ಬ್ರೇಕಿಂಗ್ ನ್ಯೂಸ್
15-12-23 09:51 am HK News Desk ಸಿನಿಮಾ
ಮುಂಬೈ, ಡಿ 15: ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಗುರುವಾರ ಸಂಜೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಮುಂಬೈನ ಅಂಧೇರಿ ಪ್ರದೇಶದ ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ಶುಕ್ರವಾರ ಆಂಜಿಯೋಪ್ಲಾಸ್ಟಿಗೆ ಒಳಗಾದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ
ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಆಂಜಿಯೋಪ್ಲ್ಯಾಸ್ಟಿ ನಡೆಸಲಾಗಿದೆ ಎಂದು ಆಸ್ಪತ್ರೆ ದೃಢಪಡಿಸಿದ್ದು, ಇದೀಗ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಮತ್ತು ನಟನ ಆರೋಗ್ಯ ಚೆನ್ನಾಗಿದೆ ಎಂದಿದ್ದಾರೆ. ಮುಂಬಯಿಯಲ್ಲಿ ಗುರುವಾರ ಸಂಜೆ ʼವೆಲ್‌ಕಮ್ ಟು ಜಂಗಲ್’ ಚಿತ್ರೀಕರಣದ ವೇಳೆ ಶ್ರೇಯಸ್ ತಲ್ಪಾಡೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.
47 ವರ್ಷದ ಶ್ರೇಯಸ್ ತಲ್ಪಾಡೆ ತಮ್ಮ ಅಭಿನಯ ಪ್ರತಿಭೆಯಿಂದ ಗಮನ ಸೆಳೆದವರು. ಶಾರುಖ್ ಖಾನ್, ಅಕ್ಷಯ್ ಕುಮಾರ್ ಮೊದಲಾದ ಸ್ಟಾರ್‌ಗಳ ಜೊತೆ ತೆರೆ ಹಂಚಿಕೊಂಡು ಮಿಂಚಿದ್ದಾರೆ. ಚಿತ್ರರಂಗಕ್ಕೆ 2002ರಲ್ಲೇ ಕಾಲಿಟ್ಟರು. ‘ಆಂಖೇ’ ಅವರು ನಟಿಸಿದ ಮೊದಲ ಸಿನಿಮಾ. ಆ ಬಳಿಕ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. 2007ರಲ್ಲಿ ರಿಲೀಸ್ ಆದ ‘ಓಂ ಶಾಂತಿ ಓಂ’ ಸಿನಿಮಾದಲ್ಲಿ ಶಾರುಖ್ನ ಗೆಳೆಯನಾಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು. ‘ಗೋಲ್ಮಾಲ್ ರಿಟರ್ನ್ಸ್’, ಗೋಲ್ಮಾಲ್ 3’, ‘ಹೌಸ್ಫುಲ್ 2’ ಅಂಥ ಹಾಸ್ಯ ಪ್ರಧಾನ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದಿದ್ದಾರೆ.
Actor Shreyas Talpade suffered a heart attack on Thursday evening and underwent angioplasty on Friday at Bellevue Hospital in Mumbai's Andheri area. His condition is stable, and the hospital authorities said that he was doing fine. The hospital confirmed that the angioplasty was conducted at around 10 pm earlier today and shared that he is doing fine now. They also shared that the surgery was successful and the actor was doing fine.
14-04-25 09:48 pm
HK News Desk
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
SIT, Probe, Dysp Kanakalakshmi: ಸಿಐಡಿ ಡಿವೈಎಸ್...
14-04-25 02:06 pm
Hubballi rape, Encounter, Crime; ಐದು ವರ್ಷದ ಬಾ...
13-04-25 10:58 pm
14-04-25 11:25 pm
HK News Desk
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
Indian Mujahideen, Yasin Bhatkal: ಹೈದರಾಬಾದ್ ಬ...
10-04-25 09:10 pm
14-04-25 09:20 pm
Mangalore Correspondent
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
12-04-25 10:52 pm
Mangalore Correspondent
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm
Davanagere Murder, Suicide, Crime: ಪ್ರೀತಿಸಿ ಮ...
11-04-25 01:52 pm
Mangalore Auto Driver, Kunjathbail, Body, Cri...
11-04-25 11:42 am