ಬ್ರೇಕಿಂಗ್ ನ್ಯೂಸ್
07-11-22 01:38 pm Source: Vijayakarnataka ಸಿನಿಮಾ
'ಸ್ಯಾಂಡಲ್‌ವುಡ್ ಕ್ವೀನ್' ರಮ್ಯಾ ಅವರು 'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ರೀ-ಎಂಟ್ರಿ ನೀಡಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಕೊನೇ ಗಳಿಗೆಯಲ್ಲಿ ಆ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿಲ್ಲ ಎಂಬುದು ಗೊತ್ತಾಯಿತು. ಹಾಗಾದರೆ ರಮ್ಯಾ ಯಾವ ಸಿನಿಮಾದಿಂದ ಕಮ್‌ಬ್ಯಾಕ್ ಮಾಡಲಿದ್ದಾರೆ ಎಂಬುದಕ್ಕೆ ಸಿಕ್ಕ ಉತ್ತರ, 'ಉತ್ತರಕಾಂಡ'. ಹೌದು, ಧನಂಜಯ ಹೀರೋ ಆಗಿರುವ 'ಉತ್ತರಕಾಂಡ' ಸಿನಿಮಾಗೆ ರಮ್ಯಾ ನಾಯಕಿ. ಸದ್ಯ ಈ ಸಿನಿಮಾದ ಮುಹೂರ್ತ ನೆರವೇರಿದ್ದು, ಈ ಚಿತ್ರದಲ್ಲಿ ನಟಿಸುವ ಕುರಿತು ರಮ್ಯಾ ಸಖತ್ ಎಕ್ಸೈಟ್ ಆಗಿದ್ದಾರೆ. 'ಸ್ಕ್ರಿಪ್ಟ್ ಚಿಂದಿಯಾಗಿದೆ... ಇನ್ ಮ್ಯಾಲಿಂದ ಫುಲ್ ಗುದ್ದಾಮ್ ಗುದ್ದಿ..' ಅಂತ ಹೇಳಿಕೊಂಡಿದ್ದಾರೆ.
'ಹತ್ತು ವರ್ಷಗಳ ನಂತರ ‘ಉತ್ತರಕಾಂಡ’ದ ಮೂಲಕ ನಾನು ಬೆಳ್ಳಿ ಪರದೆಗೆ ಹಿಂತಿರುಗುತ್ತಿದ್ದೇನೆ. ಈ ಹಿಂದೆ ‘ರತ್ನನ್ ಪ್ರಪಂಚ’ದಲ್ಲಿ ಮಾಡೋಕಾಗ್ಲಿಲ್ಲ ಅನ್ನೋ ಬೇಸರ ಇತ್ತು. ಆದ್ರೆ ಈಗ ಅದೇ ತಂಡದ ಜೊತೆ ಸಿನೆಮಾ ಮಾಡ್ತಿರೋದು ತುಂಬಾ ಸಂತೋಷದ ವಿಚಾರ. ಸ್ಕ್ರಿಪ್ಟ್ ಚಿಂದಿಯಾಗಿದೆ. ಧನು, ಕಾರ್ತಿಕ್, ಯೋಗಿ ಇತ್ತೀಚಿನ ದಿನಗಳಲ್ಲಿ ನನಗೆ ಬಹಳ ಹತ್ತಿರವಾದೋರು ಹಾಗೂ ತುಂಬಾ ಆಪ್ತರು ಕೂಡ. ರೋಹಿತ್ ಪದಕಿ, ಅರವಿಂದ್ ಕಶ್ಯಪ್, ಚರಣ್ ರಾಜ್, ವಿಶ್ವಾಸ್, ದೀಪು.. ಈ ದೈತ್ಯ ಪ್ರತಿಭೆಗಳ ಜೊತೆ ಕೆಲಸ ಮಾಡಲು ಕಾಯ್ತಾ ಇದ್ದೀನಿ.. ಮುಂದಿನ ವರ್ಷದ ಆರಂಭದಲ್ಲಿ ಚಿತ್ರೀಕರಣ ಶುರುವಾಗಲಿದೆ.. ತುದಿಗಾಲಲ್ಲಿದ್ದೇನೆ. ನಿಮ್ಮ ಪ್ರೀತಿಗೆ ಚಿರಋಣಿ.. ಇನ್ ಮ್ಯಾಲಿಂದ ಫುಲ್ ಗುದ್ದಾಮ್ ಗುದ್ದಿ....' ಎಂದು ರಮ್ಯಾ ಹೇಳಿಕೊಂಡಿದ್ದಾರೆ.
'ನನಗೆ ಅತ್ಯಂತ ಆಪ್ತವಾದ ಸಿನಿಮಾ ರತ್ನನ್ ಪ್ರಪಂಚ. ಅಂತಹ ಒಳ್ಳೆಯ ಸಿನಿಮಾ ತಂಡದ ಜೊತೆ ಕೈ ಜೋಡಿಸಿ ಬೆಳ್ಳಿಪರದೆಗೆ ಹಿಂತಿರುಗುತ್ತಿರುವುದು ನನಗೆ ಸಂತೋಷ ತಂದಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಮತ್ತು ತಂಡದವರೆಲ್ಲರು ನನ್ನ ಮೇಲೆ ತೋರುತ್ತಿರುವ ಅಭಿಮಾನ ಹಾಗು ಬಾಂಧವ್ಯ ಒಂದು ಒಳ್ಳೇ ಜಾಗದಲ್ಲಿದ್ದೀನಿ ಅನ್ನೋ ಭಾವನೆ ಕೊಟ್ಟಿದೆ..' ಎಂದು ರಮ್ಯಾ ಹೇಳಿಕೊಂಡಿದ್ದಾರೆ.
ವಿಜಯ್ ಕಿರಗಂದೂರು ಅರ್ಪಿಸುತ್ತಿರುವ ‘ಉತ್ತರಕಾಂಡ’ ಚಿತ್ರವವನ್ನು ಕೆ.ಆರ್.ಜಿ ಸಂಸ್ಥೆಯ ಕಾರ್ತಿಕ್ ಮತ್ತು ಯೋಗಿ ಜಿ ರಾಜ್ ನಿರ್ಮಾಣ ಮಾಡುತ್ತಿದ್ಧಾರೆ. 'ರತ್ನನ್ ಪ್ರಪಂಚ' ಖ್ಯಾತಿಯ ರೋಹಿತ್ ಪದಕಿ ‘ಉತ್ತರಕಾಂಡ’ ಚಿತ್ರವವನ್ನು ನಿರ್ದೇಶನ ಮಾಡುತ್ತಿದ್ದಾರೆ. ನವೆಂಬರ್ 6ರಂದು ಮಧ್ಯಾಹ್ನ 3.22ಕ್ಕೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿದೆ.
'ಒಂದೇ ದಿಕ್ಕಿನಲ್ಲಿ ಆಲೋಚಿಸುವವರು ಒಟ್ಟಿಗೆ ಸೇರಿ, ನಿಸ್ವಾರ್ಥವಾಗಿ ಸಿನಿಮಾಕ್ಕಾಗಿ, ಒಬ್ಬರು ಇನ್ನೊಬ್ಬರಿಗಾಗಿ ಕೊಡುಗೆ ನೀಡಿದಾಗ ಅದ್ಭುತಗಳು ಸಂಭವಿಸುತ್ತವೆ ಎಂದು ನಾನು ನಂಬಿದ್ದೇನೆ. ಅದೆ ರೀತಿ ಆಗಿದ್ದು, ಮೈಲಿಗಲ್ಲಾಗಿದ್ದು 'ರತ್ನನ್ ಪ್ರಪಂಚ'. ರೋಹಿತ್ ಪದಕಿಯಂತಹ ನಿರ್ದೇಶಕ ಘಟನ ಜೊತೆ ಎರಡನೆ ಪ್ರಯತ್ನ, ಕಾರ್ತಿಕ್ ಹಾಗು ಯೋಗಿಯಂತಹ ನಿರ್ಮಾಪಕ ಘಟರ ಜೊತೆ ಸತತವಾಗಿ ಮೂರನೇ ಪ್ರಯತ್ನ, ಇನ್ನೊಂದು ಮೈಲಿಗಲ್ಲಿನ ಕಡೆ ಮತ್ತೊಂದು ದಿಟ್ಟ ಹೆಜ್ಜೆ 'ಉತ್ತರಕಾಂಡ. ರಮ್ಯಾ ಅವರ ಜೊತೆ ನಟಿಸುತ್ತಿರುವುದು ಖುಷಿ ಕೊಟ್ಟಿದೆ. ನನ್ನ ಮೇಲೆ ನಂಬಿಕೆಯಿಟ್ಟು ನನ್ನ ಶಕ್ತಿಯಾಗಿ ನಿಂತಿರುವ ಕನ್ನಡ ಕುಲಕೋಟಿಗೆ ನನ್ನ ಹೃದಯಪೂರ್ವಕ ನಮನಗಳು. ಹೀಗೆ ಜೊತೆಗಿರಿ, ತಪ್ಪಾದಾಗ ತಿದ್ದಿ, ಗೆಲುವಾಗುವಂತೆ ಹರಸಿ, ಮೆರೆಸಿ..' ಎಂದು ಧನಂಜಯ ಹೇಳಿದ್ದಾರೆ.
ಈ ಸಿನಿಮಾದ ಶೂಟಿಂಗ್ 2023ರ ಜನವರಿಯಲ್ಲಿ ಶುರುವಾಗುವ ಸಾಧ್ಯತೆ ಇದೆ. ಸಂಗೀತ ನಿರ್ದೇಶನವನ್ನು ಚರಣ್ ರಾಜ್ ಮಾಡುತ್ತಿದ್ದು, ಅರವಿಂದ್ ಕಶ್ಯಪ್ ಛಾಯಾಗ್ರಹಣ ಮಾಡುತ್ತಿದ್ದಾರೆ.
Actress Ramya Post On Dhananjays Uttarakaanda Movie.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am