ಬ್ರೇಕಿಂಗ್ ನ್ಯೂಸ್
07-10-22 12:19 pm Source: Vijayakarnataka ಸಿನಿಮಾ
ಈ ಹಿಂದೆ '1st Rank ರಾಜು' ಸಿನಿಮಾ ಮುಖೇನ ಗಮನಸೆಳೆದವರು ನಿರ್ದೇಶಕ ನರೇಶ್ ಕುಮಾರ್. ಆನಂತರ ಅವರು ಆ ಸಿನಿಮಾವನ್ನು ತೆಲುಗಿನಲ್ಲೂ ಮಾಡಿದರು. ಕನ್ನಡದಲ್ಲಿ 'ರಾಜು ಕನ್ನಡ ಮೀಡಿಯಂ' ಸಿನಿಮಾ ಮಾಡಿದ ನಂತರ ಕೊಂಚ ಕಾಲ ಬ್ರೇಕ್ ತೆಗೆದುಕೊಂಡಿದ್ದ ಅವರು, ಈಗ ಸ್ಯಾಂಡಲ್‌ವುಡ್‌ಗೆ ಮರಳಿದ್ದಾರೆ. ಈ ಬಾರಿ ತಮ್ಮ ಜೊತೆಗೆ 'ಸೌತ್ ಇಂಡಿಯನ್ ಹೀರೋ' ಕರೆದುಕೊಂಡು ಬಂದಿದ್ದಾರೆ. ಯಾರಪ್ಪ ಅದು ಸೌತ್ ಇಂಡಿಯನ್ ಹೀರೋ ಅಂತ ಕನ್ಫ್ಯೂಸ್ ಆಗಬೇಡಿ. ಅವರೀಗ 'ಸೌತ್ ಇಂಡಿಯನ್ ಹೀರೋ' ಅನ್ನೋ ಮಾಡಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಕೂಡ ಮುಗಿಸಿ, ರಿಲೀಸ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ತಮ್ಮ ಪತ್ನಿ ಶಿಲ್ಪಾ ಜೊತೆ ಸೇರಿ ಅವರೇ ಹಣವನ್ನು ಹಾಕಿದ್ದಾರೆ. ಈಚೆಗೆ ಈ ಸಿನಿಮಾದ ಟೀಸರ್ ಅನ್ನು ರಿಲೀಸ್ ಮಾಡಲಾಗಿದೆ.
ಈ ಚಿತ್ರದಲ್ಲಿ ಹೀರೋ ಆಗಿ ಸಾರ್ಥಕ್ ನಟಿಸಿದ್ದು, ನಾಯಕಿಯರಾಗಿ ಕಾಶಿಮಾ ಹಾಗೂ ಊರ್ವಶಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕುರಿತು ಮಾಹಿತಿ ಹಂಚಿಕೊಳ್ಳುವ ನರೇಶ್, 'ದಕ್ಷಿಣ ಭಾರತ ಚಿತ್ರರಂಗದ ಎಲ್ಲಾ ಹೀರೋಗಳನ್ನು ಸ್ಪೂರ್ತಿಯಾಗಿ ಇಟ್ಟುಕೊಂಡು ಈ ಕಥೆಯನ್ನು ಹೆಣೆದಿದ್ದೇನೆ. ನಾಯಕನ ಪಾತ್ರದಲ್ಲಿ ಎಲ್ಲಾ ಸ್ಟಾರ್ ಹೀರೋಗಳನ್ನು ಕಾಣಬಹುದಾಗಿದೆ. ಭೌತಶಾಸ್ತ್ರದ ಶಿಕ್ಷಕ ಲಾಜಿಕ್ ಲಕ್ಷ್ಮಣ್‌ರಾವ್ ಸಿನಿಮಾರಂಗಕ್ಕೆ ಬರುತ್ತಾನೆ. ಚಿತ್ರರಂಗದ ಯಾವುದೇ ಸಂಪರ್ಕವಿಲ್ಲದ ಆತ ಹೇಗೆ ಚಿತ್ರರಂಗಕ್ಕೆ ಬರುತ್ತಾನೆ? ಬಂದಮೇಲೆ ಏನೆಲ್ಲ ಸಂಕಷ್ಟ ಎದುರಿಸುತ್ತಾನೆ ಎನ್ನುವುದೇ ಚಿತ್ರದ ಕಂಟೆಂಟ್. ನಾಯಕನ ಪಾತ್ರಕ್ಕೆ ಮೂರು ಶೇಡ್‌ಗಳಿವೆ. ಒಂದರಲ್ಲಿ ಹಳ್ಳಿಯ ಬ್ಯಾಕ್‌ಡ್ರಾಪ್ ಇದ್ದರೆ, ಮತ್ತೊಂದು ಸಿಟಿಯ ಹಿನ್ನೆಲೆಯಲ್ಲಿರುತ್ತದೆ. ಇನ್ನೊಂದು ಸ್ಪೆಷಲ್ ಗೆಟಪ್ ಕೂಡ ಚಿತ್ರದಲ್ಲಿದೆ' ಎನ್ನುತ್ತಾರೆ.
'ಹೀರೋಯಿಸಂ ಆಧರಿಸಿ ಫನ್ನಿ ಘಟನೆಗಳನ್ನು ಇಟ್ಟುಕೊಂಡು ಮಾಡಿರುವ ಚಿತ್ರವಿದು. ಇಮೇಜ್ ಇಲ್ಲದ ಒಬ್ಬ ನಾಯಕ ಮುಂದೆ ದೊಡ್ಡ ನಾಯಕನಾಗಿ ಏನೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಾನೆಂದು ಚಿತ್ರದ ಮೂಲಕ ಹೇಳಿದ್ದೇನೆ. ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆಯಿದೆ' ಎಂದು ನರೇಶ್ ಹೇಳಿದರು. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿದ್ದಾರೆ.
'ಅವನು ಮತ್ತೆ ಶ್ರಾವಣಿ' ಧಾರಾವಾಹಿ ಮೂಲಕ ಫೇಮಸ್ ಆಗಿರುವ ಸಾರ್ಥಕ್ ಈ ಸಿನಿಮಾದ ಹೀರೋ. 'ನಾನು ಧಾರಾವಾಹಿಗಳಲ್ಲಿ ಅಭಿನಯಿಸಿದ್ದೆ. ಆದರೆ ಇದೊಂದು ವಿಭಿನ್ನವಾದ ಪಾತ್ರ, ಪಂಚಿಂಗ್ ಡೈಲಾಗ್‌ಗಳನ್ನು ನಿರ್ದೇಶಕ ನರೇಶ್ ಕುಮಾರ್ ಅವರು ನನಗೆ ಕೊಟ್ಟಿದ್ದಾರೆ. ಲಾಜಿಕ್
ಲಕ್ಷ್ಮಣ್‌ರಾವ್ ಎಲ್ಲಾ ವಿಷಯಗಳನ್ನು ಲಾಜಿಕ್‌ನಲ್ಲಿ ನೋಡುತ್ತಾನೆ. ಅವನು ಸಿನಿಮಾಗೆ ಬಂದನಂತರ ಮುಂದೇನಾಗುತ್ತದೆ ಎನ್ನುವುದು ಕಥೆಯ ತಿರುಳು..' ಎಂದು ಮಾಹಿತಿ ನೀಡಿದರು ಸಾರ್ಥಕ್.
ಚಿತ್ರದ ನಾಯಕಿ ಕಾಶಿಮಾ, 'ಈ ಚಿತ್ರದಲ್ಲಿ ನಾನು ಹಳ್ಳಿಯ ಶಿಕ್ಷಕಿ ಮಾನಸಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಉತ್ತರ ಕರ್ನಾಟಕ ಭಾಷೆಯನ್ನು ಮಾತನಾಡಿದ್ದೇನೆ' ಎಂದರು. ಚಿತ್ರಕ್ಕೆ ಹಣ ಹಾಕಿರುವ ನಿರ್ಮಾಪಕಿ ಶಿಲ್ಪಾ ಮಾತನಾಡಿ, 'ಈ ಕಥೆ ಕೇಳಿದಾಗ ತುಂಬಾ ಇಷ್ಟವಾಯಿತು, ನನ್ನ ಫೆಂಡ್ಸ್ ಎಲ್ಲರೂ ಸೇರಿ ಬಂಡವಾಳ ಹಾಕಿ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ' ಎಂದರು.
ಈ ಸಿನಿಮಾದಲ್ಲಿ ತನಿಖಾಧಿಕಾರಿ ಪಾತ್ರವನ್ನು ಗುರು ಎಂಬುವವರು ಮಾಡಿದ್ದಾರೆ. ನಿರ್ದೇಶಕನಾಗಿ ವಿಜಯ್ ಚೆಂಡೂರು ಕಾಣಿಸಿಕೊಂಡಿದ್ದಾರೆ. ಅಮಿತ್, ಅಶ್ವಿನ್‌ರಾವ್ ಪಲ್ಲಕ್ಕಿ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಚಿತ್ರದ ಹಾಡುಗಳಿಗೆ ಹರ್ಷವರ್ಧನ್ ಸಂಗೀತ ಸಂಯೋಜಿಸಿದ್ದಾರೆ. 'ಸೌತ್ ಇಂಡಿಯನ್ ಹೀರೋ' ಸಿನಿಮಾದಲ್ಲಿ 5 ಹಾಡುಗಳಿವೆ. ರಾಜಶೇಖರ್ ಹಾಗೂ ಪ್ರವೀಣ್ ಎಸ್. ಅವರ ಛಾಯಾಗ್ರಹಣ ಈ ಚಿತ್ರಕ್ಕಿದ್ದು, ನರೇಶ್‌ಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
Saarthak Kaashima Starrer South Indian Hero Movie Movie Concept Teaser Released.
16-01-25 05:30 pm
HK News Desk
Sp Belagavi, Minister Laxmi Hebbalkar car acc...
15-01-25 09:17 pm
ಮುಡಾ ಪ್ರಕರಣ ; ಸಿಬಿಐ ತನಿಖೆ ಕೋರಿದ್ದ ಅರ್ಜಿ ಜ.27ಕ...
15-01-25 08:22 pm
Dolly Chaiwala, Mangalore; ಅಮೆರಿಕದ ಬಿಲ್ ಗೇಟ್ಸ...
15-01-25 06:37 pm
Minister Zameer Ahmed, Bangalore; ಹಸು ಕೆಚ್ಚಲು...
15-01-25 06:21 pm
16-01-25 09:01 pm
HK News Desk
Actor Saif Ali Khan attack stabbed: ಬಾಲಿವುಡ್...
16-01-25 04:24 pm
Bonnie Blue: 12 ಗಂಟೆಯಲ್ಲಿ 1,000ಕ್ಕೂ ಅಧಿಕ ಪುರು...
15-01-25 10:51 pm
Mallikarjun Kharges, L N T chairman: ಕಾಂಗ್ರೆಸ...
15-01-25 10:06 pm
ಮಹಾ ಕುಂಭ ಮೇಳಕ್ಕೆ ಗೂಗಲ್ ಪುಷ್ಪ ವೃಷ್ಟಿ ! ಮೊಬೈಲ್...
14-01-25 07:18 pm
16-01-25 10:12 pm
Mangalore Correspondent
Mangalore News, Shaheen death: ಶಟ್ಲ್ ಆಡುತ್ತಿದ...
16-01-25 03:54 pm
Mangalore, MP Brijesh Chowta: ಪಾಕಿಸ್ತಾನಕ್ಕೆ ಜ...
16-01-25 12:58 pm
Udupi Yakshagana News, Police ಅನುಮತಿ ಇಲ್ಲದೆ ರ...
15-01-25 10:47 pm
Banner, Nalin Kumar Kateel, D V Sadananda Gow...
15-01-25 08:01 pm
16-01-25 03:10 pm
HK News Desk
Fake Stock Market scam, Mangalore, Police: ನಕ...
15-01-25 11:06 pm
Kerala rape News: ಇನ್ಸ್ಟಾಗ್ರಾಂನಲ್ಲಿ ಪರಿಚಯ, ರ...
14-01-25 10:40 pm
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm