ಬ್ರೇಕಿಂಗ್ ನ್ಯೂಸ್
24-02-23 02:15 pm Source: news18 ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ರಾಜಕೀಯ ಚಟುವಟಿಗಳು ಗರಿಗೆದರಿದೆ. ಇತ್ತೀಚೆಗೆ ಅಭ್ಯರ್ಥಿಗಳಿಗಾಗಿ ಪರೀಕ್ಷೆಯನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಶುಭಸುದ್ದಿ ಶೇರ್ ಮಾಡಿದ್ದಾರೆ ನಟ. ಉಪ್ಪಿ ಪಾಲಿಟಿಕ್ಸ್ ಗ್ರೌಂಡ್ಗೆ ಬಂದು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ.
ಈ ಪಕ್ಷದಿಂದ ಪಂಚಾಯತಿ ಚುನಾವಣೆ ಎದುರಿಸಿದ್ದರು. ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಅಂತೂ ಉಪ್ಪಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ.


ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ನಟ ಬರೆದಿದ್ದಾರೆ. ನಟ ಇದರ ಫೋಟೋ ಕೂಡಾ ಶೇರ್ ಮಾಡಿದ್ದು ಅದರಲ್ಲಿ ಆಟೋ ರಿಕ್ಷಾ (ಆಂಧ್ರಪ್ರದೇಶ ಹಾಗೂ ತೆಲಂಗಾಣವನ್ನು ಹೊರತುಪಡಿಸಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ) ಎಂದು ಬರೆಯಲಾಗಿದೆ.


ನಟ ಈ ಸುದ್ದಿಯನ್ನು ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು ಹಾಗೂ ಫಾಲೋವರ್ಸ್ನಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಫೊಟೋ ನೋಡಿದ ಜನರು ಅದನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ.
Sandalwood Real star Upendra Uttama Prajaakeeya party gets Autorickshaw Symbol.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm