ಬ್ರೇಕಿಂಗ್ ನ್ಯೂಸ್
21-04-23 01:04 pm Source: news18 ಸಿನಿಮಾ
ಟಾಲಿವುಡ್‌ನ ಐಟಿ ರೈಡ್‌ಗಳು ಉದ್ಯಮ ವಲಯದಲ್ಲಿ ಸಂಚಲನ ಮೂಡಿಸುತ್ತಿದೆ. ಅದರಲ್ಲೂ ಟಾಲಿವುಡ್ ಖ್ಯಾತ ನಿರ್ದೇಶಕ ಸುಕುಮಾರ್ ನಿವಾಸದ ಮೇಲೆ ಹಾಗೂ ಬೃಹತ್ ಚಿತ್ರ ನಿರ್ಮಾಣ ಸಂಸ್ಥೆಯಾಗಿರುವ ಮೈತ್ರಿ ಮೂವಿ ಮೇಕರ್ಸ್ ಕಚೇರಿಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದು ಪುಷ್ಪಾ-2 ಮೇಲೆ ಇದರ ಪರಿಣಾಮ ಬಿದ್ದಂತಿದೆ. ಐಟಿ ಅಧಿಕಾರಿಗಳ ದಾಳಿಯಿಂದ ಪುಷ್ಪ 2 ಸಿನಿಮಾದ ಶೂಟಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂಬ ಮಾತು ಕೇಳಿ ಬರುತ್ತಿದೆ. ವೈಜಾಗ್ನಲ್ಲಿ ನಡೆಯುತ್ತಿರುವ ಈ ಸಿನಿಮಾದ ಚಿತ್ರೀಕರಣವನ್ನು ನಿರ್ಮಾಪಕರು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲು ಅರ್ಜುನ್ ಮತ್ತು ಇತರ ಕೆಲವು ಫಾರಿನ್ ಫೈಟರ್ಸ್ಗಳ ಅದ್ಧೂರಿ ಆ್ಯಕ್ಷನ್ ಸೀಕ್ವೆನ್ಸ್ ಚಿತ್ರೀಕರಣವನ್ನು ಪ್ರಾರಂಭಿಸಿದ್ದ ಸುಕುಮಾರನ್ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ.
ಆದಾಯ ಇಲಾಖೆ ದಾಳಿಯಿಂದ ಮೈತ್ರಿ ಮೂವಿ ಮೇಕರ್ಸ್‌ಗೆ ಸಂಬಂಧಿಸಿದ ಎಲ್ಲಾ ರೀತಿಯ ಹಣಕಾಸಿನ ವಹಿವಾಟು ಮತ್ತು ಶೂಟಿಂಗ್ ಅನ್ನು ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ. ಈ ಐಟಿ ದಾಳಿ ವಿಚಾರ ಎಲ್ಲವೂ ಕ್ಲಿಯರ್ ಆದ ಮೇಲೆಯೇ ಮತ್ತೆ ಶೂಟಿಂಗ್ ಶುರುವಾಗಲಿದೆ. ಇದಕ್ಕೆ ಇನ್ನೂ ಕೆಲವು ದಿನಗಳು ಬೇಕು ಎನ್ನಲಾಗಿದೆ. ಇದರಿಂದ ಪುಷ್ಪ 2ಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಅಲ್ಲು ಅರ್ಜುನ್-ಸುಕುಮಾರ್ ಜೋಡಿಯ ಯಶಸ್ವಿ ಕಾಂಬಿನೇಷನ್ ಸಿನಿಮಾ ಪುಷ್ಪ ಭರ್ಜರಿ ಯಶಸ್ಸು ಕಂಡ ನಂತರ ಬನ್ನಿ ಅಭಿಮಾನಿಗಳು ಈ ಸಿನಿಮಾದ ಮುಂದುವರಿದ ಭಾಗವಾಗಿ ಬರುತ್ತಿರುವ ಪುಷ್ಪ 2 ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪುಷ್ಪ: ದಿ ರೂಲ್ ಎಂಬ ಟೈಟಲ್ನ ಈ ಸಿನಿಮಾದ ಮೇಲೆ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಆಗಿದೆ.
ಈ ಹಿನ್ನಲೆಯಲ್ಲಿ ಪುಷ್ಪ 2 ಬಗ್ಗೆ ಆಗಾಗ ರಿಲೀಸ್ ಆಗುತ್ತಿರುವ ಅಪ್ಡೇಟ್ಗಳು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುವುದಲ್ಲದೆ ಸಿನಿಮಾದ ಮೇಲಿನ ಕುತೂಹಲವನ್ನು ಹೆಚ್ಚಿಸುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌ಗಳು ಚಿತ್ರದ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ. ಅದ್ಧೂರಿ ತಾರಾಗಣದೊಂದಿಗೆ ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ಥ್ರಿಲ್ ಮಾಡಲು ಸುಕುಮಾರ್ ಈ ಚಿತ್ರವನ್ನು ಮಾಡುತ್ತಿದ್ದಾರೆ. ಈ ಪ್ರತಿಷ್ಠಿತ ಸಿನಿಮಾದಲ್ಲಿ ಹಿರಿಯ ನಾಯಕ ಜಗಪತಿ ಬಾಬು ಅವರ ಪಾತ್ರ ಪ್ರಮುಖ ಆಕರ್ಷಣೆಯಾಗಲಿದೆಯಂತೆ. ಈಗಾಗಲೇ ಜಗಪತಿ ಬಾಬು ಚಿತ್ರೀಕರಣಕ್ಕೆ ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಸದ್ಯಕ್ಕೆ ಪ್ಯಾನ್ ಇಂಡಿಯಾ ಇಮೇಜ್ ಎಂಜಾಯ್ ಮಾಡುತ್ತಿರುವ ಅಲ್ಲು ಅರ್ಜುನ್ಗೆ ಪ್ಯಾನ್ ವರ್ಲ್ಡ್ ಕ್ರೇಜ್ ಆಗುವಂತೆ ಮಾಡಲು ಸುಕುಮಾರ್ ಪ್ಲಾನ್ ಮಾಡಿದ್ದಾರೆ. ಈ ಪುಷ್ಪ 2 ಸಿನಿಮಾ ವಿಶ್ವದರ್ಜೆಯ ಗುಣಮಟ್ಟದಲ್ಲಿ ತಯಾರಾಗುತ್ತಿದೆ. ಇದಲ್ಲದೆ, ಸುಕುಮಾರ್ ಏಕಕಾಲಕ್ಕೆ 20 ಕ್ಕೂ ಹೆಚ್ಚು ದೇಶಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದಾರೆ. ಪುಷ್ಪ ಮೊದಲ ಭಾಗದಲ್ಲಿ ಶ್ರೀವಲ್ಲಿಯಾಗಿ ಕಾಣಿಸಿಕೊಂಡು ಯುವ ಪ್ರೇಕ್ಷಕರ ಮನ ಕದ್ದ ನಾಯಕಿ ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ಮತ್ತಷ್ಟು ವಿಶೇಷವಾಗಲಿದ್ದಾರೆ. ಅಲ್ಲದೇ ಅನಸೂಯಾ ಜೊತೆ ಐಟಂ ಸಾಂಗ್ ಪ್ಲಾನ್ ಮಾಡಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ.
ಪುಷ್ಪ-2 ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ ಜನಪ್ರಿಯ ಮನರಂಜನಾ ಸಂಸ್ಥೆ 900 ಕೋಟಿ ಆಫರ್ ಮಾಡಿರುವುದು ಕೂಡಾ ಸುದ್ದಿಯಾಗಿದೆ. ಆದರೆ ನಿರ್ಮಾಪಕರು 1050 ಕೋಟಿ ಕೇಳುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಶೂಟಿಂಗ್ ನಡೆಯುತ್ತಿರುವಾಗಲೇ ಈ ಚಿತ್ರಕ್ಕೆ ಇಷ್ಟೊಂದು ದೊಡ್ಡ ಆಫರ್ ಬಂದಿರುವುದು ಚರ್ಚೆಗೆ ಗ್ರಾಸವಾಗಿದೆ. ಶೀಘ್ರದಲ್ಲೇ ಪುಷ್ಪ 2 ಚಿತ್ರೀಕರಣವನ್ನು ಪೂರ್ಣಗೊಳಿಸಲು ತಯಾರಕರು ಯೋಜಿಸುತ್ತಿದ್ದಾರೆ. ಈ ಸಿನಿಮಾದ ಇಂಟ್ರೊ ಸಾಂಗ್ ನಲ್ಲಿ ವಿಶೇಷ ಕಾಳಜಿ ವಹಿಸಿದ್ದ ಸುಕುಮಾರ್ ಈ ಹಾಡನ್ನು ಅಲ್ಲು ಅರ್ಜುನ್ ಅವರ ಕೆರಿಯರ್ ನಲ್ಲಿ ಬೆಸ್ಟ್ ಆಗುವಂತೆ ಪ್ಲಾನ್ ಮಾಡಿದ್ದಾರೆ. ಭಾರೀ ಬಜೆಟ್‌ನಲ್ಲಿ ಈ ಹಾಡನ್ನು ಚಿತ್ರೀಕರಿಸಲಾಗುತ್ತಿದೆ ಎಂದು ವರದಿಯಾಗಿದೆ.
pushpa 2 shooting stopped as it raids at sukumar home.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm