ಬ್ರೇಕಿಂಗ್ ನ್ಯೂಸ್
09-10-22 01:24 pm HK News Desk ಸಿನಿಮಾ
ಪುನೀತ್ ರಾಜ್‌ಕುಮಾರ್ ನಟನೆಯ `ಗಂಧದ ಗುಡಿ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಅದಕ್ಕೂ ಮುಂಚೆ ಚಿತ್ರದ ಟ್ರೈಲರ್ ಮೂಲಕ ಅಪ್ಪು ಎಲ್ಲರನ್ನೂ ಮಂತ್ರಮುಗ್ಧರನ್ನಾಗಿಸಿದ್ದಾರೆ. ಇದೀಗ ಈ ಚಿತ್ರದ ಟ್ರೈಲರ್ ನೋಡಿ ಪ್ರಧಾನಿ ನರೇಂದ್ರ ಮೋದಿ ಕೂಡ ಮೆಚ್ಚುಗೆ ಸೂಚಿಸಿದ್ದಾರೆ.
ಅಪ್ಪು ನಟನೆಯ ಕೊನೆಯ ಸಿನಿಮಾ `ಗಂಧದಗುಡಿ' ಟ್ರೈಲರ್ ರಿಲೀಸ್ ಆಗಿ, ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ವಿವ್ಸ್ ಗಿಟ್ಟಿಸಿಕೊಳ್ಳುತ್ತಿದೆ. `ಗಂಧದಗುಡಿ’ ಟ್ರೈಲರ್ ನೋಡಿ ಪ್ರತಿಯೊಬ್ಬರು ಅಪ್ಪುನ ನೋಡಿ ಭಾವುಕರಾಗಿದ್ದಾರೆ. ಅಪ್ಪು ಹೃದಯಕ್ಕೆ ಹತ್ತಿರವಾಗಿರುವ ಈ ಪ್ರಾಜೆಕ್ಟ್ ಬಗ್ಗೆ ಅಶ್ವೀನಿ ಪುನೀತ್ ರಾಜ್‌ಕುಮಾರ್ ಅವರು ಮೋದಿ ಅವರಿಗೆ ಟ್ರೈಲರ್ ಲಿಂಕ್ ಶೇರ್ ಮಾಡಿ, ಟ್ವೀಟ್ ಮಾಡಿದ್ದರು. ಇದೀಗ ಚಿತ್ರದ ಟ್ರೈಲರ್ ನೋಡಿ ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರು ಮೆಚ್ಚುಗೆ ಸೂಚಿದ್ದಾರೆ.
ಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ ಅಪ್ಪು ಪ್ರತಿಭೆಗೆ ಯಾರು ಸರಿಸಾಟಿಯಿಲ್ಲ. `ಗಂಧದಗುಡಿ’ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯಕ್ಕೆ ಅರ್ಪಣೆ. ಚಿತ್ರತಂಡದ ಪ್ರಯತ್ನಕ್ಕೆ ನನ್ನ ಶುಭಹಾರೈಕೆಗಳು ಎಂದು ಪ್ರಧಾನಿ ಮೋದಿ ಅವರು ಟ್ರೈಲರ್ ನೋಡಿ ಹೊಗಳಿದ್ದಾರೆ. ಟ್ವೀಟ್ ಮೂಲಕ ಶುಭಹಾರೈಸಿದ್ದಾರೆ.
ಇನ್ನೂ ಪುನೀತ್ ನಟನೆಯ ಕೊನೆಯ ಸಿನಿಮಾ `ಗಂಧದಗುಡಿ’ ಇದೇ ಅಕ್ಟೋಬರ್ 28ಕ್ಕೆ ಕನ್ನಡ, ಇಂಗ್ಲೀಷ್ ಮತ್ತು ಹಿಂದಿಯಲ್ಲಿ ತೆರೆಕಾಣುತ್ತಿದೆ. ಪವರ್ ಸ್ಟಾರ್ ಆಗಿ ಅಲ್ಲ, ಪುನೀತ್ ರಾಜ್‌ಕುಮಾರ್ ಆಗಿ ಸಾಕ್ಷ್ಯ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಅಪ್ಪು ಬರಲಿದ್ದಾರೆ.
ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು. https://t.co/VTimdGmDAM
— Narendra Modi (@narendramodi) October 9, 2022
Puneeth Rajkumar’s wife Ashwini shared the trailer of his last film GG Gandhada Gudi and mentioned that it was close to the actor’s heart. Ashwini addressed her tweet to Prime Minister Narendra Modi on social media and said the actor would have really wished to share the trailer with him. Ashwini has also co-produced the film which has been directed by Amoghavarsha.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm