ಮಂಡ್ಯದಲ್ಲಿ ಅಲ್ಲ ಬೆಂಗಳೂರಲ್ಲೇ ಅದ್ಧೂರಿ ಆರತಕ್ಷತೆ, ಅಭಿಷೇಕ್ ಅಂಬರೀಷ್ ಮದುವೆ ಆಮಂತ್ರಣ ಪತ್ರಿಕೆ ವೈರಲ್

29-05-23 01:23 pm       Source: news18   ಸಿನಿಮಾ

ಅಭಿಷೇಕ್ ಅಂಬರೀಷ್ ಹಾಗೂ ಮಾಡೆಲ್ ಅವಿವ ಬಿದ್ದಪ್ಪ ಮದುವೆಗೆ ಮುಹೂರ್ತ ನಿಗದಿ ಆಗಿದೆ. ಜೂನ್ 5 ರಂದು ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ನಡೆಯಲಿದೆ. ಜೂನ್ 7ರಂದು ಆರತಕ್ಷತೆ ಸಮಾರಂಭ ಏರ್ಪಡಿಸಲಾಗಿದೆ.

ಶೀಘ್ರದಲ್ಲೇ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಲಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿದ್ದಪ್ಪ ಮದುವೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇಂದು (ಮೇ.29) ಅಂಬಿ ಹುಟ್ಟುಹಬ್ಬವಾದ ಹಿನ್ನೆಲೆ ಸಮಾಧಿ ಬಳಿ ಮದುವೆ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ್ರು. ಸೋಶಿಯಲ್ ಮೀಡಿಯಾದಲ್ಲಿ ಅಭಿಷೇಕ್ ಹಾಗೂ ಅಂಬರೀಷ್–ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರೆಟಿಗಳು ಯಂಗ್ ರೆಬಲ್ ಸ್ಟಾರ್​ಗೆ  ಶುಭ ಕೋರಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಕಳೆದ ವರ್ಷ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬಸ್ಥರು, ಆಪ್ತರು ಹಾಗೂ ಕೆಲ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ.

 ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ.

Abishek Ambareesh and Aviva Bidapa To Get Engaged in December – Reports |  🎥 LatestLY

ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಂಡ್ಯದಲ್ಲಿ ಅದ್ಧೂರಿ ಆರತಕ್ಷತೆ ನಡೆಯುತ್ತದೆ ಎಂದು ಸುದ್ದಿಯಾಗಿತ್ತು. ಆದ್ರೆ ಕಾರ್ಯಕ್ರಮ ಬೆಂಗಳೂರಲ್ಲೇ ನಡೆಯಲಿದೆ. ಜೂನ್ 16 ರಂದು ಮಂಡ್ಯದಲ್ಲಿ ಬೀಗರ ಊಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೀಗರ ಔತಣಕೂಟಕ್ಕೆ ಸುಮಾರು 1 ಲಕ್ಷ ಜನರು ಸೇರುವ ಸಾಧ್ಯತೆ ಇದೆ. 1ಲಕ್ಷಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.

Abhishek Ambareesh-Aviva Marriage :ಅಭಿಷೇಕ್ ಅಂಬರೀಷ್ - ಅವಿವಾ ಮದುವೆ  ಬೆಂಗಳೂರಿನಲ್ಲಿ ಜೂನ್ 7 ಕ್ಕೆ, ಮಂಡ್ಯದಲ್ಲಿ ಬೀಗರ ಊಟ !

Abishek Ambareesh gets engaged to Aviva Bidappa- Cinema express

ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ಈ ಜೋಡಿ, ಬಹು ದಿನಗಳ ಸ್ನೇಹಿತರೇ ಆಗಿದ್ದಾರೆ. ಈ ಬಗ್ಗೆ ಎಲ್ಲೂ ಅಭಿ ಹೇಳಿಕೊಂಡಿರಲಿಲ್ಲ. ಅವಿವಾ ಕೂಡ ಏನೂ ಎಲ್ಲೂ ಹೇಳಿರಲಿಲ್ಲ. ಆದರೆ ಇವರ ಸ್ನೇಹ ಎಂಗೇಜ್‌ಮೆಂಟ್ ಟೈಮ್‌ ಅಲ್ಲಿಯೇ ರಿವೀಲ್ ಆಯಿತು. ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್‌ಮ್ಯಾನರ್ಸ್ ರಿಲೀಸ್‌ಗೆ ರೆಡಿ ಆಗುತ್ತಿದೆ. ಕಾಳಿ ಸಿನಿಮಾವನ್ನ ಕೂಡ ಅಭಿಷೇಕ್ ಈಗಾಗಲೇ ಒಪ್ಪಿಕೊಂಡಿದ್ದಾರೆ.

abhishek ambareesh and aviva bidapa marriage invitation card viral.