ಬ್ರೇಕಿಂಗ್ ನ್ಯೂಸ್
25-10-22 03:28 pm Source: Vijayakarnataka ಸಿನಿಮಾ
ನಟ ವಿಜಯ ರಾಘವೇಂದ್ರ ( Vijay Raghavendra ) ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಯುವ ಪ್ರತಿಭೆ ಸಿದ್ಧ್ರುವ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ಮರೀಚಿ’ ಎಂಬ ಚಿತ್ರಕ್ಕೆ ಚಿನ್ನಾರಿ ಮುತ್ತ ಗ್ರೀನ್ ಸಿಗ್ನಲ್ ಕೊಟ್ಟಿದ್ದು ಸದ್ಯದಲ್ಲೇ ಸಿನಿಮಾ ಸೆಟ್ಟೇರಲಿದೆ.
‘ಮರೀಚಿ’ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಿಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ . ‘ಮರೀಚಿ’ ಕಥೆ ಕೇಳಿ ವಿಜಯ ರಾಘವೇಂದ್ರ ಕೂಡ ಇಂಪ್ರೆಸ್ ಆಗಿದ್ದು ಯುವ ನಿರ್ದೇಶಕನ ಜೊತೆ ಸಿನಿಮಾ ಮಾಡಲು ಕೈ ಜೋಡಿಸಿದ್ದಾರೆ. ಇದೇ ತಿಂಗಳಾಂತ್ಯಕ್ಕೆ ಸಿನಿಮಾ ಸೆಟ್ಟೇರಲಿದ್ದು, ಅದಕ್ಕೂ ಮುನ್ನ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲು ನಿರ್ದೇಶಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ಚಿತ್ರದಲ್ಲಿ ವಿಜಯ ರಾಘವೇಂದ್ರ ಜೋಡಿಯಾಗಿ ನಟಿ ಸೋನು ಗೌಡ ನಟಿಸುತ್ತಿದ್ದು. ಅಭಿ ದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ನವೆಂಬರ್‌ನಲ್ಲಿ 'ಮರೀಚಿ' ಚಿತ್ರೀಕರಣ ಆರಂಭಗೊಳ್ಳಲಿದ್ದು, ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಮಂಗಳೂರು ಸೇರಿದಂತೆ ಹಲವು ಕಡೆ ಸಿನಿಮಾ ಸೆರೆ ಹಿಡಿಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಶೀಘ್ರದಲ್ಲೇ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ.
'ಕಾಸಿನ ಸರ' ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಜೋಡಿಯಾಗಿ ಹರ್ಷಿಕಾ ಪೂಣಚ್ಚ ನಟಿಸುತ್ತಿದ್ದಾರೆ. 'ಈ ಚಿತ್ರದಲ್ಲಿ ಅವರ ಪಾತ್ರದ ಹೆಸರು ಸಂಪಿಗೆ. ಕೃಷಿ ವಿದ್ಯಾರ್ಥಿನಿಯಾಗಿ ಹರ್ಷಿಕಾ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರದಲ್ಲಿ ಕಾಸಿನ ಸರ ಎನ್ನುವುದು ಬರೀ ಆಭರಣವಲ್ಲ. ಗ್ರಾಮೀಣ ಭಾಗದಲ್ಲಿ ಕಾಸಿನ ಸರಕ್ಕೆ ಅದರದ್ದೇ ಆದ ಮಹತ್ವವಿದೆ. ಅದು ಬರೀ ಆಡಂಬರವಲ್ಲ. ಅದಕ್ಕೊಂದು ಒಳಾರ್ಥವಿದೆ. ಅದರ ಜೊತೆಗೆ ರೈತರ ಸಮಸ್ಯೆಗಳೂ ಇವೆ. ಈ ಚಿತ್ರದಲ್ಲಿ ಸುಂದರೇಶ ಎಂಬ ರೈತ ಹೋರಾಟಗಾರನಾಗಿ ವಿಜಯ್ ರಾಘವೇಂದ್ರ ಕಾಣಿಸಿಕೊಳ್ಳಲಿದ್ದಾರೆ. ವ್ಯವಸಾಯದ ಮೇಲೆ ಭರವಸೆ ಇಟ್ಟು ಬರುವ ಯುವಕನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.
Actor Vijay Raghavendra Sonu Gowda Starrer Mareechi Movie.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm