ಬ್ರೇಕಿಂಗ್ ನ್ಯೂಸ್
14-04-24 03:12 pm Bengaluru Correspondent ಸಿನಿಮಾ
ಬೆಂಗಳೂರು, ಏ 14: ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಸಾವನ್ನಪ್ಪಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಅವರ ನಿವಾಸದಲ್ಲೇ ಜಗದೀಶ್ ನಿಧನರಾಗಿದ್ದು, ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸೌಂದರ್ಯ ಜಗದೀಶ್ ಅವರ ಸಾವು ಚಿತ್ರೋದ್ಯಮಕ್ಕೆ ಆಘಾತ ನೀಡಿದ್ದು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ
ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲೇ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದು, ಕೂಡಲೇ ಅವರನ್ನು ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಅಷ್ಟರಲ್ಲಾಗಲೇ ಜಗದೀಶ್ ನಿಧನರಾಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿಖರ ಕಾರಣವೇನು ಎಂಬುದು ಬಹಿರಂಗವಾಗಿಲ್ಲ. ಆದರೆ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, ಈಚೆಗೆ ಆರ್ಥಿಕವಾಗಿ ಜಗದೀಶ್ ತುಂಬ ನಷ್ಟದಲ್ಲಿದ್ದರು ಮತ್ತು ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂಬ ಮಾತುಗಳು ಕೇಳಿಬಂದಿವೆ.
ಚಿತ್ರರಂಗದ ಜೊತೆ ಸೌಂದರ್ಯ ಜಗದೀಶ್ ಒಡನಾಟ ;
ಬಹುತಾರಾಗಣದ 'ಮಸ್ತ್ ಮಜಾ ಮಾಡಿ' ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕರಾಗಿ ಸೌಂದರ್ಯ ಜಗದೀಶ್ ಎಂಟ್ರಿ ನೀಡಿದರು. ಆನಂತರ ಪುತ್ರನಿಗಾಗಿ 'ಅಪ್ಪು ಪಪ್ಪು' ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಪುತ್ರ ಸ್ನೇಹಿತ್ ಅವರನ್ನು ಚಿತ್ರರಂಗದಲ್ಲಿ ಬೆಳೆಸಬೇಕೆಂಬುದು ಅವರ ಗುರಿ ಆಗಿತ್ತು. ಇದರ ಜೊತೆಗೆ 'ಸ್ನೇಹಿತರು', 'ರಾಮ್ ಲೀಲಾ' ಸಿನಿಮಾಗಳನ್ನು ಕೂಡ ಸೌಂದರ್ಯ ಜಗದೀಶ್ ನಿರ್ಮಾಣ ಮಾಡಿದ್ದರು.
ಈಚೆಗಷ್ಟೇ ಮಗಳ ಮದುವೆ ಮಾಡಿದ್ದ ಜಗದೀಶ್ ;
ಜಗದೀಶ್ ಪುತ್ರಿ ಸೌಂದರ್ಯ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಕೆಲ ದಿನಗಳ ಹಿಂದಷ್ಟೇ ಅವರ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದರು. ಈ ಮದುವೆಗೆ ಚಿತ್ರರಂಗದ ಗಣ್ಯರು ಆಗಮಿಸಿದ್ದರು. ಆದರೆ ಮಗಳ ಮದುವೆ ಮಾಡಿ, ತಿಂಗಳು ಕಳೆಯುವುದರೊಳಗೆ ಈ ರೀತಿ ಆಗಿರುವುದು ಬೇಸರದ ಸಂಗತಿಯಾಗಿದೆ.
Renowned Kannada film producer Soundarya Jagadish, known for his contributions to the industry through movies like 'Appu Pappu' and 'Snehitaru', tragically passed away, with early reports suggesting a possible suicide. The incident occurred at his residence in Mahalakshmi Layout, Bangalore, leaving the film fraternity and fans in shock.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm