ಬ್ರೇಕಿಂಗ್ ನ್ಯೂಸ್
12-12-20 11:06 am Headline Karnataka News Network ಸಿನಿಮಾ
ಕೊಲ್ಕತ್ತಾ, ಡಿ.12: 2020ರಲ್ಲಿ ಬಣ್ಣದ ಲೋಕ ಮತ್ತೋರ್ವ ನಟಿಯನ್ನು ಕಳೆದುಕೊಂಡಿದೆ. ಬಾಲಿವುಡ್ ನ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ಬೆಂಗಾಲಿ ನಟಿ ಆರ್ಯ ಬ್ಯಾನರ್ಜಿ ಕೊಲ್ಕತ್ತಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶುಕ್ರವಾರ ಆರ್ಯ ಮೃತ ದೇಹ ಪತ್ತೆಯಾಗಿದ್ದು, ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
33 ವರ್ಷದ ನಟಿ ಆರ್ಯ ತನ್ನ ಆಪಾರ್ಟ್ಮೆಂಟ್ ನ ಬೆಡ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮನೆ ಕೆಲಸದವರು ಆರ್ಯ ಮನೆಗೆ ಬಂದು ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಬಂದು ಬಾಗಿಲು ಓಪನ್ ಮಾಡಿದಾಗ ಆರ್ಯ ಶವವಾಗಿ ಬಿದ್ದಿದ್ದರು ಎಂದು ತಿಳಿದುಬಂದಿದೆ.
ಆರ್ಯ ಕೊಲ್ಕತ್ತಾದ ಜೋಧ್ಪುರ ಉದ್ಯಾನವನದಲ್ಲಿ ತನ್ನ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
ಆರ್ಯ 2010ರಲ್ಲಿ ಲವ್ ಸೆಕ್ಸ್ ಧೋಖ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ವಿದ್ಯಾ ಬಾಲನ್ ನಟನೆಯ ದಿ ಡರ್ಟಿ ಪಿಕ್ಟರ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ಮಾಡೆಲಿಂಗ್ ನಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ.
Actress Arya Banerjee, who had acted in several movies, was found dead at her south Kolkata residence on Friday. According to the reports, the 33-year-old woman, who came to limelight for her role in ‘The Dirty Picture’, was found dead at her Kolkata residence. The police broke the door of her apartment and found that her body was lying in the bedroom.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm