Shivarajkumar Prabhudeva Starrer New Movie Shooting Starts In Bengaluru.

">

ಶಿವಣ್ಣ&ಪ್ರಭುದೇವ ಕಾಂಬಿನೇಷನ್‌ ಸಿನಿಮಾಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ

29-08-22 03:02 pm       Source: Vijayakarnataka   ಸಿನಿಮಾ

ನಟ ಶಿವರಾಜ್‌ಕುಮಾರ್‌, ಪ್ರಭುದೇವ, ನಿರ್ದೇಶಕ ಯೋಗರಾಜ್‌ ಭಟ್‌, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಕಾಂಬಿನೇಷನ್‌ನ ಹೊಸ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ..

'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್‌ನ, ಯೋಗರಾಜ್ ಭಟ್‌ ನಿರ್ದೇಶನದ ಹೊಸ ಸಿನಿಮಾಕ್ಕೆ ಕಳೆದ ಜೂನ್‌ನಲ್ಲಿ ಮುಹೂರ್ತ ನೆರವೇರಿತ್ತು. ಆನಂತರ ನಿರ್ದೇಶಕ ಯೋಗರಾಜ್ ಭಟ್‌ ಅವರು 'ಗಾಳಿಪಟ 2' ಸಿನಿಮಾದ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಇದೀಗ ಅವರು ಪುನಃ ಸಿನಿಮಾ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್‌ನ ಸಿನಿಮಾಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಿಸಿದ್ದಾರೆ.

ಈ ಸಿನಿಮಾವನ್ನು ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್‌ಟೇನ್‌ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿದ್ದಾರೆ. ಇದು ಈ ಬ್ಯಾನರ್‌ನ 47ನೇ ಸಿನಿಮಾವಾಗಿದೆ. ಈ ಸಿನಿಮಾವನ್ನು ನಿರ್ಮಾಣ ಮಾಡುವುದರ ಜೊತೆಗೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲೂ ರಾಕ್‌ಲೈನ್ ವೆಂಕಟೇಶ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ.

Shivarajkumar and Prabhu Deva's 'Kuladalli Keelayavudu' to go on floors  this month | Kannada Movie News - Times of India

ಈ ಚಿತ್ರದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ, ತೆಲುಗು ಸಾಹಿತಿ ತನಿಕೆಳ್ಳ ಭರಣಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಪ್ರಮುಖ ಪಾತ್ರ ಇವರದ್ದಾಗಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಎಂಟ್ರಿ ಕೊಡಲಿದ್ದಾರೆ. ತನಿಕೆಳ್ಳ ಭರಣಿ ಜತೆಗೆ ಇನ್ನಷ್ಟು ಪ್ರಮುಖ ಕಲಾವಿದರು ನಟಿಸಲಿದ್ದಾರೆ. ಹಾಗಾಗಿ ಇದು ಬಹು ಭಾಷೆಯಲ್ಲಿ ಬಿಡುಗೆಯಾಗುವ ಸಿನಿಮಾ ಎನ್ನಲಾಗಿದೆ. ಪ್ರಭುದೇವ ಇರುವುದರಿಂದ ಎಲ್ಲಾ ಭಾಷೆಯಲ್ಲಿಯೂ ಬಿಡುಗಡೆ ಮಾಡಬಹುದು.

Shivarajkumar and Prabhu Deva next is titled as Kuladalli Keelyaavudu |  Kannada Movie News - Times of India

ಇನ್ನು, ಈ ಹಿಂದೆ ‘ರಾಜಕುಮಾರ’, ‘ಆರೆಂಜ್‌’, ‘ಜೇಮ್ಸ್‌’ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ಪ್ರಿಯಾ ಆನಂದ್‌, ಈಗ ಯೋಗರಾಜ್ ಭಟ್ ಅವರ ಈ ಬಿಗ್ ಬಜೆಟ್ ಸಿನಿಮಾಕ್ಕೂ ಆಯ್ಕೆಯಾಗಿದ್ದಾರೆ. ಹಾಗೆಯೇ ಕನ್ನಡದ ಪ್ರತಿಭಾವಂತ ನಟಿ ನಿಶ್ವಿಕಾ ನಾಯ್ಡು ಕೂಡ ಈ ಸಿನಿಮಾದ ಭಾಗವಾಗಿದ್ದಾರೆ. ಈ ಹಿಂದೆ 'ಗಾಳಿಪಟ 2' ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಯೋಗರಾಜ್‌ ಭಟ್ ನಿರ್ದೇಶನದ ಸಿನಿಮಾದಲ್ಲಿ ನಾಯಕಿಯಾಗುತ್ತಿದ್ದಾರೆ. ಆದರೆ ಇವರಿಬ್ಬರಲ್ಲಿ ಯಾರು ಯಾರಿಗೆ ನಾಯಕಿ ಎಂಬುದು ರಿವೀಲ್‌ ಆಗಿಲ್ಲ.

ಅಂದಹಾಗೆ, ಇದು ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆ. ಈ ಕಥೆಯಲ್ಲಿಇಬ್ಬರೂ ನಾಯಕಿಯರು ಹಳ್ಳಿ ಹುಡುಗಿಯರಾಗಿರಲಿದ್ದಾರೆ. ಮೊದಲ ಹಂತದ ಚಿತ್ರೀಕರಣದಲ್ಲಿ ಅವರು ಕೂಡ ಭಾಗಿಯಾಗಿದ್ದಾರೆ.

Shivarajkumar Prabhudeva Starrer New Movie Shooting Starts In Bengaluru.