಬಾ ಸೀರಿಯಸ್ ಆಗಬೇಡಿ. ಸಣ್ಣ ಸಣ್ಣ ಖುಷಿ ಅನುಭವಿಸಿ. ಫ್ರೆಂಡ್ಸ್ ಜೊತೆ ಸುತ್ತಾಡಿ, ಜೀವನ ಅನುಭವಿಸಿ. ಸಿಎಂ ಹಲವು ಕನಸು ಹೊಂದಿದ್ದಾರೆ. ಅವರ ಕನಸುಗಳೆಲ್ಲ ಈಡೇರಲಿ" ಎಂದು ಆಶಿಸುವೆ ಎಂದರು.
ನಟ ಯಶ್ ವೇದಿಕೆ ಏರುತ್ತಿದ್ದಂತೆ ವಿದ್ಯಾರ್ಥಿ ಸಮೂಹ ಶಿಳ್ಳೆ, ಚಪ್ಪಾಳೆ ತಟ್ಟಿ ತಮ್ಮ ಅಭಿಮಾನ ವ್ಯಕ್ತಪಡಿಸಿದರು. ಯಾರೇ ಅತಿಥಿ ಭಾಷಣಕ್ಕೆ ನಿಂತರೂ ರಾಕಿ, ರಾಕಿ ಎಂಬ ಘೋಷಣೆ ಕೂಗುತ್ತಿದ್ದರು.
ವಿದ್ಯಾರ್ಥಿಗಳ ಉತ್ಸಾಹದಿಂದ ಪ್ರೇರೇಪಿತರಾದ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ತಮ್ಮ ಭಾಷಣದಲ್ಲಿ ಯಶ್ ಅವರನ್ನು ಹೊಗಳಿದರು. ಯಶ್ ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಮಾತ್ರವಲ್ಲ. ಅವರು ಯುವಕರ ಐಕಾನ್. ಕನ್ನಡ ಚಿತ್ರರಂಗ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗ ಅವರ ಕಡೆ ತಿರುಗಿ ನೋಡಿದೆ. ಕೆಜಿಎಫ್ 1, ಕೆಜಿಎಫ್ 2 ಚಿತ್ರಗಳ ಯಶಸ್ಸಿನ ಮೂಲಕ ಇಡೀ ದೇಶಕ್ಕೆ ಅವರು ರಾಕಿಂಗ್ ಸ್ಟಾರ್ ಆಗಿದ್ದಾರೆ. ಕನ್ನಡ, ಕನ್ನಡತನವನ್ನು ಇಡೀ ದೇಶದಾದ್ಯಂತ ಯಶ್ ಪಸರಿಸಿದ್ದಾರೆ. ಅವರಂತೆ ನೀವು ಆಗಬೇಕು. ಆತ್ಮವಿಶ್ವಾಸ ಇದ್ದರೆ ಯಾರು ಏನು ಬೇಕಾದರೂ ಆಗಬಹುದು ಎಂದರು.
Rocking Star Yash Motivational Speech At Mysore Yuvajana Mahotsava.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm