ಬ್ರೇಕಿಂಗ್ ನ್ಯೂಸ್
16-04-24 12:08 pm HK NEWS ಸಿನಿಮಾ
ಬೆಂಗಳೂರು, ಎ.16: ಕನ್ನಡ ಚಿತ್ರರಂಗದ ಹಿರಿಯ ಕೊಂಡಿ, ಪೋಷಕ ಪಾತ್ರಗಳಲ್ಲಿ ನಟಿಸಿ ಪ್ರಚಂಡ ಕುಳ್ಳ ಎಂಬ ಖ್ಯಾತಿ ಗಳಿಸಿದ್ದ ಹಿರಿಯ ನಟ ದ್ವಾರಕೀಶ್(81) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 1942 ಆಗಸ್ಟ್ 19ರಂದು ಜನಿಸಿದ್ದ ದ್ವಾರಕೀಶ್ ಅವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಮೈಸೂರಿನ ಶಾರದಾ ವಿಲಾಸ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ , ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ಸ್ ಎನ್ನುವ ಶಾಪ್ ಪ್ರಾರಂಭಿಸಿ ವ್ಯವಹಾರ ಕ್ಷೇತ್ರಕ್ಕೆ ಇಳಿದಿದ್ದರು. ಆದರೆ 1963ರಲ್ಲಿ ಅಚಾನಕ್ಕಾಗಿ ವ್ಯಾಪಾರ ಬಿಟ್ಟು ಬಣ್ಣದ ಬದುಕಿಗೆ ಕಾಲಿಟ್ಟರು.
ಕನ್ನಡ ಚಿತ್ರರಂಗದ ಲೆಜೆಂಡ್ ಗಳಾದ ವಿಷ್ಣುವರ್ಧನ್, ಅಂಬರೀಶ್, ರಾಜಕುಮಾರ್ ಜೊತೆಗೆ ಹಲವಾರು ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದ ಕಾಮೆಡಿ ನಟನಾಗಿ ಮಿಂಚಿದ್ದರು. ನಟನಾಗಿ ಉತ್ತುಂಗಕ್ಕೇರಿದ ಬಳಿಕ ನಿರ್ದೇಶನ, ನಿರ್ಮಾಣವನ್ನೂ ಮಾಡಿದ್ದರು. ಹಲವಾರು ಸೂಪರ್ ಹಿಟ್ ಸಿನಿಮಾಗಳಿಗೆ ಬಂಡವಾಳ ಹಾಕುವುದರ ಜೊತೆಗೆ ನಟಿಸಿ ಸೈ ಎನಿಸಿಕೊಂಡಿದ್ದರು. 1966ರಲ್ಲಿ ಮೇಯರ್ ಮುತ್ತಣ್ಣ ಸಿನಿಮಾ ನಿರ್ದೇಶನ ಮಾಡಿದ್ದು ಅವರಿಗೆ ವಿಶೇಷ ಗೌರವ, ಹೆಸರು ತಂದುಕೊಟ್ಟಿತ್ತು.
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ದ್ವಾರಕೀಶ್, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ. ದಿವಂಗತ ನಟ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಚಿತ್ರಗಳಲ್ಲಿ ತೆರೆ ಹಂಚಿಕೊಂಡಿದ್ದರು. 1966ರಲ್ಲಿ ಮಮತೆಯ ಬಂಧನ ಸಿನಿಮಾವನ್ನು ದ್ವಾರಕೀಶ್ ಅವರು ಮತ್ತಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿದ್ದರು. ಆಪ್ತಮಿತ್ರ ಚಿತ್ರದಲ್ಲಿ ದ್ವಾರಕೀಶ್ ಮತ್ತು ವಿಷ್ಣುವರ್ಧನ್ ಅವರ ಸ್ನೇಹ ಬಾಂಧವ್ಯವನ್ನು ಸಹಜವಾಗಿ ಕಟ್ಟಿಕೊಟ್ಟ ಚಿತ್ರವಾಗಿತ್ತು.
Sandalwood actor Dwarakish dies of heart attack in Bangalore . Dwarakanath better known as Dwarakish was an Indian actor, director and producer in the Kannada film industry. He was given the name Dwarakish by Kannada film maker C. V. Shivashankar. Dwarakish was born on 19 August 1942. He grew up in Ittigegud, Mysore.
20-01-25 07:00 pm
HK News Desk
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
19-01-25 08:17 pm
HK News Desk
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
Actor Saif Ali Khan attack stabbed: ಬಾಲಿವುಡ್...
16-01-25 04:24 pm
20-01-25 11:05 pm
Mangalore Correspondent
Mangalore, Ivan dsouza, CM Siddaramaiah: ಬಹು...
20-01-25 06:00 pm
International Kite Festival 2025, Thannirbhav...
18-01-25 09:27 pm
Mangalore Dinesh Gundu Rao, belthandy: ತಾಲೂಕು...
18-01-25 06:16 pm
CM Siddaramaiah, multicultural fest, Mangalor...
17-01-25 11:10 pm
20-01-25 10:18 pm
HK News Desk
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm
Mysuru Robbery, Bidar Mangalore, Crime; ಬೀದರ್...
20-01-25 01:25 pm
Bidar Bank Robbery, bihar gang, Update: ಬೀದರ್...
19-01-25 07:52 pm