ಬ್ರೇಕಿಂಗ್ ನ್ಯೂಸ್
05-07-23 01:40 pm Source: News18 Kannada ಸಿನಿಮಾ
ನಿಹಾರಿಕಾ ಕೊನಿಡೇಲಾ ಹಾಗೂ ಚೈತನ್ಯ ಪರಸ್ಪರ ಸಮ್ಮತಿಯೊಂದಿಗೆ ವಿಚ್ಛೇದನೆ ಪಡೆದಿದ್ದಾರೆ. ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರ ಕುಟುಂಬದ ನಿಹಾರಿಕಾ ಅವರ ದಾಂಪತ್ಯ ಜೀವನದ ಬಿರುಕಿನ ಬಗ್ಗೆ ಕೆಲವು ತಿಂಗಳಿಂದಲೇ ಚರ್ಚೆ ನಡೆಯುತ್ತಿತ್ತು. ಇದೀಗ ವಿಚ್ಛೇದನೆಯೂ ಆಗಿದ್ದು ಇದೇ ಮೊದಲಬಾರಿಗೆ ತೆಲುಗು ನಟಿ, ನಿಹಾರಿಕಾ ತಮ್ಮ ಡಿವೋರ್ಸ್ ಬಗ್ಗೆ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್ ಶೇರ್ ಮಾಡುವಾಗ ನಟಿ ಕಮೆಂಟ್ ಟರ್ನ್ ಆಫ್ ಮಾಡಿದ್ದು ಯಾರೂ ಕೂಡಾ ನಟಿಯ ಪೋಸ್ಟ್ಗೆ ಪ್ರತಿಕ್ರಿಯಿಸಲು ಸಾಧ್ಯವಾಗುತ್ತಿಲ್ಲ.
ಚೈತನ್ಯ ಹಾಗೂ ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮ್ಮ ಬದುಕಿನಲ್ಲಿ ಮುಂದೆ ಸಾಗಲು ನೀವು ನಮಗೆ ಕರುಣೆ ತೋರಿಸಿ ವರ್ತಿಸಬೇಕು. ಈ ಸಂದರ್ಭ ನಮ್ಮ ಬೆಂಬಲವಾಗಿ ನಿಂತ ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಧನ್ಯವಾದಗಳು. ನಾನು ಈ ಸಂದರ್ಭ ನಮ್ಮ ಮುಂದಿನ ಬದುಕಿನಲ್ಲಿ ಮಂದುವರಿಯಲು ಸ್ವಲ್ಪ ಖಾಸಗಿತನವನ್ನು ಕೇಳುತ್ತಿದ್ದೇನೆ. ಅರ್ಥ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಬರೆದಿದ್ದಾರೆ. ಇಬ್ಬರೂ ಏಪ್ರಿಲ್ 1 ರಂದು ವಿಚ್ಛೇದನಕ್ಕೆ ಅರ್ಜಿ ಕೋರಿ ಕುಕಟ್ ಪಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಜೂನ್ 5 ರಂದು ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರಿಗೆ ನ್ಯಾಯಾಲಯ ವಿಚ್ಛೇದನ ನೀಡಿದೆ ಎಂದು ವರದಿಯಾಗಿದೆ. ಈ ಮೂಲಕ ಮತ್ತೊಮ್ಮೆ ಸೆಲೆಬ್ರಿಟಿ ಜೋಡಿ ವಿಚ್ಛೇದನ ವಿಚಾರ ಚರ್ಚೆಗೆ ಗ್ರಾಸವಾಗಿದೆ.


ತೆಲುಗು ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಜೋಡಿಯ ವಿಚ್ಛೇದನೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನಿಹಾರಿಕಾ ಅವರು ಸದ್ಯ ಡಿವೋರ್ಸ್ನಿಂದ ಹೊರಗೆಬಂದು ಸಿನಿಮಾಗಳತ್ತ ಹೆಚ್ಚು ಗಮನ ಕೊಡುತ್ತಿದ್ದಾರೆ. ನಿಹಾರಿಕಾ ಡಿಸೆಂಬರ್ 2020 ರಲ್ಲಿ ಚೈತನ್ಯ ಜೊನ್ನಲಗಡ್ಡ ಅವರನ್ನು ವಿವಾಹವಾದರು. ಮತ್ತು ಅಂದಿನಿಂದ ವೈವಾಹಿಕ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ ಅನಿರೀಕ್ಷಿತವಾಗಿ ಇವರಿಬ್ಬರ ವಿಚ್ಛೇದನ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ನೆಟ್ಟಿಗರು ಮಾಡಿದ ವದಂತಿ ನಿಜವಾಯಿತು.


ನಿಹಾರಿಕಾ ಹೈದರಾಬಾದ್‌ನ ಕುಕಟ್‌ಪಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಬ್ಬರೂ ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಇತ್ತೀಚೆಗೆ ನ್ಯಾಯಾಲಯ ಅವರಿಗೆ ವಿಚ್ಛೇದನ ನೀಡಿದೆಯಂತೆ. ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಸೋಷಿಯಲ್ ಮೀಡಿಯಾದಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದಾಗಿನಿಂದ ವಿಚ್ಛೇದನದ ಅನುಮಾನಗಳು ಪ್ರಾರಂಭವಾದವು.
Niharika Konidela shares Divorce news with Fans turn off comment Section.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm