ಬ್ರೇಕಿಂಗ್ ನ್ಯೂಸ್
05-01-21 12:26 pm Source: FILMIBEAT ಸಿನಿಮಾ
ಕಿರುತೆರೆ ನಟ ಮತ್ತು ಬಿಗ್ ಬಾಸ್ ಖ್ಯಾತಿಯ ನಿಶಾಂತ್ ಸಿಂಗ್ ಮಲ್ಖಾನಿ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ನಿಶಾಂತ್ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರನ್ನು ನಟ ನಿಶಾಂತ್ ಚಲಾಯಿಸುತ್ತಿದ್ದು, ಎದುರುಗಡೆಯಿಂದ ರಾಂಗ್ ಸೈಡ್ ನಲ್ಲಿ ಬಂದ ವಾಹನವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ರಸ್ತೆಯ ಪಕ್ಕದ ಪ್ರಪಾತಕ್ಕೆ ಬಿದ್ದ ಕಾರನ್ನು ಕ್ರೇನ್ ಬಳಸಿ ಮೇಲೆತ್ತಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕಾರಿನಲ್ಲಿ ನಿಶಾಂತ್ ಮತ್ತು ಸ್ನೇಹಿತರು ರಾಜಸ್ಥಾನಕ್ಕೆ ತೆರಳುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಘಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿರುವ ನಿಶಾಂತ, ಯಾರು ಭಯಪಡುವ ಅವಶ್ಯಕತೆ ಇಲ್ಲ. ಸಣ್ಣ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತಾಯಿಯ ಆಶೀರ್ವಾದ ಮತ್ತು ದೇವರ ದಯೆಯಿಂದ ಏನು ಆಗಿಲ್ಲ ಎಂದಿದ್ದಾರೆ.
ಕಾರು ನಾನೆ ಚಲಾಯಿಸುತ್ತಿದ್ದೆ. ಎದುರು ರಾಂಗ್ ಸೈಡ್ ನಿಂದ ವ್ಯಾನ್ ಬರ್ತಿರೊದನ್ನು ನೋಡಿ ಸೈಡ್ ತೆಗೆದುಕೊಳ್ಳಲು ಹೋಗಿ ಕೆಳಗೆ ಉರುಳಿದೆವು. ರಸ್ತೆ ತುಂಬಾ ಕಿರಿದಾಗಿತ್ತು. ನನ್ನ ಜೊತೆ ಇದ್ದ ಸ್ನೇಹಿತರು ಸುರಕ್ಷಿತರಾಗಿದ್ದಾರೆ. ಆದರೆ ನಮ್ಮ ಕಾರಿಗೆ ಹೊಡೆದ ಗಾಡಿ ತಕ್ಷಣ ಎಸ್ಕೇಪ್ ಆಗಿದೆ. ಕಾರಿನನಿಂದ ಹೊರಬಂದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದೆವು' ಎಂದು ನಿಶಾಂತ್ ಅಪಘಾತದ ಬಗ್ಗೆ ವಿವರಿಸಿದ್ದಾರೆ.
ನಿಶಾಂತ್ ಕಳೆದ ವರ್ಷ ಹಿಂದಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮನೆಯಿಂದ ಬೇಗ ಔಟ್ ಆಗಿ ಭಾರಿ ಬೇಸರ ಮಾಡಿಕೊಂಡಿದ್ದರು. ಬಿಗ್ ಮನೆಯಿಂದ ಹೊರಬಂದ ಬಳಿಕ ಬಿಗ್ ಬಾಸ್ ಸಹ ಸ್ಪರ್ಧಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಅಪಘಾತದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm