ಬ್ರೇಕಿಂಗ್ ನ್ಯೂಸ್
27-11-23 04:08 pm HK News Desk ಸಿನಿಮಾ
ಬೆಂಗಳೂರು, ನ.27: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರ ಭಾಗ- 2ರ ಟೀಸರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ಮೂಡಿಬರಲಿರುವ ಚಿತ್ರದ ಫಸ್ಟ್ ಲುಕ್ ಭಾರೀ ಕುತೂಹಲ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಶೆಟ್ಟಿ ಘೋರ ರೂಪದಲ್ಲಿ ಕಂಡಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಕೊಡಲಿಯನ್ನು ಹಿಡಿದಿರುವ ರಿಷಬ್ ಪೋಸ್ಟರ್ ನಾನಾ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಟೀಸರ್ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್‌ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಎರಡರ ಚಿತ್ರಕಥೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಏಳುನೂರು ವರ್ಷಗಳ ಹಿಂದೆ ಆಳಿದ್ದ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್ ಅನ್ನು ಹೊಂಬಾಳೆ ತಂಡ ಬಣ್ಣಿಸಿದೆ.
ರಿಷಬ್ ಶೆಟ್ಟಿ ಅವರು ಉಗ್ರಾವತಾರ ತಾಳಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಇದೆ. ಅವರು ಬಾವಿಯಲ್ಲಿ ನಿಂತಂತೆ ಕಂಡಿದೆ. ಮೇಲ್ಭಾಗದಲ್ಲಿ ಬೆಂಕಿ ಇದೆ. ಅವರ ಮೇಲೆ ಯಾರೋ ದಾಳಿ ಮಾಡಲು ಬರುತ್ತಿದ್ದಾರೆ. ಕನ್ನಡದ ಜೊತೆ ಏಳು ಭಾಷೆಗಳಲ್ಲಿ ಟೀಸರ್ ಲಭ್ಯವಿದೆ. ಯೂಟ್ಯೂಬ್ನಲ್ಲಿ ಇಷ್ಟದ ಆಯ್ಕೆಯ ಭಾಷೆಯಲ್ಲಿ ಟೀಸರ್ ನೋಡಬಹುದು. ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ನೆರವೇರಿಸಿದೆ.
The first look of the highly anticipated film, 'Kantara Chapter 2' has been revealed by the makers, promising an intense and divine cinematic experience. Following the immense success of 'Kantara: A Legend' last year, Hombale Films is set to captivate audiences once again with their latest cinematic masterpiece, 'Kantara Chapter 2'.
20-01-25 07:00 pm
HK News Desk
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
19-01-25 08:17 pm
HK News Desk
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
Actor Saif Ali Khan attack stabbed: ಬಾಲಿವುಡ್...
16-01-25 04:24 pm
20-01-25 11:05 pm
Mangalore Correspondent
Mangalore, Ivan dsouza, CM Siddaramaiah: ಬಹು...
20-01-25 06:00 pm
International Kite Festival 2025, Thannirbhav...
18-01-25 09:27 pm
Mangalore Dinesh Gundu Rao, belthandy: ತಾಲೂಕು...
18-01-25 06:16 pm
CM Siddaramaiah, multicultural fest, Mangalor...
17-01-25 11:10 pm
20-01-25 10:18 pm
HK News Desk
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm
Mysuru Robbery, Bidar Mangalore, Crime; ಬೀದರ್...
20-01-25 01:25 pm
Bidar Bank Robbery, bihar gang, Update: ಬೀದರ್...
19-01-25 07:52 pm