ಬ್ರೇಕಿಂಗ್ ನ್ಯೂಸ್
19-01-23 01:35 pm Source: news18 ಸಿನಿಮಾ
ಉಡುಪಿ, ಜ.19: ಒಂದು ಕಾಲದ ಖ್ಯಾತ ಚಿತ್ರನಟಿ, ಸ್ಯಾಂಡಲ್‌ವುಡ್‌ನಲ್ಲಿ ಹವಾ ಎಬ್ಬಿಸಿದ್ದ ಕೊಡಗಿನ ಬೆಡಗಿ ಪ್ರೇಮಾ ಅವರು ತನಗೆ ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನಲ್ಲಿ ಬೇಡಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ್ದ ಪ್ರೇಮಾ, ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ವರನನ್ನು ನೋಡಿದ್ದೇವೆ, ಅದೇ ವರನನ್ನು ಮದುವೆ ಆಗುವಂತೆ ಆಶೀರ್ವಾದ ಮಾಡಿʼʼ ಎಂದು ಕೊರಗಜ್ಜನ ಮುಂದೆ ಪ್ರೇಮಾ ಪ್ರಾರ್ಥನೆ ಸಲ್ಲಿಸಿದರು. ಪ್ರೇಮಾ ಅವರ ಜೊತೆ ಅನು ಅಯ್ಯಪ್ಪ ಮತ್ತು ಇತರ ಬಂಧುಗಳು ಇದ್ದರು.
1996ರಿಂದ ಸುಮಾರು ಹತ್ತು ವರ್ಷಗಳ ಕನ್ನಡ, ತೆಲುಗು ಸಿನಿಮಾದಲ್ಲಿ ನಟಿಸಿದ್ದ ಪ್ರೇಮಾ ಬಹುಬೇಡಿಕೆಯ ನಟಿಯಾಗಿದ್ದರು. 2009ರಲ್ಲಿ ಕೊಡಗಿನ ಉದ್ಯಮಿ ಜೀವನ್ ಅಪ್ಪಚ್ಚು ಅವರೊಂದಿಗೆ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರವಾಗಿದ್ದರು. ಕೆಲವು ವರ್ಷ ಜೊತೆಗಿದ್ದ ದಂಪತಿ ಆನಂತರ ವಿರಸಗೊಂಡು ಬೇರೆಯಾಗಿದ್ದರು.
ಈ ನಡುವೆ, ಪ್ರೇಮಾ ಅವರ ಕೂದಲು ಉದುರಿದ್ದನ್ನು ಗಮನಿಸಿದ ಕೆಲವರು ಅವರಿಗೆ ಕ್ಯಾನ್ಸರ್ ರೋಗದ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ತನಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದಿದ್ದರು. ಇದೇ ವೇಳೆ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದರು. ಈ ನಡುವೆ ನಟಿ ಪ್ರೇಮಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌ನಲ್ಲೂ ನೆಲೆಸಿದ್ದರು. ಇದೀಗ ತಾನೂ ಮದುವೆಯಾಗಬೇಕು ಎಂಬ ಇಂಗಿತವನ್ನು ದೇವರ ಮುಂದಿಟ್ಟಿದ್ದಾರೆ.
Popular Telugu and Kannada film actor Prema on Tuesday visited Kapu Udupi Sri Hosa Marigudi Temple and Karanika Koragajja’s Daivasthana and offered prayers to the deities.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm