ಬ್ರೇಕಿಂಗ್ ನ್ಯೂಸ್
19-09-22 03:44 pm Source: Vijayakarnataka ಸಿನಿಮಾ
ನಟ ವಿನೋದ್ ಪ್ರಭಾಕರ್ ಅವರು ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. 'ಲಂಕಾಸುರ' ಎಂಬ ಸಿನಿಮಾವನ್ನು ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಈ ಮಧ್ಯೆ 'ಮಾದೇವ' ಚಿತ್ರದಲ್ಲಿ ವಿನೋದ್ ಬಣ್ಣ ಹಚ್ಚಿದ್ದಾರೆ. ವಿಶೇಷವೆಂದರೆ, ಈ ಸಿನಿಮಾಗೆ ಈಗ ಹೊಸ ಕಲಾವಿದರೊಬ್ಬರ ಎಂಟ್ರಿ ಆಗಿದೆ. ಯಾರವರು? ಶ್ರೀನಗರ ಕಿಟ್ಟಿ. ಹೌದು, ಸಣ್ಣ ಗ್ಯಾಪ್ ಬಳಿಕ ಶ್ರೀನಗರ ಕಿಟ್ಟಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೊಸ ಹೊಸ ರೀತಿಯ ಪಾತ್ರಗಳ ಮೂಲಕ ಪ್ರಯೋಗ ಮಾಡುತ್ತಿದ್ದಾರೆ. ಸದ್ಯ 'ಮಾದೇವ' ಸಿನಿಮಾದಲ್ಲಿ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ವಿನೋದ್‌ಗೆ ಕಿಟ್ಟಿ ವಿಲನ್

ನವೀನ್ ರೆಡ್ಡಿ ನಿರ್ದೇಶನದ 'ಮಾದೇವ' ಚಿತ್ರದಲ್ಲಿ ಖಳ ನಾಯಕನಾಗಿ ಕಿಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ 'ಮಾದೇವ' ಸಿನಿಮಾಗೆ 50% ಶೂಟಿಂಗ್ ಮುಕ್ತಾಯಗೊಂಡಿದೆ. ಇದೀಗ ಕಿಟ್ಟಿ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಅವರ ಲುಕ್ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಬಹಿರಂಗಪಡಿಸಿದೆ. ನೈಜ ಘಟನೆಗಳಿಂದ ಸ್ಪೂರ್ತಿ ಪಡೆದ ಈ ಸಿನಿಮಾದ ಕಥೆಯು 1965, 1980 ಮತ್ತು 1999ರ ಕಾಲಘಟ್ಟದಲ್ಲಿ ನಡೆಯಲಿದೆಯಂತೆ. ಹಿಂದೆಂದೂ ಕಂಡಿರದಂತಹ ಲುಕ್‌ನಲ್ಲಿ ವಿನೋದ್ ಪ್ರಭಾಕರ್ ಕಾಣಿಸಿಕೊಳ್ಳಲಿದ್ದಾರಂತೆ. ಈ ಸಿನಿಮಾವನ್ನು ಆರ್. ಕೇಶವ (ದೇವಸಂದ್ರ) ಅವರು ನಿರ್ಮಾಣ ಮಾಡಿದ್ದು, ಸುಮಂತ್ ಎಂಬುವವರು ಸಹ ನಿರ್ಮಾಪಕರಾಗಿ ಕೆಲಸ ಮಾಡಲಿದ್ದಾರೆ. ರಾಧಕೃಷ್ಣ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ನಟಿ ಶ್ರುತಿ ಮತ್ತು ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು 'ರಾಬರ್ಟ್' ಸಿನಿಮಾದಲ್ಲಿ ರಾಘವ್ ಮತ್ತು ತನು ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದ್ದ ವಿನೋದ್ ಪ್ರಭಾಕರ್ ಮತ್ತು ಸೋನಲ್ ಮೊಂಥೆರೋ 'ಮಾದೇವ' ಚಿತ್ರದಲ್ಲೂ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. 'ನಮ್ಮಿಬ್ಬರ ಜೋಡಿಗೆ ಇಷ್ಟು ದೊಡ್ಡ ಮಟ್ಟದ ಜನಪ್ರಿಯತೆ ಸಿಗುತ್ತದೆ ಅಂದುಕೊಂಡಿರಲಿಲ್ಲ. 'ರಾಬರ್ಟ್'ನ ರಾಘವ್-ತನು ಜೋಡಿ ಹಿಟ್ ಆದುದನ್ನು ಕಂಡು ನಿಮ್ಮ ಸಿನಿಮಾಗೆ ಅವರನ್ನೇ ನಾಯಕಿಯನ್ನಾಗಿ ಹಾಕಿಕೊಳ್ಳೋಣ ಎಂದು ಹಲವು ನಿರ್ಮಾಪಕರು ಹೇಳಿದ್ದಾರೆ. ಪಾತ್ರಗಳ ಮೂಲಕ ಜನ ನಮ್ಮನ್ನು ಗುರುತಿಸಿದರೆ ಅದು ನಮಗೆ ಹೆಚ್ಚುವರಿ ಗೌರವ ಸಿಕ್ಕಂತೆ' ಎಂದಿದ್ದರು ವಿನೋದ್ ಪ್ರಭಾಕರ್. ಇದೀಗ 'ಮಾದೇವ' ಸಿನಿಮಾ ಮೂಲಕ ಮತ್ತೊಮ್ಮೆ ಈ ಜೋಡಿ ಒಂದಾಗಿದೆ. ಈ ಸಿನಿಮಾದಲ್ಲಿ 80ರ ದಶಕದ ಮಧ್ಯಮವರ್ಗದ ಹುಡುಗಿ ಸೋನಲ್ ಕಾಣಿಸಿಕೊಳ್ಳಲಿದ್ದಾರೆ. 80ರ ದಶಕದ ಎಮೋಷನಲ್ ಹಾಗೂ ಮಾಸ್ ಎಲಿಮೆಂಟ್ ಕಂಟೆಂಟ್ ಹೊಂದಿರುವ 'ಮಾದೇವ' ಸಿನಿಮಾ ರೈಲು ಮತ್ತು ಜೈಲಿನ ಬ್ಯಾಕ್ ಡ್ರಾಪ್‌ನಲ್ಲಿ ನಡೆಯಲಿದೆ.
ಬಾಹುಬಲಿ, ಆರ್‌ಆರ್‌ಆರ್ ಸಿನಿಮಾಗಳ ಛಾಯಾಗ್ರಾಹಕ ಸೆಂಥಿಲ್ ಕುಮಾರ್ ಬಳಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಾಲಕೃಷ್ಣ ತೋಟ 'ಮಾದೇವ' ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರದ್ಯೋತ್ತನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ಬೆಂಗಳೂರು, ಶಿವಮೊಗ್ಗ, ಧಾರಾವಾಡ, ಹೈದರಾಬಾದ್‌ನಲ್ಲಿ ಈ ಸಿನಿಮಾಗೆ ಶೂಟಿಂಗ್ ನಡೆಯಲಿದೆ.
ಸಾಲು ಸಾಲು ಸಿನಿಮಾಗಳಲ್ಲಿ ಕಿಟ್ಟಿ
ಇನ್ನು, ಶ್ರೀನಗರ ಕಿಟ್ಟಿ ಕೂಡ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಅವರ 'ಗೌಳಿ' ಚಿತ್ರ ಟೀಸರ್‌ನಿಂದಲೇ ಸಖತ್ ಸದ್ದು ಮಾಡುತ್ತಿದೆ. ಅದೇ ರೀತಿ 'ವೀರಂ' ಚಿತ್ರದಲ್ಲೂ ಕಿಟ್ಟಿ ಬಣ್ಣ ಹಚ್ಚಿದ್ದಾರೆ. ಹೀರೋ, ವಿಲನ್ ಎನ್ನದೇ ಪಾತ್ರಗಳಿಗೆ ಮನ್ನಣೆ ನೀಡುತ್ತ, ಸಾಲು ಸಾಲು ಸಿನಿಮಾಗಳಲ್ಲಿ ಶ್ರೀನಗರ ಕಿಟ್ಟಿ ಸಕ್ರಿಯರಾಗಿದ್ದಾರೆ.
Srinagar Kitty Plays Antagonist In Vinod Prabhakar Sonal Monteiros Maadeva Movie.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm