ಬ್ರೇಕಿಂಗ್ ನ್ಯೂಸ್
28-03-23 02:30 pm Source: news18 ಸಿನಿಮಾ
ನಯನತಾರಾ ಸೌತ್ ಇಂಡಸ್ಟ್ರಿಯಲ್ಲಿ ದಶಕಗಳಿಂದ ಮಿಂಚಿತ್ತಿರುವ ನಟಿ. ಟಾಲಿವುಡ್, ಕಾಲಿವುಡ್, ಸ್ಯಾಂಡಲ್ವುಡ್ ಸಿನಿಮಾಗಳಲ್ಲಿ ಅಭಿನಯಿಸಿರುವ ನಯನತಾರಾಗೆ ಅಪಾರ ಅಭಿಮಾನಿ ಬಳಗ ಇದೆ. ನಯನತಾರಾ ಸಿನಿಮಾಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ನಯನತಾರಾ ಸದ್ಯ ಬಾಲಿವುಡ್ಗೆ ಎಂಟ್ರಿ ಕೊಡ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಕಿಂಗ್ ಖಾನ್ ಶಾರುಖ್ ಜೊತೆ ನಟಿಸುವ ಅವಕಾಶ ನಯನತಾರಾಗೆ ಸಿಕ್ಕಿದ್ದು, ನಟಿ ಕೂಡ ಫುಲ್ ಖುಷ್ ಆಗಿದ್ದಾರೆ. ಶಾರುಖ್ ಖಾನ್ ಜೊತೆ ನಟಿ ಒಳ್ಳೆಯ ಸ್ನೇಹ ಕೂಡ ಹೊಂದಿದ್ದಾರೆ.


ನಿರ್ದೇಶಕ ಅಟ್ಲಿ ಅವರ 'ಜವಾನ್' ಚಿತ್ರದಲ್ಲಿ ನಯನತಾರಾ ಮತ್ತು ಶಾರುಖ್ ಖಾನ್ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಈ ಜೋಡಿಯನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಜವಾನ್ ಸಿನಿಮಾದಲ್ಲಿ ಶಾರುಖ್ ಖಾನ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ. ಈ ನಡುವೆ ನಯನತಾರಾ ಬಗ್ಗೆ ಒಂದು ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಕೆಲ ವರ್ಷಗಳಿಂದ ನಯನತಾರಾ ನಟಿಗೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ನಯನತಾರಾ ತಮ್ಮ ಬಾಲಿವುಡ್ ಚೊಚ್ಚಲ ಚಿತ್ರಕ್ಕಾಗಿ ದೊಡ್ಡ ಹೆಜ್ಜೆ ಇಡುತ್ತಿದ್ದಾರೆ.


ಸೌತ್ ನಟಿ ನಯನತಾರಾ, ಶಾರುಖ್ ಖಾನ್ ಅವರ ಚಿತ್ರಕ್ಕಾಗಿ ತಾವು 16 ವರ್ಷಗಳಿಂದ ಮಾಡಿಕೊಂಡಿದ್ದ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರಂತೆ. ಬಾಲಿವುಡ್ ಸಿನಿಮಾಗಳಲ್ಲಿ ನಟಿಯರು ಹೆಚ್ಚಾಗಿ ಗ್ಲಾಮರಸ್ ಆಗಿ ಕಾಣಿಸಿಕೊಳ್ತಾರೆ. ಜವಾನ್ ಸಿನಿಮಾದಲ್ಲಿ ನಟಿ ನಯನತಾರಾ ಕೂಡ ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಸಿನಿಮಾದಲ್ಲಿ ನಯನತಾರಾ ಬಿಕಿನಿ ತೊಡಲಿದ್ದಾರೆ ಎನ್ನಲಾಗಿದೆ. ಸಿನಿಮಾಗಾಗಿ ಬಿಕಿನಿ ತೊಡಲು ನಟಿ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.


ಶಾರುಖ್ ಅಭಿನಯದ ಇತ್ತೀಚಿನ ಸಿನಿಮಾ ಪಠಾಣ್ ಸಿನಿಮಾದಲ್ಲಿ ಕೇಸರಿ ಬಿಕಿನಿ ತೊಟ್ಟು ದೀಪಿಕಾ ಪಡುಕೋಣೆ ದೊಡ್ಡ ವಿವಾದಕ್ಕೆ ಸಿಲುಕಿದ್ರು. ಇದೀಗ ಮತ್ತೆ ಶಾರುಖ್ ಸಿನಿಮಾದಲ್ಲಿ ನಯನತಾರಾ ಬಿಕಿನಿ ತೊಡಲು ರೆಡಿಯಾಗಿದ್ದಾರೆ. ನಯನತಾರಾ ಕೂಡ ತುಂಬಾ ಯೋಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗ್ತಿದೆ. ಮದುವೆ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಯನತಾರಾ ಬ್ಯುಸಿ ಆಗಿದ್ದಾರೆ. ನಟಿ ಕೂಡ ಶಾರುಖ್ ಜೊತೆಗಿನ ಜವಾನ್ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದಾರೆ.
nayanthara will break her 16 year rule for shahrukh khan film wear bikini.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm