ಬ್ರೇಕಿಂಗ್ ನ್ಯೂಸ್
04-01-21 02:52 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಜ.4 :ಸುಮಾರು ಐದು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಹಿರಿಯ ಕಲಾವಿದ ಹಿರಿಯ ನಟ ಶನಿಮಹದೇವಪ್ಪ (90 ವರ್ಷ) ಭಾನುವಾರ ಸಂಜೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದೊಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಕೊರೊನಾ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದರು ಎಂದು ಹೇಳಲಾಗಿದೆ. ವರನಟ ಡಾ ರಾಜ್ ಕುಮಾರ್ ಅವರ ಬಹುತೇಕ ಚಿತ್ರಗಳಲ್ಲಿ ಶನಿ ಮಹಾದೇವಪ್ಪ ಅವರು ಇರುತ್ತಿದ್ದರು. ನಾಟಕ, ಸಿನಿಮಾಗಳ ವೈವಿಧ್ಯಮಯ ಪಾತ್ರಗಳ ಮೂಲಕ ಜನರಿಗೆ ಚಿರಪರಿಚಿತರಾಗಿದ್ದ ಕಲಾವಿದ ಇನ್ನಿಲ್ಲ ಎಂಬ ಸುದ್ದಿ ಕೇಳಿ ಸಿನಿಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಅವರ ಕಲಾಸೇವೆ ಚಿರಸ್ಥಾಯಿ ''ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ಕಲಾವಿದರಾದ ಶನಿ ಮಹಾದೇವಪ್ಪನವರ (90 ವರ್ಷ) ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವೆ. ಸರಿ ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿರುವ ಅವರ ಕಲಾಸೇವೆ ಚಿರಸ್ಥಾಯಿ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ'' - ಸುಮಲತಾ ಅಂಬರೀಶ್

ಪುನೀತ್ ಸಂತಾಪ ''ಅಪ್ಪಾಜಿಯವರ ಜೊತೆ ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಕವಿರತ್ನ ಕಾಳಿದಾಸ, ಮೂರೂವರೆ ವಜ್ರಗಳು ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ ಹಿರಿಯ ನಟರಾದ ಶನಿ ಮಹದೇವಪ್ಪನವರು ನಮ್ಮನ್ನು ಅಗಲಿದ್ದಾರೆ'' - ಪುನೀತ್ ರಾಜ್ ಕುಮಾರ್

ಸುದೀಪ್ ಸಂತಾಪ ಹಿರಿಯ ಕಲಾವಿದ, ಅಣ್ಣಾವ್ರ ಚಿತ್ರಗಳಲ್ಲಿ ಹೆಚ್ಚು ನಟಿಸಿರುವ ಶನಿ ಮಹಾದೇವಪ್ಪ ಅವರ ನಿಧನಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಸಂತಾಪ ಸೂಚಿಸಿದ್ದಾರೆ. ತಮ್ಮ ಟ್ವಿಟ್ಟರ್‌ನಲ್ಲಿ ಶನಿ ಮಹಾದೇವಪ್ಪ ಅವರ ಫೋಟೋ ಹಂಚಿಕೊಂಡು ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಮಾವ ಎಂದು ಕರೆಯುತ್ತಿದ್ದೆ- ಜಗ್ಗೇಶ್ ''1984 ರಿಂದ ಬಲ್ಲೆ ಈತನ ಮಾವ ಎಂದು ಕರೆಯುತ್ತಿದ್ದೆ. ಅಣ್ಣನ ಆತ್ಮೀಯ! ಸಕ್ಕರೆ ಖಾಯಿಲೆಯಿಂದ ಎರಡು ಕಣ್ಣು ಕಳೆದುಕೊಂಡಿದ್ದ. 10 ವರ್ಷ ಹಿಂದೆ ಮೇಯರ್ ಫಂಡ್ನಿಂದ ಈತನಿಗೆ ವಿಶೇಷ ಪ್ಯಾಕೇಜ್ 5 ಲಕ್ಷ ಬರುವಂತೆ ಶ್ರಮಿಸಿದ್ದೆ ಹಾಗು ವೈಯಕ್ತಿಕವಾಗಿ ನಾನು ಬ್ಯಾಂಕ್ ಜನಾರ್ದನ ಜೂತೆ ಹೋಗಿ ಕೈಲಾದ ಸಹಾಯ ಮಾಡಿದ್ದೆ. 80 ವರ್ಷ ವಯಸ್ಸು ದಾಟಿದೆ. ಇವರ ಆತ್ಮಕ್ಕೆ ಶಾಂತಿ'' - ಜಗ್ಗೇಶ್
This News Article is a Copy of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm